Psalms · chapter 23 · verse 1
Psalm 23:1 in Kannada
ಕರ್ತನು ನನ್ನ ಕುರುಬನು; ಕೊರತೆಪಡೆನು.
Kartanu nanna kurubanu; koratepadenu.
Psalm 23:1 in English
- King James Version (KJV)
- A Psalm of David. The LORD [is] my shepherd; I shall not want.
- World English Bible (WEB)
- A Psalm by David. The LORD is my shepherd; I shall lack nothing.
- American Standard Version (ASV)
- A Psalm of David. Jehovah is my shepherd; I shall not want.
- Bible in Basic English (BBE)
- A Psalm. Of David. The Lord takes care of me as his sheep; I will not be without any good thing.
- Darby Translation (DBY)
- A Psalm of David. Jehovah is my shepherd; I shall not want.
- Webster's Bible (WBS)
- A Psalm of David. The LORD [is] my shepherd; I shall not want.
- Young's Literal Translation (YLT)
- A Psalm of David. Jehovah [is] my shepherd, I do not lack,
Read in context
- 1ಕರ್ತನು ನನ್ನ ಕುರುಬನು; ಕೊರತೆಪಡೆನು.
- 2ಆತನು ಹಸರುಗಾವಲುಗಳಲ್ಲಿ ನನ್ನನ್ನು ತಂಗುವಂತೆ ಮಾಡುತ್ತಾನೆ. ಶಾಂತವಾದ ನೀರುಗಳ ಪಕ್ಕದಲ್ಲಿ ನನ್ನನ್ನು ನಡಿಸುತ್ತಾನೆ.
- 3ನನ್ನ ಪ್ರಾಣವನ್ನು ಪುನರ್ಜೀವಿಸ ಮಾಡುತ್ತಾನೆ. ನೀತಿಯ ದಾರಿಗಳಲ್ಲಿ ತನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸುತ್ತಾನೆ.
Cross references
- Philippians 4:19 ಫಿಲಿಪ್ಪಿಯವರಿಗೆ 4:19ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
- John 10:11 ಯೋಹಾನನು 10:11ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
- Isaiah 40:11 ಯೆಶಾಯ 40:11ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
- John 10:27–30 ಯೋಹಾನನು 10:27–30ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು. ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- John 10:14 ಯೋಹಾನನು 10:14ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.
- Revelation 7:17 ಪ್ರಕಟನೆ 7:17ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Matthew 6:33 ಮತ್ತಾಯನು 6:33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- 1 Peter 2:25 1 ಪೇತ್ರನು 2:25ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Ezekiel 34:11–12 ಯೆಹೆಜ್ಕೇಲನು 34:11–12ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಹೌದು, ನಾನೇ ನನ್ನ ಕುರಿಗಳನ್ನು ವಿಚಾರಿಸಿ ಅವುಗಳನ್ನು ಹುಡುಕುತ್ತೇನೆ. ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.
- Hebrews 13:5–6 ಇಬ್ರಿಯರಿಗೆ 13:5–6ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ. ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
- Psalm 34:9–10 ಕೀರ್ತನೆಗಳು 34:9–10ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ. ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.
- 1 Peter 5:4 1 ಪೇತ್ರನು 5:4ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.