Psalms · chapter 25 · verse 18
Psalm 25:18 in Kannada
ನನ್ನ ಸಂಕಟವನ್ನೂ ನೋವನ್ನೂ ನೋಡು; ನನ್ನ ಪಾಪಗಳನ್ನೆಲ್ಲಾ ಕ್ಷಮಿಸು.
Nanna sankatavannoo novannoo nodu; nanna paapagalannellaa kshamisu.
Psalm 25:18 in English
- King James Version (KJV)
- Look upon mine affliction and my pain; and forgive all my sins.
- World English Bible (WEB)
- Consider my affliction and my travail. Forgive all my sins.
- American Standard Version (ASV)
- Consider mine affliction and my travail; And forgive all my sins.
- Bible in Basic English (BBE)
- Give thought to my grief and my pain; and take away all my sins.
- Darby Translation (DBY)
- Consider mine affliction and my travail, and forgive all my sins.
- Webster's Bible (WBS)
- Look upon my affliction and my pain; and forgive all my sins.
- Young's Literal Translation (YLT)
- See mine affliction and my misery, And bear with all my sins.
Read in context
- 16ನೀನು ನನ್ನ ಕಡೆಗೆ ತಿರುಗಿ ನನ್ನ ಮೇಲೆ ಕರುಣೆಯಿಡು; ನಾನು ಒಂಟಿಗ ನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ.
- 17ನನ್ನ ಮನೋವ್ಯಥೆಗಳು ಹೆಚ್ಚಾಗಿವೆ; ನೀನು ನನ್ನ ಸಂಕಟಗಳೊಳಗಿಂದ ನನ್ನನ್ನು ಹೊರಗೆ ಬರಮಾಡು.
- 18ನನ್ನ ಸಂಕಟವನ್ನೂ ನೋವನ್ನೂ ನೋಡು; ನನ್ನ ಪಾಪಗಳನ್ನೆಲ್ಲಾ ಕ್ಷಮಿಸು.
- 19ನನ್ನ ಶತ್ರುಗಳನ್ನು ನೋಡು, ಅವರು ಹೆಚ್ಚಾಗಿದ್ದಾರೆ; ಕ್ರೂರವಾದ ಹಗೆ ಯಿಂದ ಅವರು ನನ್ನನ್ನು ಹಗೆಮಾಡುತ್ತಾರೆ.
- 20ಹಾ, ನನ್ನ ಪ್ರಾಣವನ್ನು ಕಾಪಾಡಿ ನನ್ನನ್ನು ಬಿಡಿಸು; ನಾನು ಆಶಾಭಂಗಪಡದಂತೆ ಮಾಡು; ನಾನು ನಿನ್ನಲ್ಲಿ ಭರವಸ ವಿಟ್ಟಿದ್ದೇನೆ.
Cross references
- 2 Samuel 16:12 2 ಸಮುವೇಲನು 16:12ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.
- Psalm 119:132 ಕೀರ್ತನೆಗಳು 119:132ನೀನು ನನ್ನ ಕಡೆಗೆ ದೃಷ್ಟಿಸಿ ನಿನ್ನ ಹೆಸರನ್ನು ಪ್ರೀತಿಸುವವರಿಗೆ ಮಾಡುವ ಪ್ರಕಾರ ನನ್ನನ್ನು ಕರುಣಿಸು.
- Lamentations 5:1 ಪ್ರಲಾಪಗಳು 5:1ಓ ಕರ್ತನೇ, ನನ್ನ ಮೇಲೆ ಬಂದ ದುರ್ಗತಿಯನ್ನು ಜ್ಞಾಪಕಮಾಡಿಕೋ ಪರಿಗಣಿಸು, ನಮ್ಮ ನಿಂದೆಯನ್ನು ನೋಡು.
- Psalm 32:1–5 ಕೀರ್ತನೆಗಳು 32:1–5ಯಾವನ ದ್ರೋಹವು ಕ್ಷಮಿಸಲ್ಪಟ್ಟದೆಯೋ, ಯಾವನ ಪಾಪವು ಮುಚ್ಚಲ್ಪಟ್ಟಿದೆಯೋ, ಅವನೇ ಧನ್ಯನು. ಕರ್ತನು ಯಾವನಿಗೆ ಅಪರಾಧ ವನ್ನು ಎಣಿಸುವದಿಲ್ಲವೋ, ಯಾವನ ಹೃದಯದಲ್ಲಿ ವಂಚನೆ ಇರುವದಿಲ್ಲವೋ, ಆ ಮನುಷ್ಯ ಧನ್ಯನು. ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು. ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ. ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
- Matthew 9:2 ಮತ್ತಾಯನು 9:2ಇಗೋ, ಹಾಸಿಗೆಯ ಮೇಲೆ ಮಲಗಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಆತನ ಬಳಿಗೆ ತಂದರು; ಮತ್ತು ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು.
- Psalm 51:8–9 ಕೀರ್ತನೆಗಳು 51:8–9ನಾನು ಉತ್ಸಾಹವನ್ನೂ ಸಂತೋಷವನ್ನೂ ಕೇಳುವ ಹಾಗೆ ಮಾಡು. ಆಗ ನನ್ನ ಮುರಿದ ಎಲುಬುಗಳು ಆನಂದಿಸುವವು. ನನ್ನ ಪಾಪಗಳನ್ನು ನೋಡದಂತೆ ನೀನು ವಿಮುಖನಾಗು; ನನ್ನ ಅಕ್ರಮಗಳನ್ನೆಲ್ಲಾ ಅಳಿಸಿ ಬಿಡು.
- 1 Samuel 1:11 1 ಸಮುವೇಲನು 1:11ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು.
- Psalm 119:153 ಕೀರ್ತನೆಗಳು 119:153ನನ್ನ ಸಂಕಟವನ್ನು ನೋಡಿ ನನ್ನನ್ನು ತಪ್ಪಿಸಿ ಬಿಡು; ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
- Luke 1:25 ಲೂಕನು 1:25ಜನರಲ್ಲಿ ನನಗಿದ್ದ ಅವ ಮಾನವನ್ನು ತೆಗೆದುಹಾಕುವದಕ್ಕಾಗಿ ಕರ್ತನು ನನ್ನ ಮೇಲೆ ದೃಷ್ಟಿಯಿಟ್ಟ ದಿನಗಳಲ್ಲಿ ನನಗೆ ಹೀಗೆ ಮಾಡಿದನು ಎಂದು ಹೇಳಿದಳು.