Psalms · chapter 32 · verse 6
Psalm 32:6 in Kannada
ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.
Idakkoskara bhaktarellaru ninnannu kandukolluva kaaladalli ninage praarthane maaduvaru; nishchayavaagi bahala neerina pravaaha galu avana saviాpakke baruvadilla.
Psalm 32:6 in English
- King James Version (KJV)
- For this shall every one that is godly pray unto thee in a time when thou mayest be found: surely in the floods of great waters they shall not come nigh unto him.
- World English Bible (WEB)
- For this, let everyone who is godly pray to you in a time when you may be found. Surely when the great waters overflow, they shall not reach to him.
- American Standard Version (ASV)
- For this let every one that is godly pray unto thee in a time when thou mayest be found: Surely when the great waters overflow they shall not reach unto him.
- Bible in Basic English (BBE)
- For this cause let every saint make his prayer to you at a time when you are near: then the overflowing of the great waters will not overtake him.
- Darby Translation (DBY)
- For this shall every one that is godly pray unto thee at a time when thou mayest be found: surely in the floods of great waters they will not reach him.
- Webster's Bible (WBS)
- For this shall every one that is godly pray to thee in a time when thou mayest be found: surely in the floods of great waters they shall not come nigh to him.
- Young's Literal Translation (YLT)
- For this doth every saintly one pray to Thee, As the time to find. Surely at an overflowing of many waters, Unto him they come not.
Read in context
- 4ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.
- 5ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
- 6ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.
- 7ನೀನು ನನ್ನ ಮರೆಯು; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀ; ಬಿಡುಗಡೆಯ ಹಾಡುಗಳಿಂದ ನನ್ನನ್ನು ಆವರಿಸಿ ಕೊಳ್ಳುತ್ತೀ ಸೆಲಾ.
- 8ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
Cross references
- Isaiah 55:6 ಯೆಶಾಯ 55:6ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
- Isaiah 43:2 ಯೆಶಾಯ 43:2ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
- 2 Corinthians 6:2 2 ಕೊರಿಂಥದವರಿಗೆ 6:2(ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).
- Proverbs 1:28 ಜ್ಞಾನೋಕ್ತಿಗಳು 1:28ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.
- Psalm 34:2–5 ಕೀರ್ತನೆಗಳು 34:2–5ನನ್ನ ಪ್ರಾಣವು ಕರ್ತನಲ್ಲಿ ಹೊಗಳಿಕೊಳ್ಳುವದು; ಇದನ್ನು ದೀನರು ಕೇಳಿ ಸಂತೋಷಪಡುವರು. ನನ್ನ ಸಂಗಡ ಕರ್ತ ನನ್ನು ಘನಪಡಿಸಿರಿ. ನಾವು ಒಟ್ಟಾಗಿ ಆತನ ಹೆಸ ರನ್ನು ಘನಪಡಿಸೋಣ. ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು. ಅವರು ಆತನನ್ನು ದೃಷ್ಟಿಸಿ ಪ್ರಕಾಶ ಹೊಂದಿದರು. ಅವರ ಮುಖಗಳು ನಾಚಿಕೆಪಡಲಿಲ್ಲ.
- Psalm 4:3 ಕೀರ್ತನೆಗಳು 4:3ಕರ್ತನು ತನ್ನ ಭಕ್ತನನ್ನು ತನಗಾಗಿ ಪ್ರತ್ಯೇಕಿಸಿದ್ದಾನೆಂದು ತಿಳಿದು ಕೊಳ್ಳಿರಿ. ನಾನು ಕರ್ತನನ್ನು ಮೊರೆಯಿಡಲು ಆತನು ಕೇಳುವನು.
- Matthew 7:24–27 ಮತ್ತಾಯನು 7:24–27ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು. ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು. ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು. ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
- John 7:34 ಯೋಹಾನನು 7:34ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ ಅಂದನು.
- Psalm 40:3 ಕೀರ್ತನೆಗಳು 40:3ನನ್ನ ಬಾಯಲ್ಲಿ ನೂತನ ಹಾಡನ್ನು ಇಟ್ಟಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ; ಅನೇಕರು ಇದನ್ನು ನೋಡಿ ಭಯಪಟ್ಟು ಕರ್ತನಲ್ಲಿ ಭರವಸವಿಡುವರು.
- Psalm 42:7 ಕೀರ್ತನೆಗಳು 42:7ನಿನ್ನ ನೀರಿನ ಪ್ರವಾಹದ ಶಬ್ದದಿಂದ ಅಗಾಧವು ಅಗಾಧಕ್ಕೆ ಕೂಗು ತ್ತದೆ; ನಿನ್ನ ಅಲೆಗಳೂ ತೆರೆಗಳೂ ಎಲ್ಲಾ ನನ್ನ ಮೇಲೆ ಹಾದುಹೋಗಿವೆ.
- Psalm 144:7 ಕೀರ್ತನೆಗಳು 144:7ನಿನ್ನ ಕೈಯನ್ನು ಉನ್ನತದಿಂದ ಚಾಚಿ, ಮಹಾಜಲಗಳಿಂದಲೂ ಅನ್ಯರ ಮಕ್ಕಳ ಕೈಯಿಂದಲೂ ನನ್ನನ್ನು ತಪ್ಪಿಸು, ನನ್ನನ್ನು ಬಿಡಿಸು.
- Psalm 69:13–15 ಕೀರ್ತನೆಗಳು 69:13–15ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು. ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.