Psalms · chapter 31 · verse 10
Psalm 31:10 in Kannada
ನನ್ನ ಜೀವವು ಚಿಂತೆ ಯಿಂದಲೂ ನನ್ನ ವರುಷಗಳು ನಿಟ್ಟುಸುರಿನಿಂದಲೂ ತೀರಿಹೋಗಿವೆ; ನನ್ನ ಶಕ್ತಿಯು ನನ್ನ ಅಪರಾಧದಿಂದ ಕುಂದಿ ಎಲುಬುಗಳು ಕ್ಷೀಣವಾಗಿವೆ.
Nanna jeevavu chinte yindaloo nanna varushagalu nittusurinindaloo teerihogive; nanna shaktiyu nanna aparaadhadinda kundi elubugalu ksheenavaagive.
Psalm 31:10 in English
- King James Version (KJV)
- For my life is spent with grief, and my years with sighing: my strength faileth because of mine iniquity, and my bones are consumed.
- World English Bible (WEB)
- For my life is spent with sorrow, my years with sighing. My strength fails because of my iniquity. My bones are wasted away.
- American Standard Version (ASV)
- For my life is spent with sorrow, And my years with sighing: My strength faileth because of mine iniquity, And my bones are wasted away.
- Bible in Basic English (BBE)
- My life goes on in sorrow, and my years in weeping; my strength is almost gone because of my sin, and my bones are wasted away.
- Darby Translation (DBY)
- For my life is spent with sorrow, and my years with sighing; my strength faileth through mine iniquity, and my bones are wasted.
- Webster's Bible (WBS)
- For my life is spent with grief, and my years with sighing: my strength faileth because of my iniquity, and my bones are consumed.
- Young's Literal Translation (YLT)
- For my life hath been consumed in sorrow And my years in sighing. Feeble because of mine iniquity hath been my strength, And my bones have become old.
Read in context
- 8ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿಬಿಡಲಿಲ್ಲ; ನನ್ನ ಪಾದಗಳನ್ನು ಅಗಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀ.
- 9ಓ ಕರ್ತನೇ, ನನ್ನನ್ನು ಕರುಣಿಸು; ನಾನು ಇಕ್ಕಟ್ಟಿ ನಲ್ಲಿದ್ದೇನೆ. ನನ್ನ ಕಣ್ಣೂ ಪ್ರಾಣವೂ ಹೊಟ್ಟೆಯೂ ದುಃಖದಿಂದ ಕ್ಷೀಣವಾಗಿವೆ.
- 10ನನ್ನ ಜೀವವು ಚಿಂತೆ ಯಿಂದಲೂ ನನ್ನ ವರುಷಗಳು ನಿಟ್ಟುಸುರಿನಿಂದಲೂ ತೀರಿಹೋಗಿವೆ; ನನ್ನ ಶಕ್ತಿಯು ನನ್ನ ಅಪರಾಧದಿಂದ ಕುಂದಿ ಎಲುಬುಗಳು ಕ್ಷೀಣವಾಗಿವೆ.
- 11ನನ್ನ ವೈರಿ ಗಳೆಲ್ಲರಿಗೆ, ವಿಶೇಷವಾಗಿ ನನ್ನ ನೆರೆಯವರಿಗೆ, ನಾನು ನಿಂದೆಯೂ ಪರಿಚಿತರಿಗೆ ಹೆದರಿಕೆಯೂ ಆಗಿದ್ದೇನೆ; ಹೊರಗೆ ನನ್ನನ್ನು ನೋಡಿದವರು ನನ್ನನ್ನು ಬಿಟ್ಟು ಓಡಿಹೋದರು.
- 12ಸತ್ತವನ ಹಾಗೆ ಮನಸ್ಸಿನೊಳಗಿಂದ ಮರೆತು ಬಿಡಲ್ಪಟ್ಟಿದ್ದೇನೆ; ನಾನು ಒಡೆದ ಬೋಕಿಯ ಹಾಗೆ ಇದ್ದೆನೆ.
Cross references
- Psalm 38:3 ಕೀರ್ತನೆಗಳು 38:3ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ.
- Psalm 88:15 ಕೀರ್ತನೆಗಳು 88:15ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ.
- Psalm 32:3–4 ಕೀರ್ತನೆಗಳು 32:3–4ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು. ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.
- Romans 9:2 ರೋಮಾಪುರದವರಿಗೆ 9:2ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು.
- Psalm 78:33 ಕೀರ್ತನೆಗಳು 78:33ಆಗ ಆತನು ಅವರ ದಿವಸಗಳನ್ನು ಉಸಿರಿ ನಂತೆಯೂ ಅವರ ವರುಷಗಳನ್ನು ಕಳವಳದಲ್ಲಿಯೂ ಮುಗಿಸಿದನು.
- Psalm 13:2 ಕೀರ್ತನೆಗಳು 13:2ಎಷ್ಟರ ವರೆಗೆ ನನ್ನ ಪ್ರಾಣದಲ್ಲಿ ಆಲೋಚನೆಗಳನ್ನೂ ಪ್ರತಿದಿನ ನನ್ನ ಹೃದಯದಲ್ಲಿ ದುಃಖವನ್ನೂ ಇಟ್ಟುಕೊಳ್ಳಬೇಕು? ಎಷ್ಟರ ವರೆಗೆ ನನ್ನ ಶತ್ರುವು ನನ್ನ ಮೇಲೆ ಹೆಚ್ಚಿಸಿಕೊಳ್ಳುವನು?
- Psalm 39:11 ಕೀರ್ತನೆಗಳು 39:11ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ.
- Psalm 102:3–28 ಕೀರ್ತನೆಗಳು 102:3–28ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ. ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ. ನನ್ನ ಮೂಲುಗುವಿಕೆಯ ಸ್ವರದಿಂದ ಎಲುಬುಗಳು ನನ್ನ ಮಾಂಸಕ್ಕೆ ಅಂಟುತ್ತವೆ. ನಾನು ಅರಣ್ಯದ ಬಕಕ್ಕೆ ಸಮಾನನಾಗಿದ್ದೇನೆ; ನಾನು ಅರಣ್ಯದ ಗೂಬೆಯ ಹಾಗಿದ್ದೇನೆ. ನಾನು ಎಚ್ಚರವಾಗಿದ್ದೂ; ಮಾಳಿಗೆಯ ಮೇಲಿರುವ ಒಂಟಿಯಾದ ಪಕ್ಷಿಯ ಹಾಗಿದ್ದೇನೆ. ದಿನವೆಲ್ಲಾ ನನ್ನ ಶತ್ರುಗಳು ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಿಸಿಕೊಳ್ಳುವವರು ನನಗೆ ವಿರೋಧ ವಾಗಿ ಆಣೆ ಇಡುತ್ತಾರೆ. ನಿನ್ನ ರೋಷದ ಮತ್ತು ನಿನ್ನ ರೌದ್ರದ ನಿಮಿತ್ತವೇ ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿ ದ್ದೇನೆ. ನನ್ನನ್ನು ನೀನು ಎತ್ತಿ ಕೆಡವಿ ಹಾಕಿದ್ದೀ; ನನ್ನ ದಿವಸಗಳು ನೀಳದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತ್ತೇನೆ. ಆದರೆ ಓ ಕರ್ತನೇ, ನೀನು ಎಂದೆಂದಿಗೂ ಇರುವವನಾಗಿದ್ದೀ, ನಿನ್ನ ಸ್ಮರಣೆಯು ತಲತಲಾಂತ ರಕ್ಕೂ ಅದೆ. ನೀನು ಎದ್ದು, ಚೀಯೋನನ್ನು ಕನಿ ಕರಿಸುವಿ; ಯಾಕಂದರೆ ಅದನ್ನು ಕರುಣಿಸುವದಕ್ಕೆ ಕಾಲವಾಯಿತು; ಹೌದು ನಿರ್ಣಯಿಸಿದ ಸಮಯವು ಬಂದಿದೆ. ನಿನ್ನ ಸೇವಕರು ಅದರ ಕಲ್ಲುಗಳಲ್ಲಿ ಇಷ್ಟಪಡುತ್ತಾರೆ. ಅದರ ಧೂಳನ್ನು ಕರುಣಿಸುತ್ತಾರೆ. ಜನಾಂಗವು ಕರ್ತನ ಹೆಸರಿಗೂ ಭೂರಾಜರೆಲ್ಲರು ನಿನ್ನ ಮಹಿಮೆಗೂ ಭಯಪಡುವರು. ಕರ್ತನು ಚೀಯೋನನ್ನು ಕಟ್ಟುವನು; ಆತನು ತನ್ನ ಮಹಿಮೆಯಲ್ಲಿ ಕಾಣಿಸಿಕೊಳ್ಳುವನು. ದಿಕ್ಕಿಲ್ಲದವನ ಪ್ರಾರ್ಥನೆಗೆ ಕಿವಿಗೊಡುತ್ತಾನೆ; ಅವರ ಪ್ರಾರ್ಥನೆಯನ್ನು ತಿರಸ್ಕರಿ ಸುವದಿಲ್ಲ. ಇದು ಮುಂದಿನ ಸಂತತಿಗೋಸ್ಕರ ಬರೆಯಲ್ಪಡುವದು; ಹುಟ್ಟಲಿಕ್ಕಿರುವ ಜನರು ಕರ್ತನನ್ನು ಸ್ತುತಿಸುವರು. ಜನಾಂಗಗಳೂ ರಾಜ್ಯಗಳೂ ಕರ್ತ ನನ್ನು ಸೇವಿಸುವದಕ್ಕೆ ಒಟ್ಟಾಗಿ ಕೂಡಿ ಬರುವಾಗ ಚೀಯೋನಿನಲ್ಲಿ ಕರ್ತನ ಹೆಸರೂ ಯೆರೂಸಲೇಮಿ ನಲ್ಲಿ ಆತನ ಸ್ತೋತ್ರವೂ ಸಾರಲ್ಪಡುವ ಹಾಗೆ. ಕರ್ತನು ಸೆರೆಯವರ ನರಳುವಿಕೆಯನ್ನು ಕೇಳುವ ದಕ್ಕೂ ಮರಣಕ್ಕೆ ನೇಮಕವಾದವರನ್ನು ಬಿಡಿಸು ವದಕ್ಕೂ ತನ್ನ ಪರಿಶುದ್ಧವಾದ ಉನ್ನತ ಸ್ಥಳದಿಂದ ಕಣ್ಣಿಟ್ಟು ಆಕಾಶದಿಂದ ಭೂಮಿಯನ್ನು ನೋಡಿದ್ದಾನೆ. ಆತನು ನನ್ನ ಶಕ್ತಿಯನ್ನು ಮಾರ್ಗದಲ್ಲಿ ಕುಂದಿಸಿ ನನ್ನ ದಿವಸಗಳನ್ನು ಕಡಿಮೆ ಮಾಡಿದನು. ಓ ನನ್ನ ದೇವರೇ, ನನ್ನ ದಿವಸಗಳ ಮಧ್ಯದಲ್ಲಿ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಗಳಿಗೂ ಅವೆ ಅಂದೆನು. ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ. ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು. ಆದರೆ ನೀನು ಏಕ ರೀತಿಯಾಗಿರುತ್ತೀ; ನಿನ್ನ ವರುಷಗಳು ಮುಗಿಯವು.ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು. ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
- Job 3:24 ಯೋಬನು 3:24ನಾನು ತಿನ್ನುವದಕ್ಕಿಂತ ಮುಂಚೆ ನನ್ನ ನಿಟ್ಟುಸಿರು ಬರುವದು. ನೀರಿನಂತೆ ನನ್ನ ಗರ್ಜನೆ ಗಳು ಹೊಯ್ಯಲ್ಪಟ್ಟಿವೆ.
- Psalm 71:9 ಕೀರ್ತನೆಗಳು 71:9ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡ. ನನ್ನ ಶಕ್ತಿಯು ಕುಂದಿಹೋಗುವಾಗ ನನ್ನನ್ನು ಕೈಬಿಡ ಬೇಡ.