Psalms · chapter 24 · verse 3
Psalm 24:3 in Kannada
ಕರ್ತನ ಪರ್ವತವನ್ನು ಹತ್ತುವವನು ಯಾರು? ಇಲ್ಲವೆ ಆತನ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು?
Kartana parvatavannu hattuvavanu yaaru? Illave aatana parishuddha sthaladalli nilluvavanu yaaru?
Psalm 24:3 in English
- King James Version (KJV)
- Who shall ascend into the hill of the LORD? or who shall stand in his holy place?
- World English Bible (WEB)
- Who may ascend to the LORD’s hill? Who may stand in his holy place?
- American Standard Version (ASV)
- Who shall ascend into the hill of Jehovah? And who shall stand in his holy place?
- Bible in Basic English (BBE)
- Who may go up into the hill of the Lord? and who may come into his holy place?
- Darby Translation (DBY)
- Who shall ascend into the mount of Jehovah? and who shall stand in his holy place?
- Webster's Bible (WBS)
- Who shall ascend upon the hill of the LORD? and who shall stand in his holy place?
- Young's Literal Translation (YLT)
- Who goeth up into the hill of Jehovah? And who riseth up in His holy place?
Read in context
- 1ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
- 2ಆತನು ಅದನ್ನು ಸಮುದ್ರಗಳ ಮೇಲೆ ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರ ಪಡಿಸಿದ್ದಾನೆ.
- 3ಕರ್ತನ ಪರ್ವತವನ್ನು ಹತ್ತುವವನು ಯಾರು? ಇಲ್ಲವೆ ಆತನ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು?
- 4ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ.
- 5ಅವನೇ ಕರ್ತನ ಕಡೆಯಿಂದ ಆಶೀರ್ವಾದವನ್ನೂ ತನ್ನ ರಕ್ಷಕನಾದ ದೇವರಿಂದ ನೀತಿ ಯನ್ನೂ ಹೊಂದುವನು.
Cross references
- Psalm 15:1 ಕೀರ್ತನೆಗಳು 15:1ಕರ್ತನೇ, ನಿನ್ನ ಗುಡಾರದಲ್ಲಿ ತಂಗುವವನು ಯಾರು? ನಿನ್ನ ಪರಿಶುದ್ಧ ಪರ್ವತ ದಲ್ಲಿ ವಾಸಮಾಡುವವನು ಯಾರು?
- Hebrews 12:28 ಇಬ್ರಿಯರಿಗೆ 12:28ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- Psalm 2:6 ಕೀರ್ತನೆಗಳು 2:6ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
- Psalm 65:4 ಕೀರ್ತನೆಗಳು 65:4ನೀನು ಆದುಕೊಂಡು ನಿನ್ನ ಬಳಿಗೆ ಬರ ಮಾಡಿಕೊಳ್ಳುವವನು ಧನ್ಯನು; ನಿನ್ನ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿನ್ನ ಪರಿಶುದ್ಧ ಮಂದಿರ ವಾದ ನಿನ್ನ ಆಲಯದ ಒಳ್ಳೇದರಿಂದ ನಾವು ತೃಪ್ತರಾಗುವೆವು.
- Malachi 3:1 ಮಲಾಕಿಯ 3:1ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
- Psalm 68:18 ಕೀರ್ತನೆಗಳು 68:18ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
- Hebrews 12:22–24 ಇಬ್ರಿಯರಿಗೆ 12:22–24ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
- Psalm 132:13–14 ಕೀರ್ತನೆಗಳು 132:13–14ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ. ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.
- 2 Samuel 6:12–17 2 ಸಮುವೇಲನು 6:12–17ದೇವರ ಮಂಜೂಷದ ನಿಮಿತ್ತ ಕರ್ತನು ಒಬೇ ದೆದೋಮನ ಮನೆಯನ್ನೂ ಅವನಿಗೆ ಉಂಟಾದ ದ್ದೆಲ್ಲವನ್ನೂ ಆಶೀರ್ವದಿಸಿದ್ದಾನೆಂದು ಅರಸನಾದ ದಾವೀದನಿಗೆ ತಿಳಿಸಲ್ಪಟ್ಟಿತು. ಆಗ ದಾವೀದನು ಹೊರಟು ಹೋಗಿ ದೇವರ ಮಂಜೂಷವನ್ನು ಒಬೇ ದೆದೋಮನ ಮನೆಯಿಂದ ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು. ಕರ್ತನ ಮಂಜೂಷ ವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ ಅವನು ಎತ್ತುಗಳನ್ನೂ ಕೊಬ್ಬಿದ ಪಶು ಗಳನ್ನೂ ಬಲಿಯಾಗಿ ಕೊಟ್ಟನು. ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು. ಈ ಪ್ರಕಾರ ದಾವೀದನೂ ಇಸ್ರಾಯೇಲ್ ಮನೆಯವರೆಲ್ಲರೂ ಕರ್ತನ ಮಂಜೂಷವನ್ನು ಆರ್ಭಟ ದಿಂದಲೂ ತುತೂರಿಯ ಶಬ್ದದಿಂದಲೂ ಬರಮಾಡಿ ದರು. ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು. ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.
- Leviticus 10:3 ಯಾಜಕಕಾಂಡ 10:3ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
- Psalm 68:15–16 ಕೀರ್ತನೆಗಳು 68:15–16ಬಾಷಾನ್ ಬೆಟ್ಟವು ದೇವರ ಬೆಟ್ಟದಂತೆ ಇದೆ; ಬಾಷಾನ್ ಬೆಟ್ಟವು ಉನ್ನತ ಬೆಟ್ಟವಾಗಿದೆ. ಉನ್ನತ ಬೆಟ್ಟಗಳೇ, ಯಾಕೆ ನೆಗೆಯುತ್ತೀರಿ? ದೇವರು ನಿವಾಸ ಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಕರ್ತನು ಅದರಲ್ಲಿ ಸದಾಕಾಲಕ್ಕೆ ವಾಸಿಸುವನು.
- Psalm 78:68–69 ಕೀರ್ತನೆಗಳು 78:68–69ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು, ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು