Psalms · chapter 25 · verse 10
Psalm 25:10 in Kannada
ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು.
Aatana odambadikeyannoo saakshigalannoo kaikollu vavarige kartana daarigalellaa karuneyoo satyavoo ullavu.
Psalm 25:10 in English
- King James Version (KJV)
- All the paths of the LORD [are] mercy and truth unto such as keep his covenant and his testimonies.
- World English Bible (WEB)
- All the paths of the LORD are loving kindness and truth to such as keep his covenant and his testimonies.
- American Standard Version (ASV)
- All the paths of Jehovah are lovingkindness and truth Unto such as keep his covenant and his testimonies.
- Bible in Basic English (BBE)
- All the ways of the Lord are mercy and good faith for those who keep his agreement and his witness.
- Darby Translation (DBY)
- All the paths of Jehovah are loving-kindness and truth for such as keep his covenant and his testimonies.
- Webster's Bible (WBS)
- All the paths of the LORD [are] mercy and truth to such as keep his covenant and his testimonies.
- Young's Literal Translation (YLT)
- All the paths of Jehovah [are] kindness and truth, To those keeping His covenant, And His testimonies.
Read in context
- 8ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು.
- 9ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು.
- 10ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು.
- 11ಓ ಕರ್ತನೇ, ನನ್ನ ಅಕ್ರಮವು ಬಹಳ ವಾಗಿದೆ. ನಿನ್ನ ಹೆಸರಿನ ನಿಮಿತ್ತ ಅದನ್ನು ಮನ್ನಿಸು;
- 12ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.
Cross references
- James 5:11 ಯಾಕೋಬನು 5:11ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
- Romans 8:28 ರೋಮಾಪುರದವರಿಗೆ 8:28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
- Hebrews 8:8–12 ಇಬ್ರಿಯರಿಗೆ 8:8–12ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು. ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ. ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
- Psalm 40:11 ಕೀರ್ತನೆಗಳು 40:11ಕರ್ತನೇ, ನಿನ್ನ ಅಂತಃಕರುಣೆಗಳನ್ನು ನನ್ನಿಂದ ಹಿಂತೆಗೆಯಬೇಡ; ನಿನ್ನ ಪ್ರೀತಿ ಕರುಣೆಗಳೂ ನಿನ್ನ ಸತ್ಯವೂ ಯಾವಾಗಲೂ ನನ್ನನ್ನು ಕಾಯಲಿ.
- Psalm 103:17–18 ಕೀರ್ತನೆಗಳು 103:17–18ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ ಆತನ ಒಡಂಬಡಿಕೆಯನ್ನು ಕೈಕೊಂಡು ಆತನ ಕಟ್ಟಳೆಗಳನ್ನು ನೆನಸಿ ಅದರಂತೆ ಮಾಡುವವರಿಗೂ ನಿತ್ಯತ್ವದಿಂದ ನಿತ್ಯತ್ವಕ್ಕೂ ಇರುವದು.
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- Romans 2:13 ರೋಮಾಪುರದವರಿಗೆ 2:13(ನ್ಯಾಯ ಪ್ರಮಾಣವನ್ನು ಕೇಳುವವರು ದೇವರ ಸನ್ನಿಧಿಯಲಿ ನೀತಿವಂತರಾಗುವದಿಲ್ಲ; ನ್ಯಾಯಪ್ರಮಾಣವನ್ನು ಕೈ ಕೊಂಡು ನಡೆಯುವವರೇ ನೀತಿವಂತರೆಂದು ಎಣಿಸ ಲ್ಪಡುವರು.
- Psalm 119:75–76 ಕೀರ್ತನೆಗಳು 119:75–76ಕರ್ತನೇ, ನಿನ್ನ ನ್ಯಾಯ ವಿಧಿಗಳು ನೀತಿಯುಳ್ಳವುಗಳೆಂದೂ ನಂಬಿಕೆಯಿಂದಲೇ ನೀನು ನನ್ನನ್ನು ಶ್ರಮೆಪಡಿಸಿದ್ದೀ ಎಂದು ಬಲ್ಲೆನು. ನಿನ್ನ ಸೇವಕನಿಗೆ ನೀನು ಹೇಳಿದ ಮಾತಿನ ಪ್ರಕಾರ ನನ್ನನ್ನು ಆದರಿಸುವದಕ್ಕೆ ನಿನ್ನ ದಯಾಪೂರ್ಣ ಕರುಣೆ ಇರಲಿ.
- Psalm 91:14 ಕೀರ್ತನೆಗಳು 91:14ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
- Genesis 5:24 ಆದಿಕಾಂಡ 5:24ದೇವರೊಂದಿಗೆ ನಡೆಯುತ್ತಿದ್ದ ಹನೋಕನನ್ನು ಆತನು ತಕ್ಕೊಂಡದ್ದರಿಂದ ಅವನು ಕಾಣದೆಹೋದನು.
- Hosea 14:9 ಹೋಶೇಯ 14:9ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
- Isaiah 25:1 ಯೆಶಾಯ 25:1ಓ ಕರ್ತನೇ, ನೀನೇ ನನ್ನ ದೇವರು ನೀನು ಸತ್ಯ ಪ್ರಾಮಾಣಿಕತೆಗಳನ್ನು (ಆಲೋ ಚಿಸಿ) ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಕಾರ್ಯಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿ ಸುವೆನು.