Psalms · chapter 31 · verse 19
Psalm 31:19 in Kannada
ನಿನಗೆ ಭಯಪಡುವವರಿಗೋಸ್ಕರ ಮನುಷ್ಯ ಪುತ್ರರ ಮುಂದೆ ನಿನ್ನಲ್ಲಿ ಭರವಸೆ ಇಟ್ಟವರಿಗೋಸ್ಕರ ನೀನು ಇಟ್ಟಿರುವ ಒಳ್ಳೇತನವು ಎಷ್ಟೋ ದೊಡ್ಡದು.
Ninage bhayapaduvavarigoskara manushya putrara munde ninnalli bharavase ittavarigoskara neenu ittiruva olletanavu eshto doddadu.
Psalm 31:19 in English
- King James Version (KJV)
- [Oh] how great [is] thy goodness, which thou hast laid up for them that fear thee; [which] thou hast wrought for them that trust in thee before the sons of men!
- World English Bible (WEB)
- Oh how great is your goodness, which you have laid up for those who fear you, which you have worked for those who take refuge in you, before the sons of men!
- American Standard Version (ASV)
- Oh how great is thy goodness, Which thou hast laid up for them that fear thee, Which thou hast wrought for them that take refuge in thee, Before the sons of men!
- Bible in Basic English (BBE)
- O how great is your grace, which you have put in store for your worshippers, and which you have made clear to those who had faith in you, before the sons of men!
- Darby Translation (DBY)
- [Oh] how great is thy goodness, which thou hast laid up for them that fear thee, [which] thou hast wrought for them that trust in thee, before the sons of men!
- Webster's Bible (WBS)
- [Oh] how great [is] thy goodness, which thou hast laid up for them that fear thee; [which] thou hast wrought for them that trust in thee before the sons of men!
- Young's Literal Translation (YLT)
- How abundant is Thy goodness, That Thou hast laid up for those fearing Thee,
Read in context
- 17ಓ ಕರ್ತನೇ, ನಿನಗೆ ಮೊರೆಯಿಟ್ಟಿದ್ದೇನೆ; ನಾನು ಆಶಾಭಂಗಪಡ ದಂತೆ ಮಾಡು; ದುಷ್ಟರು ಆಶಾಭಂಗಪಡಲಿ; ಅವರು ಸಮಾಧಿಯಲ್ಲಿ ಮೌನವಾಗಿರಲಿ.
- 18ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ ಕಠಿಣ ವಾಗಿ ಮಾತನಾಡುವ ಸುಳ್ಳಿನ ತುಟಿಗಳು ಮೌನ ವಾಗಲಿ.
- 19ನಿನಗೆ ಭಯಪಡುವವರಿಗೋಸ್ಕರ ಮನುಷ್ಯ ಪುತ್ರರ ಮುಂದೆ ನಿನ್ನಲ್ಲಿ ಭರವಸೆ ಇಟ್ಟವರಿಗೋಸ್ಕರ ನೀನು ಇಟ್ಟಿರುವ ಒಳ್ಳೇತನವು ಎಷ್ಟೋ ದೊಡ್ಡದು.
- 20ಅವರನ್ನು ನಿನ್ನ ಸನ್ನಿಧಾನದ ಮರೆಯಲ್ಲಿ ಮನು ಷ್ಯರ ಗರ್ವಕ್ಕೆ ನೀನು ಮರೆಮಾಡುತ್ತೀ; ನಾಲಿಗೆಗಳ ವಿವಾದಕ್ಕೆ ಡೇರೆಯಲ್ಲಿ ಗುಪ್ತವಾಗಿ ಅವರನ್ನು ಕಾಪಾ ಡುವಿ.
- 21ಆತನು ಭದ್ರವಾದ ಪಟ್ಟಣದಲ್ಲಿ ತನ್ನ ಆಶ್ಚ ರ್ಯವಾದ ಕರುಣೆ ನನಗೆ ತೋರಿಸಿದ್ದಾನೆ ಕರ್ತ ನಿಗೆ ಸ್ತೋತ್ರ.
Cross references
- 1 Corinthians 2:9 1 ಕೊರಿಂಥದವರಿಗೆ 2:9ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.
- Isaiah 64:4 ಯೆಶಾಯ 64:4ದೇವರೇ, ನಿನಗೋಸ್ಕರ ಕಾದುಕೊಳ್ಳುವವನಿಗೆ ನೀನು ಮಾಡು ವದನ್ನು, ಲೋಕದ ಉತ್ಪತ್ತಿಗೆ ಮುಂಚೆ ನಿನ್ನ ಹೊರ ತಾಗಿ ಯಾರೂ ಕೇಳಲಿಲ್ಲ ಇಲ್ಲವೆ ಯಾರ ಕಿವಿ ಯಲ್ಲಿಯೂ ಬೀಳಲಿಲ್ಲ, ಯಾರ ಕಣ್ಣು ನೋಡಲಿಲ್ಲ.
- Lamentations 3:23–25 ಪ್ರಲಾಪಗಳು 3:23–25ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು. ಕರ್ತನೇ ನನ್ನ ಪಾಲೆಂದು ನನ್ನ ಪ್ರಾಣವು ಹೇಳುತ್ತದೆ, ಆದದರಿಂದ ನಾನು ಆತನಲ್ಲಿ ನಿರೀಕ್ಷೆ ಇಡುತ್ತೇನೆ. ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
- 1 Peter 1:4–5 1 ಪೇತ್ರನು 1:4–5ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ. ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
- Colossians 3:2–4 ಕೊಲೊಸ್ಸೆಯವರಿಗೆ 3:2–4ಮೇಲಿರು ವಂಥವುಗಳ ಮೇಲೆ ನಿಮ್ಮ ಮನಸ್ಸಿಡಿರಿ. ಭೂಸಂಬಂಧ ವಾದವುಗಳ ಮೇಲೆ ಇಡಬೇಡಿರಿ. ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ. ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- Psalm 16:11 ಕೀರ್ತನೆಗಳು 16:11ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Psalm 126:2–3 ಕೀರ್ತನೆಗಳು 126:2–3ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು. ಕರ್ತನು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ; ಆದಕಾರಣ ನಾವು ಸಂತೋಷಿಸುತ್ತಾ ಇದ್ದೇವೆ.
- 1 John 3:1–2 1 ಯೋಹಾನನು 3:1–2ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ. ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
- Psalm 23:5 ಕೀರ್ತನೆಗಳು 23:5ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
- 2 Corinthians 5:5 2 ಕೊರಿಂಥದವರಿಗೆ 5:5ಅದಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು ತಾನೇ ನಮಗೆ ಆತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
- Psalm 36:7–10 ಕೀರ್ತನೆಗಳು 36:7–10ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ. ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ. ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು. ನಿನ್ನನ್ನು ತಿಳಿದವರಿಗೆ ನಿನ್ನ ಕೃಪೆಯನ್ನೂ ಯಥಾರ್ಥ ಹೃದಯದವರಿಗೆ ನಿನ್ನ ನೀತಿಯನ್ನೂ ನೆಲೆಯಾಗಿರಿಸು.