Psalms · chapter 3 · verse 1
Psalm 3:1 in Kannada
ಕರ್ತನೇ, ನನ್ನನ್ನು ಕಳವಳಪಡಿಸುವವರು ಹೆಚ್ಚಿದ್ದಾರೆ! ನನಗೆ ವಿರೋಧವಾಗಿ ಏಳುವವರು ಅನೇಕರು.
Kartane, nannannu kalavalapadisuvavaru hechchiddaare! Nanage virodhavaagi eluvavaru anekaru.
Psalm 3:1 in English
- King James Version (KJV)
- A Psalm of David, when he fled from Absalom his son. LORD, how are they increased that trouble me! many [are] they that rise up against me.
- World English Bible (WEB)
- A Psalm by David, when he fled from Absalom his son. LORD, how my adversaries have increased! Many are those who rise up against me.
- American Standard Version (ASV)
- A Psalm of David, when he fled from Absalom his son. Jehovah, how are mine adversaries increased! Many are they that rise up against me.
- Bible in Basic English (BBE)
- A Psalm. Of David. When he went in flight from Absalom his son. Lord, how greatly are they increased who make attacks on me! in great numbers they come against me.
- Darby Translation (DBY)
- A Psalm of David, when he fled from Absalom his son. Jehovah, how many are they that trouble me, many they that rise up against me!
- Webster's Bible (WBS)
- A Psalm of David, when he fled from Absalom his son. LORD, how are they multiplied that trouble me? many [are] they that rise up against me.
- Young's Literal Translation (YLT)
- A Psalm of David, in his fleeing from the face of Absalom his son. Jehovah, how have my distresses multiplied! Many are rising up against me.
Read in context
- 1ಕರ್ತನೇ, ನನ್ನನ್ನು ಕಳವಳಪಡಿಸುವವರು ಹೆಚ್ಚಿದ್ದಾರೆ! ನನಗೆ ವಿರೋಧವಾಗಿ ಏಳುವವರು ಅನೇಕರು.
- 2ದೇವರಲ್ಲಿ ಇವನಿಗೆ ಯಾವ ಸಹಾಯವೂ ಇಲ್ಲವೆಂದು ನನ್ನ ವಿಷಯದಲ್ಲಿ ಅನೇಕರು ಹೇಳುತ್ತಾರೆ. ಸೆಲಾ.
- 3ಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ.
Cross references
- Psalm 17:7 ಕೀರ್ತನೆಗಳು 17:7ನಿನ್ನಲ್ಲಿ ಭರವಸವಿಟ್ಟವರ ವಿರೋಧವಾಗಿ ಏಳುವ ದರಿಂದ ನೀನು ನಿನ್ನ ಬಲಗೈಯಿಂದ ರಕ್ಷಿಸುವಾತನೇ, ಆಶ್ಚರ್ಯವಾದ ನಿನ್ನ ಪ್ರೀತಿ ಕರುಣೆಯನ್ನು ತೋರಿಸು.
- 2 Samuel 17:11–13 2 ಸಮುವೇಲನು 17:11–13ನಾನು ಹೇಳುವ ಆಲೋಚನೆ ಏನಂದರೆ, ದಾನಿ ನಿಂದ ಬೇರ್ಷೆಬದ ವರೆಗೂ ಇರುವ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಇಸ್ರಾಯೇಲ್ಯರು ನಿನ್ನ ಬಳಿಯಲ್ಲಿ ಕೂಡಿಸಲ್ಪಟ್ಟ ತರುವಾಯ ನೀನೇ ಯುದ್ಧಕ್ಕೆ ಹೋಗಬೇಕು. ಆಗ ನಾವು ಅವನನ್ನು ಕಂಡು ಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ ಅವನ ಸಂಗಡವಿರುವ ಎಲ್ಲಾ ಜನರಲ್ಲಿ ಒಬ್ಬನಾದರೂ ಉಳಿಯುವದಿಲ್ಲ. ಅವನು ಒಂದು ವೇಳೆ ಒಂದು ಪಟ್ಟಣದಲ್ಲಿ ಹೊಕ್ಕರೆ ಇಸ್ರಾಯೇಲ್ಯರೆಲ್ಲರು ಆ ಪಟ್ಟಣಕ್ಕೆ ಹಗ್ಗಗಳನ್ನು ತಂದು ಹಾಕಿದ ತರುವಾಯ ನಾವು ಒಂದು ಹರಳಾದರೂ ಅಲ್ಲಿ ಕಾಣದ ಹಾಗೆ ಅದನ್ನು ನದಿಗೆ ಎಳೆದು ಹಾಕುವೆವು ಅಂದನು.
- 2 Samuel 16:15 2 ಸಮುವೇಲನು 16:15ಅಬ್ಷಾಲೋಮನೂ ಎಲ್ಲಾ ಇಸ್ರಾಯೇಲ್ ಜನರೂ ಅವನ ಸಂಗಡ ಅಹೀತೋಫೆಲನೂ ಯೆರೂ ಸಲೇಮಿಗೆ ಬಂದರು
- 2 Samuel 15:1–18 2 ಸಮುವೇಲನು 15:1–18ತರುವಾಯ ಅಬ್ಷಾಲೋಮನು ತನ ಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು. ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಲ ಬಳಿಯಲ್ಲಿ ನಿಂತುಕೊಂಡು ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯ ಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು--ನೀನು ಯಾವ ಪಟ್ಟಣದವನೆಂದು ಕೇಳು ವನು. ಅದಕ್ಕವನು--ನಿನ್ನ ಸೇವಕನು ಇಸ್ರಾಯೇಲ್ ಗೋತ್ರಗಳಲ್ಲಿ ಒಬ್ಬನೆಂದು ಹೇಳಿದರೆ ಅಬ್ಷಾಲೋ ಮನು ಅವನಿಗೆ--ನೋಡು, ನಿನ್ನ ಕಾರ್ಯಗಳು ಒಳ್ಳೆಯವೂ ಯುಕ್ತವೂ ಆದವುಗಳು; ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವದಕ್ಕೆ ಯಾವನೂ ಇಲ್ಲ. ಇದಲ್ಲದೆ ಅಬ್ಷಾಲೋಮನು--ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ಮಾಡಲ್ಪಟ್ಟಿದ್ದರೆ ಎಷ್ಟೋ ಒಳ್ಳೆಯದು; ಆಗ ವ್ಯಾಜ್ಯವಾದರೂ ನ್ಯಾಯವಿಚಾರಣೆ ಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ ನಾನು ಅವನಿಗೆ ನೀತಿಯಿಂದ ನ್ಯಾಯ ತೀರಿಸುವೆನು ಅನ್ನುವನು. ಯಾವನಾದರೂ ತನಗೆ ವಂದಿಸುವದಕ್ಕೆ ತನ್ನ ಬಳಿಗೆ ಬಂದರೆ ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು ಮುದ್ದಿಟ್ಟುಕೊಳ್ಳುತ್ತಿದ್ದನು. ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು. ನಾಲ್ಕು ವರುಷಗಳಾದ ತರುವಾಯ ಅಬ್ಷಾಲೋ ಮನು ಅರಸನಿಗೆ--ನಾನು ಕರ್ತನಿಗೆ ಮಾಡಿಕೊಂಡಿದ್ದ ನನ್ನ ಪ್ರಮಾಣವನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವದಕ್ಕೆ ಅಪ್ಪಣೆಕೊಡಬೇಕು. ಕರ್ತನು ನನ್ನನ್ನು ಯೆರೂಸಲೇಮಿಗೆ ತಿರಿಗಿ ನಿಜವಾಗಿಯೂ ಬರಮಾಡಿದರೆ ನಾನು ಕರ್ತನನ್ನು ಸೇವಿಸುವೆನೆಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಪ್ರಮಾಣಮಾಡಿಕೊಂಡಿದ್ದೆನು ಅಂದನು. ಅರಸನು ಅವನಿಗೆ--ಸಮಾಧಾನವಾಗಿ ಹೋಗು ಅಂದನು. ಆಗ ಅವನು ಎದ್ದು ಹೆಬ್ರೋನಿಗೆ ಹೋದನು. ಆದರೆ ಅಬ್ಷಾಲೋಮನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಗೆ ಪಾಳತಿಗಾರರನ್ನು ಕಳುಹಿಸಿ ಅವರಿಗೆ--ನೀವು ತುತೂರಿಯ ಶಬ್ದ ಕೇಳಿದಾಗ ಅಬ್ಷಾಲೋಮನು ಹೆಬ್ರೋನಿನಲ್ಲಿ ಆಳುತ್ತಾನೆಂದು ಹೇಳಿರಿ ಅಂದನು. ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲ್ಪಟ್ಟ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ನಿರ್ವಂಚನೆ ಯುಳ್ಳವರಾಗಿ ಏನೂ ತಿಳಿಯದೆ ಇದ್ದರು. ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು. ದಾವೀದನ ಬಳಿಗೆ ಒಬ್ಬ ದೂತನು ಬಂದು --ಇಸ್ರಾಯೇಲ್ ಜನರ ಹೃದಯಗಳು ಅಬ್ಷಾ ಲೋಮನ ಕಡೆಗಾದವು ಅಂದನು. ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಎಲ್ಲಾ ಸೇವಕರಿಗೆ--ಏಳಿರಿ, ನಾವು ಓಡಿ ಹೋಗೋಣ; ಇಲ್ಲದಿದ್ದರೆ ಅಬ್ಷಾಲೋಮನ ಕೈ ಯಿಂದ ತಪ್ಪಿಸಿಕೊಂಡು ಹೋಗಲಾರೆವು; ಅವನು ಪಕ್ಕನೆ ನಮ್ಮನ್ನು ಹಿಡಿದು ನಮ್ಮ ಮೇಲೆ ಕೇಡನ್ನು ಬರಮಾಡಿ ಪಟ್ಟಣವನ್ನು ಕತ್ತಿಯಿಂದ ಹೊಡೆಯದ ಹಾಗೆ ಹೊರಟು ಹೋಗುವದಕ್ಕೆ ತ್ವರೆಮಾಡಿರಿ ಅಂದನು. ಆಗ ಅರಸನ ಸೇವಕರು ಅರಸನಿಗೆಇಗೋ, ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ ಅದನ್ನು ಮಾಡುವದಕ್ಕೆ ನಿನ್ನ ಸೇವಕರು ಸಿದ್ಧರಾಗಿದ್ದೇವೆ ಅಂದರು. ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು ಅವನೂ ಅವನ ಮನೆ ಯವರೆಲ್ಲರೂ ಅವನ ಹಿಂದೆ ಹೊರಟು ಹೋದರು. ಅರಸನೂ ಅವನ ಹಿಂದೆ ಎಲ್ಲಾ ಜನರೂ ಹೊರಟು ಹೋಗಿ ದೂರವಾದ ಸ್ಥಳದಲ್ಲಿ ನಿಂತರು. ಅವನ ಎಲ್ಲಾ ಸೇವಕರೂ ಕೆರೇತ್ಯರೂ ಪೆಲೇತ್ಯರೂ ಅವನ ಹಿಂದೆ ಗತ್ ಊರಿನಿಂದ ಅವನ ಸಂಗಡ ಬಂದ ಗಿತ್ತಿಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.
- Matthew 27:25 ಮತ್ತಾಯನು 27:25ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
- Matthew 10:21 ಮತ್ತಾಯನು 10:21ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.