Psalms · chapter 27 · verse 1
Psalm 27:1 in Kannada
ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
Kartanu nanna belakoo rakshaneyoo aagiddaane; naanu yaarige bhayapadu venu? Kartanu nanna jeevada balavaagiddaane; naanu yaarige hedaruvenu?
Psalm 27:1 in English
- King James Version (KJV)
- [A Psalm] of David. The LORD [is] my light and my salvation; whom shall I fear? the LORD [is] the strength of my life; of whom shall I be afraid?
- World English Bible (WEB)
- By David. The LORD is my light and my salvation. Whom shall I fear? The LORD is the strength of my life. Of whom shall I be afraid?
- American Standard Version (ASV)
- [A Psalm] of David. Jehovah is my light and my salvation; Whom shall I fear? Jehovah is the strength of my life; Of whom shall I be afraid?
- Bible in Basic English (BBE)
- Of David. The Lord is my light and my salvation; who is then a cause of fear to me? the Lord is the strength of my life; who is a danger to me?
- Darby Translation (DBY)
- [A Psalm] of David. Jehovah is my light and my salvation; whom shall I fear? Jehovah is the strength of my life; of whom shall I be afraid?
- Webster's Bible (WBS)
- [A Psalm] of David. The LORD [is] my light and my salvation; whom shall I fear? the LORD [is] the strength of my life; of whom shall I be afraid?
- Young's Literal Translation (YLT)
- By David. Jehovah [is] my light and my salvation, Whom do I fear? Jehovah [is] the strength of my life, Of whom am I afraid?
Read in context
- 1ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
- 2ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು.
- 3ನನಗೆ ವಿರೋಧವಾಗಿ ದಂಡು ಇಳಿದರೂ ನನ್ನ ಹೃದಯವು ಭಯಪಡದು; ಯುದ್ಧವು ನನ್ನ ಮೇಲೆ ಎದ್ದರೂ ಇದರಲ್ಲಿಯೂ ನಾನು ಭರವಸವಾಗಿರುವೆನು.
Cross references
- Hebrews 13:6 ಇಬ್ರಿಯರಿಗೆ 13:6ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
- Psalm 118:6 ಕೀರ್ತನೆಗಳು 118:6ಕರ್ತನು ನನ್ನ ಪರವಾಗಿದ್ದಾನೆ; ನಾನು ಭಯಪಡೆನು; ಮನುಷ್ಯನು ನನಗೆ ಏನು ಮಾಡುವನು?
- Exodus 15:2 ವಿಮೋಚನಕಾಂಡ 15:2ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.
- 2 Corinthians 12:9 2 ಕೊರಿಂಥದವರಿಗೆ 12:9ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
- Psalm 84:11 ಕೀರ್ತನೆಗಳು 84:11ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- John 8:12 ಯೋಹಾನನು 8:12ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
- Romans 8:31 ರೋಮಾಪುರದವರಿಗೆ 8:31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
- Micah 7:7–8 ಮೀಕ 7:7–8ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು. ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.
- Isaiah 60:19–20 ಯೆಶಾಯ 60:19–20ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು. ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು.
- Isaiah 12:2 ಯೆಶಾಯ 12:2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- Psalm 18:28 ಕೀರ್ತನೆಗಳು 18:28ನೀನು ನನ್ನ ದೀಪವನ್ನು ಬೆಳಗಿಸುವಿ; ನನ್ನ ದೇವ ರಾದ ಕರ್ತನು ನನ್ನ ಕತ್ತಲೆಯನ್ನು ಪ್ರಕಾಶಿಸುವಂತೆ ಮಾಡುವನು.
- Isaiah 61:10 ಯೆಶಾಯ 61:10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.