Psalms · chapter 24 · verse 2
Psalm 24:2 in Kannada
ಆತನು ಅದನ್ನು ಸಮುದ್ರಗಳ ಮೇಲೆ ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರ ಪಡಿಸಿದ್ದಾನೆ.
Aatanu adannu samudragala mele sthaapisi pravaahagala mele adannu sthira padisiddaane.
Psalm 24:2 in English
- King James Version (KJV)
- For he hath founded it upon the seas, and established it upon the floods.
- World English Bible (WEB)
- For he has founded it on the seas, and established it on the floods.
- American Standard Version (ASV)
- For he hath founded it upon the seas, And established it upon the floods.
- Bible in Basic English (BBE)
- For by him it was based on the seas, and made strong on the deep rivers.
- Darby Translation (DBY)
- For it was he that founded it upon seas, and established it upon floods.
- Webster's Bible (WBS)
- For he hath founded it upon the seas, and established it upon the floods.
- Young's Literal Translation (YLT)
- For He on the seas hath founded it, And on the floods He doth establish it.
Read in context
- 1ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
- 2ಆತನು ಅದನ್ನು ಸಮುದ್ರಗಳ ಮೇಲೆ ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರ ಪಡಿಸಿದ್ದಾನೆ.
- 3ಕರ್ತನ ಪರ್ವತವನ್ನು ಹತ್ತುವವನು ಯಾರು? ಇಲ್ಲವೆ ಆತನ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು?
- 4ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ.
Cross references
- Jeremiah 5:22 ಯೆರೆಮೀಯ 5:22ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.
- Psalm 136:6 ಕೀರ್ತನೆಗಳು 136:6ಭೂಮಿಯನ್ನು ನೀರಿನ ಮೇಲೆ ಹಾಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Psalm 104:5–6 ಕೀರ್ತನೆಗಳು 104:5–6ಯುಗಯುಗಾಂತರಗಳಿಗೂ ಅದು ಕದಲದ ಹಾಗೆ ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಆತನು ಸ್ಥಾಪಿಸಿದನು. ನೀನು ಜಲಾಗಾಧದಿಂದ ವಸ್ತ್ರದ ಹಾಗೆ ಅದನ್ನು ಮುಚ್ಚಿದ್ದೀ; ಬೆಟ್ಟಗಳ ಮೇಲೆ ನೀರುಗಳು ನಿಂತವು.
- Genesis 1:9–10 ಆದಿಕಾಂಡ 1:9–10ಆಗ ದೇವರು--ಆಕಾಶದ ಕೆಳಗಿರುವ ನೀರುಗಳು ಒಂದು ಸ್ಥಳದಲ್ಲಿ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ ಅಂದನು. ಅದು ಹಾಗೆಯೇ ಆಯಿತು. ದೇವರು ಒಣನೆಲಕ್ಕೆ ಭೂಮಿಯೆಂದೂ ಒಟ್ಟು ಗೂಡಿದ ನೀರುಗಳಿಗೆ ಸಮುದ್ರಗಳೆಂದೂ ಕರೆದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
- Job 38:4 ಯೋಬನು 38:4ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು.
- Jeremiah 10:11–16 ಯೆರೆಮೀಯ 10:11–16ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು. ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು; ಆತನು ತನ್ನ ಶಬ್ದ ಮಾಡುವಾಗಲೇ ಆಕಾಶ ಗಳಲ್ಲಿ ನೀರುಗಳ ಸಮೂಹವಿರುವದು. ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏಳಮಾಡುತ್ತಾನೆ; ಮಳೆಯ ಸಂಗಡ ಮಿಂಚನ್ನು ಉಂಟು ಮಾಡುತ್ತಾನೆ; ತನ್ನ ಭಂಡಾರಗಳೊಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ. ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ. ಅವು ವ್ಯರ್ಥವೇ, ತಪ್ಪಾದ ಕೆಲಸವೇ; ಅವು ವಿಚಾ ರಿಸಲ್ಪಡುವ ಕಾಲದಲ್ಲಿ ನಾಶವಾಗುವವು. ಯಾಕೋ ಬ್ಯರ ಪಾಲು ಇವುಗಳ ಹಾಗಲ್ಲ; ಆತನು ಸಮಸ್ತ ವನ್ನು ರೂಪಿಸಿದಾತನೇ; ಇಸ್ರಾಯೇಲ್ ಆತನ ಸ್ವಾಸ್ತ್ಯದ ಕೋಲು; ಸೈನ್ಯಗಳ ಕರ್ತನು ಎಂಬದು ಆತನ ಹೆಸರಾಗಿದೆ.
- Psalm 33:6 ಕೀರ್ತನೆಗಳು 33:6ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
- 2 Peter 3:5–7 2 ಪೇತ್ರನು 3:5–7ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು. ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
- Psalm 96:10 ಕೀರ್ತನೆಗಳು 96:10ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.
- Job 38:8–11 ಯೋಬನು 38:8–11ಸಮುದ್ರವು ಗರ್ಭದೊಳಗಿಂದ ಹೊರಬಂದಂತೆ, ಅದು ಬೇಧಿಸಿಕೊಂಡು ಬಂದಾಗ ಸಮುದ್ರವನ್ನು ಬಾಗಲುಗಳಿಂದ ಮುಚ್ಚಿದವನಾರು? ನಾನು ಅದರ ವಸ್ತ್ರವಾಗಿ ಮೇಘವನ್ನೂ ಅದಕ್ಕೆ ಬಟ್ಟೆಯಾಗಿ ಅಂಧ ಕಾರವನ್ನೂ ಮಾಡಿದಾಗ ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು. ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
- Genesis 8:22 ಆದಿಕಾಂಡ 8:22ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
- Psalm 95:4 ಕೀರ್ತನೆಗಳು 95:4ಆತನ ಕೈಯಲ್ಲಿ ಭೂಮಿಯ ಆಳವಾದ ಸ್ಥಳಗಳು ಅವೆ; ಬೆಟ್ಟಗಳ ಬಲವು ಆತನದೇ.