Psalms · chapter 25 · verse 17
Psalm 25:17 in Kannada
ನನ್ನ ಮನೋವ್ಯಥೆಗಳು ಹೆಚ್ಚಾಗಿವೆ; ನೀನು ನನ್ನ ಸಂಕಟಗಳೊಳಗಿಂದ ನನ್ನನ್ನು ಹೊರಗೆ ಬರಮಾಡು.
Nanna manovyathegalu hechchaagive; neenu nanna sankatagalolaginda nannannu horage baramaadu.
Psalm 25:17 in English
- King James Version (KJV)
- The troubles of my heart are enlarged: [O] bring thou me out of my distresses.
- World English Bible (WEB)
- The troubles of my heart are enlarged. Oh bring me out of my distresses.
- American Standard Version (ASV)
- The troubles of my heart are enlarged: Oh bring thou me out of my distresses.
- Bible in Basic English (BBE)
- The troubles of my heart are increased: O take me out of my sorrows.
- Darby Translation (DBY)
- The troubles of my heart are increased: bring me out of my distresses;
- Webster's Bible (WBS)
- The troubles of my heart are enlarged: O bring thou me out of my distresses.
- Young's Literal Translation (YLT)
- The distresses of my heart have enlarged themselves, From my distresses bring me out.
Read in context
- 15ನನ್ನ ಕಣ್ಣುಗಳು ಯಾವಾಗಲೂ ಕರ್ತನ ಕಡೆಗೆ ಅವೆ; ಆತನೇ ನನ್ನ ಪಾದಗಳನ್ನು ಬಲೆಯಿಂದ ಹೊರಗೆ ಬರಮಾಡುವನು.
- 16ನೀನು ನನ್ನ ಕಡೆಗೆ ತಿರುಗಿ ನನ್ನ ಮೇಲೆ ಕರುಣೆಯಿಡು; ನಾನು ಒಂಟಿಗ ನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ.
- 17ನನ್ನ ಮನೋವ್ಯಥೆಗಳು ಹೆಚ್ಚಾಗಿವೆ; ನೀನು ನನ್ನ ಸಂಕಟಗಳೊಳಗಿಂದ ನನ್ನನ್ನು ಹೊರಗೆ ಬರಮಾಡು.
- 18ನನ್ನ ಸಂಕಟವನ್ನೂ ನೋವನ್ನೂ ನೋಡು; ನನ್ನ ಪಾಪಗಳನ್ನೆಲ್ಲಾ ಕ್ಷಮಿಸು.
- 19ನನ್ನ ಶತ್ರುಗಳನ್ನು ನೋಡು, ಅವರು ಹೆಚ್ಚಾಗಿದ್ದಾರೆ; ಕ್ರೂರವಾದ ಹಗೆ ಯಿಂದ ಅವರು ನನ್ನನ್ನು ಹಗೆಮಾಡುತ್ತಾರೆ.
Cross references
- Psalm 107:6 ಕೀರ್ತನೆಗಳು 107:6ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿ,
- Psalm 34:19 ಕೀರ್ತನೆಗಳು 34:19ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
- 2 Corinthians 4:8–9 2 ಕೊರಿಂಥದವರಿಗೆ 4:8–9ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ. ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟ ವರಾಗಿದ್ದರೂ ನಾಶವಾದವರಲ್ಲ.
- 1 Corinthians 4:11–13 1 ಕೊರಿಂಥದವರಿಗೆ 4:11–13ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.
- Psalm 42:7 ಕೀರ್ತನೆಗಳು 42:7ನಿನ್ನ ನೀರಿನ ಪ್ರವಾಹದ ಶಬ್ದದಿಂದ ಅಗಾಧವು ಅಗಾಧಕ್ಕೆ ಕೂಗು ತ್ತದೆ; ನಿನ್ನ ಅಲೆಗಳೂ ತೆರೆಗಳೂ ಎಲ್ಲಾ ನನ್ನ ಮೇಲೆ ಹಾದುಹೋಗಿವೆ.
- Psalm 77:2–4 ಕೀರ್ತನೆಗಳು 77:2–4ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು. ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ. ನನ್ನ ಕಣ್ಣುಗಳನ್ನು ಮುಚ್ಚದಂತೆ ನೀನು ಹಿಡಿಯುತ್ತೀ; ನಾನು ಮಾತಾಡದಂತೆ ಕಳವಳಪಟ್ಟಿದ್ದೇನೆ.
- Psalm 38:1–8 ಕೀರ್ತನೆಗಳು 38:1–8ಓ ಕರ್ತನೇ, ನಿನ್ನ ರೌದ್ರದಿಂದ ನನ್ನನ್ನು ಗದರಿಸಬೇಡ; ನಿನ್ನ ರೋಷದಿಂದ ನನ್ನನ್ನು ಶಿಕ್ಷಿಸಬೇಡ. ನಿನ್ನ ಬಾಣಗಳು ನನ್ನಲ್ಲಿ ಬಲವಾಗಿ ನೆಟ್ಟಿವೆ; ನಿನ್ನ ಕೈ ನನ್ನ ಮೇಲೆ ಭಾರವಾಗಿದೆ. ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ. ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ. ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ. ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ. ನನ್ನ ನಡುವು ಉರಿಯಿಂದ ತುಂಬಿದೆ; ನನ್ನ ಮಾಂಸದಲ್ಲಿ ಸ್ವಸ್ಥವೇನೂ ಇಲ್ಲ. ನಾನು ಬಹಳವಾಗಿ ಜಜ್ಜಲ್ಪಟ್ಟು ಬಲಹೀನನಾಗಿದ್ದೇನೆ; ನನ್ನ ಹೃದಯದ ನರಳುವಿಕೆ ಯಿಂದ ಮೂಲ್ಗುತ್ತೇನೆ.
- Habakkuk 3:17–19 ಹಬಕ್ಕೂಕ 3:17–19ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು.ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು. ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.