Psalms · chapter 27 · verse 2
Psalm 27:2 in Kannada
ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು.
Nanna maansavannu tinnabekendu dushtaru andare nanna vairigaloo shatrugaloo bandaaga avaru edavibiddaru.
Psalm 27:2 in English
- King James Version (KJV)
- When the wicked, [even] mine enemies and my foes, came upon me to eat up my flesh, they stumbled and fell.
- World English Bible (WEB)
- When evildoers came at me to eat up my flesh, even my adversaries and my foes, they stumbled and fell.
- American Standard Version (ASV)
- When evil-doers came upon me to eat up my flesh, [Even] mine adversaries and my foes, they stumbled and fell.
- Bible in Basic English (BBE)
- When evil-doers, even my haters, came on me to put an end to me, they were broken and put to shame.
- Darby Translation (DBY)
- When evil-doers, mine adversaries and mine enemies, came upon me to eat up my flesh, they stumbled and fell.
- Webster's Bible (WBS)
- When the wicked, [even] my enemies and my foes, came upon me to eat up my flesh, they stumbled and fell.
- Young's Literal Translation (YLT)
- When evil doers come near to me to eat my flesh, My adversaries and mine enemies to me, They have stumbled and fallen.
Read in context
- 1ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
- 2ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು.
- 3ನನಗೆ ವಿರೋಧವಾಗಿ ದಂಡು ಇಳಿದರೂ ನನ್ನ ಹೃದಯವು ಭಯಪಡದು; ಯುದ್ಧವು ನನ್ನ ಮೇಲೆ ಎದ್ದರೂ ಇದರಲ್ಲಿಯೂ ನಾನು ಭರವಸವಾಗಿರುವೆನು.
- 4ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
Cross references
- Psalm 118:12 ಕೀರ್ತನೆಗಳು 118:12ಜೇನ್ನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ ಅವರು ಮುಳ್ಳುಗಳ ಬೆಂಕಿಯ ಹಾಗೆ ಆರಿಹೋಗುತ್ತಾರೆ, ಕರ್ತನ ಹೆಸರಿನಲ್ಲಿ ನಾನು ಅವ ರನ್ನು ಸಂಹರಿಸುವೆನು.
- Psalm 3:7 ಕೀರ್ತನೆಗಳು 3:7ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
- Isaiah 8:15 ಯೆಶಾಯ 8:15ಅವರಲ್ಲಿ ಅನೇಕರು ಎಡವಿಬಿದ್ದು, ಹೊಡೆಯಲ್ಪಟ್ಟು ಬಲೆಗೆ ಸಿಕ್ಕಿ ಬೀಳುವರು.
- Psalm 9:3 ಕೀರ್ತನೆಗಳು 9:3ನನ್ನ ಶತ್ರುಗಳು ಹಿಂದಕ್ಕೆ ತಿರುಗಿ ನಿನ್ನ ಸಮ್ಮುಖ ದಿಂದ ಬಿದ್ದು ನಾಶವಾಗುವರು.
- Psalm 14:4 ಕೀರ್ತನೆಗಳು 14:4ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ?
- Psalm 22:16 ಕೀರ್ತನೆಗಳು 22:16ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
- Job 19:22 ಯೋಬನು 19:22ದೇವರ ಹಾಗೆ ನೀವು ಯಾಕೆ ನನ್ನನ್ನು ಹಿಂಸಿಸಿ; ನನ್ನ ಮಾಂಸದಿಂದ ತೃಪ್ತಿಯಾಗದೆ ಇದ್ದೀರಿ.
- Psalm 18:38–42 ಕೀರ್ತನೆಗಳು 18:38–42ಅವರು ಏಳಲಾರದ ಹಾಗೆ ಅವ ರಿಗೆ ಗಾಯ ಮಾಡಿದೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ. ನೀನು ಯುದ್ಧಕಾಗ್ಕಿ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಎದುರಾಳಿಗ ಳನ್ನು ಅಧೀನ ಮಾಡಿದಿ. ನನ್ನ ಹಗೆಯವರನ್ನು ನಾಶಮಾಡುವಂತೆ ಶತ್ರುಗಳ ಕುತ್ತಿಗೆಗಳನ್ನು ನೀನು ನನಗೆ ಕೊಟ್ಟಿದ್ದೀ. ಅವರು ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇದ್ದಿಲ್ಲ. ಕರ್ತನಿಗೂ ಮೊರೆ ಇಟ್ಟರು, ಆದರೆ ಅವರಿಗೆ ಆತನು ಉತ್ತರ ಕೊಡ ಲಿಲ್ಲ. ಗಾಳಿಯ ಮುಂದಿನ ಧೂಳಿನಹಾಗೆ ಅವ ರನ್ನು ಹೊಡೆದು ಪುಡಿಪುಡಿ ಮಾಡಿದನು; ಬೀದಿಯ ಕೆಸರಿನಹಾಗೆ ಅವರನ್ನು ಹೊರಗೆ ಚೆಲ್ಲಿಬಿಟ್ಟನು.
- Psalm 18:4 ಕೀರ್ತನೆಗಳು 18:4ಮರಣದ ದುಃಖಗಳು ನನ್ನನ್ನು ಆವರಿಸಿಕೊಂಡವು, ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು.
- Psalm 53:4 ಕೀರ್ತನೆಗಳು 53:4ರೊಟ್ಟಿತಿನ್ನುವ ಪ್ರಕಾರ ನನ್ನ ಜನರನ್ನು ತಿಂದು ದೇವರನ್ನು ಸ್ಮರಿಸದೆ ಅಪರಾಧಮಾಡುವವರು ಅರಿ ಯರೋ?
- John 18:3–6 ಯೋಹಾನನು 18:3–6ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು. ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು ಪ್ರತ್ಯುತ್ತರ ವಾಗಿ ಆತನಿಗೆ--ನಜರೇತಿನ ಯೇಸು ಅಂದರು. ಅದಕ್ಕೆ ಯೇಸು ಅವರಿಗೆ--ನಾನೇ ಆತನು ಅಂದನು. ಮತ್ತು ಆತನನ್ನು ಹಿಡುಕೊಡುವ ಯೂದನು ಸಹ ಅವರೊಂದಿಗೆ ನಿಂತಿದ್ದನು. ಆತನು ಅವರಿಗೆ--ನಾನೇ ಆತನು ಎಂದು ಹೇಳಿದ ಕೂಡಲೇ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.
- Psalm 62:3–4 ಕೀರ್ತನೆಗಳು 62:3–4ಎಷ್ಟರವರೆಗೆ ಒಬ್ಬ ಮನುಷ್ಯನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತೀರಿ? ನೀವೆಲ್ಲರೂ ಕೊಲ್ಲಲ್ಪಡುವಿರಿ; ನೀವು ಕುಸಿದುಬೀಳುವ ಗೋಡೆಯಂತೆಯೂ ಅಲ್ಲಾ ಡುವ ಬೇಲಿಯಂತೆಯೂ ಇರುವಿರಿ. ಅವರು ಅವ ನನ್ನು ಉನ್ನತಸ್ಥಾನದಿಂದ ದೊಬ್ಬುವದನ್ನೇ ಆಲೋಚಿ ಸುತ್ತಾರೆ; ಅವರು ಸುಳ್ಳುಗಳಲ್ಲಿ ಇಷ್ಟ ಪಡುತ್ತಾರೆ. ಅವರು ತಮ್ಮ ಬಾಯಿಂದ ಆಶೀರ್ವದಿಸಿ ಅಂತರಂಗ ದಲ್ಲಿ ಶಪಿಸುತ್ತಾರೆ. ಸೆಲಾ.