Psalms · chapter 33 · verse 16
Psalm 33:16 in Kannada
ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ.
Yaava arasanoo adhikavaada sainyadinda rakshisalpaduvadilla. Paraakrama shaaliyu adhikashaktiyinda bidisalpaduvadilla.
Psalm 33:16 in English
- King James Version (KJV)
- There is no king saved by the multitude of an host: a mighty man is not delivered by much strength.
- World English Bible (WEB)
- There is no king saved by the multitude of an army. A mighty man is not delivered by great strength.
- American Standard Version (ASV)
- There is no king saved by the multitude of a host: A mighty man is not delivered by great strength.
- Bible in Basic English (BBE)
- A king's salvation is not in the power of his army; a strong man does not get free by his great strength.
- Darby Translation (DBY)
- The king is not saved by the multitude of [his] forces; a mighty man is not delivered by much strength.
- Webster's Bible (WBS)
- There is no king saved by the multitude of a host: a mighty man is not delivered by much strength.
- Young's Literal Translation (YLT)
- The king is not saved by the multitude of a force. A mighty man is not delivered, By abundance of power.
Read in context
- 14ತನ್ನ ನಿವಾಸಸ್ಥಳದಿಂದ ಭೂನಿವಾ ಸಿಗಳೆಲ್ಲರ ಮೇಲೆ ಕಣ್ಣಿಡುತ್ತಾನೆ.
- 15ಅವರ ಹೃದಯ ಗಳನ್ನು ಏಕವಾಗಿ ರೂಪಿಸಿ ಅವರ ಕೆಲಸಗಳನ್ನೆಲ್ಲಾ ಗ್ರಹಿಸಿಕೊಳ್ಳುವವನು ಆತನೇ.
- 16ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ.
- 17ಕುದುರೆಯು ಭದ್ರತೆಗೆ ವ್ಯರ್ಥವಾಗಿದೆ; ಇಲ್ಲವೆ ತನ್ನ ಅಧಿಕಬಲದಿಂದ ಯಾರನ್ನೂ ತಪ್ಪಿಸುವದಿಲ್ಲ.
- 18ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
Cross references
- Psalm 44:3 ಕೀರ್ತನೆಗಳು 44:3ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
- Jeremiah 9:23 ಯೆರೆಮೀಯ 9:23ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ.
- Psalm 44:6–7 ಕೀರ್ತನೆಗಳು 44:6–7ನಾನು ನನ್ನ ಬಿಲ್ಲಿ ನಲ್ಲಿ ಭರವಸವಿಡುವದಿಲ್ಲ. ನನ್ನ ಕತ್ತಿಯು ನನ್ನನ್ನು ರಕ್ಷಿಸುವದಿಲ್ಲ. ನೀನು ನಮ್ಮ ವೈರಿಗಳಿಂದ ನಮ್ಮನ್ನು ರಕ್ಷಿಸಿದಿ; ನಮ್ಮನ್ನು ಹಗೆಮಾಡಿದವರನ್ನು ನಾಚಿಕೆ ಪಡಿಸಿದಿ.
- Judges 7:2 ನ್ಯಾಯಸ್ಥಾಪಕರು 7:2ಆಗ ಕರ್ತನು ಗಿದ್ಯೋನನಿಗೆ--ನಾನು ಮಿದ್ಯಾನ್ಯ ರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವದಕ್ಕೆ ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ; ಇಸ್ರಾಯೇಲ್ಯರುನನ್ನ ಕೈ ನನ್ನನ್ನು ರಕ್ಷಿಸಿತು ಎಂದು ನನಗೆ ವಿರೋಧವಾಗಿ ಹೆಚ್ಚಳ ಪಟ್ಟಾರು.
- 2 Chronicles 32:8–9 2 ಪೂರ್ವಕಾಲವೃತ್ತಾಂತ 32:8–9ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು. ಇದರ ತರುವಾಯ ಅಶ್ಶೂರಿನ ಅರಸನಾದ ಸನ್ಹೇ ರೀಬನೂ ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ ಅವನು ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಹಿಜ್ಕೀ ಯನ ಬಳಿಗೂ ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳು ಹಿಸಿ--ಅಶ್ಶೂರಿನ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ--
- 1 Samuel 17:45–49 1 ಸಮುವೇಲನು 17:45–49ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ. ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ದಿನ ಇಸ್ರಾಯೇಲ್ಯರೊಳಗೆ ದೇವರು ಇದ್ದಾನೆಂದು ಭೂಲೋಕದವರೆಲ್ಲರೂ ತಿಳಿ ಯುವರು. ಕರ್ತನು ಕತ್ತಿಯಿಂದಲೂ ಈಟಿಯಿಂದಲೂ ರಕ್ಷಿಸುವದಿಲ್ಲ ಎಂದು ಈ ಸಭೆಯೆಲ್ಲಾ ತಿಳಿದುಕೊಳ್ಳು ವದು; ಯಾಕಂದರೆ ಯುದ್ಧವು ಕರ್ತನದು; ಆತನು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು. ಆ ಪಿಲಿಷ್ಟಿಯನು ಎದ್ದು ದಾವೀದನಿಗೆ ಎದುರಾಗಿ ಸವಿಾಪಿಸಿ ಬರುವಾಗ ದಾವೀದನು ತ್ವರೆಯಾಗಿ ಆ ಸೈನ್ಯಕ್ಕೆ ಫಿಲಿಷ್ಟಿಯನಿಗೆದುರಿಗೆ ಓಡಿಹೋಗಿ ತನ್ನ ಕೈಯನ್ನು ಚೀಲದಲ್ಲಿ ಹಾಕಿ ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು ಕವಣೆಯಲ್ಲಿಟ್ಟು ಬೀಸಿ ಫಿಲಿಷ್ಟಿ ಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕಿದ್ದರಿಂದ ಅವನು ನೆಲದ ಮೇಲೆ ಬೋರಲು ಬಿದ್ದನು.
- 2 Samuel 21:16–22 2 ಸಮುವೇಲನು 21:16–22ಆಗ ಮುನ್ನೂರು ಶೇಕೆಲ ತೂಕವಾದ ಹಿತ್ತಾಳೆಯ ಈಟಿಯುಳ್ಳವನಾಗಿ ಹೊಸ ಕತ್ತಿಯನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ಮಹಾ ಶರೀರದವನ ಮಕ್ಕಳಲ್ಲಿ ಇಷ್ಬೀಬೆನೋಬ್ನು ದಾವೀದ ನನ್ನು ಕೊಲ್ಲಬೇಕೆಂದಿದ್ದನು. ಆದರೆ ಚೆರೂಯಳ ಮಗನಾದ ಅಬೀಷೈಯು ಅವನಿಗೆ ಸಹಾಯವಾಗಿ ಬಂದು ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿ ದನು. ಆಗ ದಾವೀದನ ಜನರು ಅವನಿಗೆ--ನೀನು ಇಸ್ರಾಯೇಲಿನ ಬೆಳಕನ್ನು ಆರಿಸಿಬಿಡದ ಹಾಗೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಹೊರಡಬೇಡ ಎಂದು ಅವನಿಗೆ ಆಣೆಯಿಟ್ಟರು. ತರುವಾಯ ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿ ನಲ್ಲಿ ಯುದ್ಧ ಉಂಟಾಯಿತು. ಆಗ ಹುಷಾತನಾದ ಸಿಬ್ಬೆಕೈನು ಮಹಾಶರೀರದವನ ಮಕ್ಕಳಲ್ಲಿ ಸಫ್ ಎಂಬವನನ್ನು ಕೊಂದನು. ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ಉಂಟಾದಾಗ ಬೇತ್ಲೆಹೇಮಿನವನಾದ ಯಾರೇಯೋರೆ ಗೀಮ್ ಎಂಬವನ ಮಗನಾಗಿರುವ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನ ಸಹೋದರನನ್ನು ಕೊಂದನು. ಈ ಗೊಲ್ಯಾತನ ಈಟಿಯ ಕಟ್ಟಿಗೆಯು ನೆಯ್ಯುವವರ ದೋಣೀ ಮರಕ್ಕೆ ಸಮಾನವಾಗಿತ್ತು. ಗತ್ ಊರಿನಲ್ಲಿ ಯುದ್ಧ ಉಂಟಾದಾಗ ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು; ಅವನ ಕೈಕಾಲುಗಳ ಬೆರಳುಗಳು ಆರು ಆರಾಗಿ ಲೆಖ್ಖದಲ್ಲಿ ಇಪ್ಪತ್ತು ನಾಲ್ಕು ಆಗಿದ್ದವು. ಇವನು ಸಹ ಮಹಾಶರೀರದವನಿಗೆ ಹುಟ್ಟಿ ದನು. ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾಗಿರುವ ಶಿಮ್ಮನ ಮಗ ನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.ಈ ನಾಲ್ಕು ಮಂದಿಯು ಗತ್ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು. ಈ ನಾಲ್ಕು ಮಂದಿಯು ಗತ್ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು.
- Exodus 14:28 ವಿಮೋಚನಕಾಂಡ 14:28ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.
- 1 Samuel 14:8–16 1 ಸಮುವೇಲನು 14:8–16ಆಗ ಯೋನಾತಾನನುಇಗೋ, ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು. ಅವರು--ನಾವು ನಿಮ್ಮ ಬಳಿಗೆ ಬರುವ ವರೆಗೆ ಸುಮ್ಮನೆ ನಿಲ್ಲಿರೆಂದು ನಮ್ಮ ಸಂಗಡ ಹೇಳಿದರೆ ನಾವು ಅವರ ಬಳಿಗೆ ಹೋಗದೆ ನಮ್ಮ ಸ್ಥಳದಲ್ಲಿ ನಿಲ್ಲುವೆವು. ಒಂದು ವೇಳೆ ಅವರುನಮ್ಮ ಬಳಿಗೆ ಬನ್ನಿರಿ ಎಂದು ಹೇಳಿದರೆ ಹೋಗುವೆವು. ಕರ್ತನು ಅವರನ್ನು ನಮ್ಮ ಕೈಗೆ ಒಪ್ಪಿಸಿ ಕೊಟ್ಟನೆಂಬದಕ್ಕೆ ಇದೇ ನಮಗೆ ಗುರುತಾಗಿರುವದು ಅಂದನು. ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು. ಠಾಣದ ಮನುಷ್ಯರು ಯೋನಾತಾನನಿಗೂ ಅವನ ಆಯುಧ ಹೊರುವವನಿಗೂ--ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯ ತೋರಿಸುತ್ತೇವೆ ಎಂದು ಪ್ರತ್ಯುತ್ತರಕೊಟ್ಟರು. ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ವನಿಗೆ--ನನ್ನ ಹಿಂದೆ ಏರಿ ಬಾ; ಕರ್ತನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಟ್ಟನು ಅಂದನು. ಯೋನಾತಾನನು ತನ್ನ ಕೈಗಳಿಂದಲೂ ಕಾಲುಗಳಿಂದ ಲೂ ಹತ್ತಿದನು. ಅವನ ಆಯುಧಗಳನ್ನು ಹೊರುವ ವನು ಅವನ ಹಿಂದೆ ಹತ್ತಿದನು. ಆಗ ಪಿಲಿಷ್ಟಿಯರು ಯೋನಾತಾನನ ಮುಂದೆ ಬಿದ್ದರು. ಅವನ ಆಯುಧ ಗಳನ್ನು ಹೊರುವವನು ಅವನ ಹಿಂದೆ ಕೊಲ್ಲುತ್ತಾ ಹೋದನು. ಯೋನಾತಾನನೂ ಅವನ ಆಯುಧ ಗಳನ್ನು ಹೊರುವವನೂ ಹೊಡೆದ ಆ ಮೊದಲ ಸಂಹಾರದಲ್ಲಿ ಅರ್ಧ ಎಕರೆ ಭೂಮಿಯಲ್ಲಿ ಬಿದ್ದವರು ಸುಮಾರು ಇಪ್ಪತ್ತು ಜನರಾಗಿದ್ದರು. ಆಗ ದಂಡಿನ ಹೊಲದಲ್ಲಿಯ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣದವರೂ ಕೊಳ್ಳೆಗಾರರೂ ಹೆದರಿಕೊಂಡರು; ಇದಲ್ಲದೆ ಭೂಮಿ ಕಂಪಿಸಿತು. ಹೀಗೆ ಅಲ್ಲಿ ಮಹಾದೊಡ್ಡ ಕಳವಳವಾಯಿತು. ಬೆನ್ಯಾವಿಾ ನನ ದೇಶದ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ನೋಡಿದಾಗ ಇಗೋ, ಆ ಗುಂಪಿನವರು ಕಡಿಮೆ ಯಾಗುತ್ತಾ ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು.
- 2 Chronicles 32:21 2 ಪೂರ್ವಕಾಲವೃತ್ತಾಂತ 32:21ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.
- Joshua 14:12 ಯೆಹೋಶುವ 14:12ಆದದರಿಂದ ಕರ್ತನು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು.
- Judges 7:12–25 ನ್ಯಾಯಸ್ಥಾಪಕರು 7:12–25ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು. ಗಿದ್ಯೋನನು ಬಂದಾಗ ಇಗೋ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇ ನಂದರೆ--ಇಗೋ, ನಾನು ಒಂದು ಕನಸನ್ನು ಕಂಡೆನು. ಇಗೋ, ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾ ನ್ಯರ ದಂಡಿನ ಮೇಲೆ ಹೊರಳಿ ಒಂದು ಡೇರೆಯಮೇಲೆ ಬಂದು ಅದು ಬೀಳುವ ಹಾಗೆ ಅದನ್ನು ಹೊಡೆದು ಕೆಡವಿಹಾಕಿತು; ಆಗ ಡೇರೆಯು ಬಿದ್ದುಹೋಯಿತು ಅಂದನು. ಅವನ ಜೊತೆಗಾರನು ಪ್ರತ್ಯುತ್ತರ ಕೊಟ್ಟು --ಇದು ಯೋವಾಷನ ಮಗನಾದ ಗಿದ್ಯೋನನೆಂಬ ಇಸ್ರಾಯೇಲ್ನ ಮನುಷ್ಯನ ಕತ್ತಿಯೇ ಹೊರತು ಬೇರೆ ಯಲ್ಲ. ದೇವರು ಮಿದ್ಯಾನ್ಯರನ್ನೂ ಈ ಸಮಸ್ತ ದಂಡನ್ನೂ ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು ಅಂದನು. ಗಿದ್ಯೋನನು ಆ ಕನಸಿನ ವಿವರವನ್ನೂ ಅದರ ಅರ್ಥವನ್ನೂ ಕೇಳಿದಾಗ ಅವನು ಆರಾಧಿಸಿ ಇಸ್ರಾ ಯೇಲ್ ದಂಡಿಗೆ ತಿರುಗಿ ಬಂದು--ಏಳಿರಿ, ಯಾಕಂದರೆ ಕರ್ತನು ಮಿದ್ಯಾನ್ಯರ ದಂಡನ್ನು ನಿಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಹೇಳಿದನು. ಆ ಮುನ್ನೂರು ಜನರನ್ನು ಮೂರು ಗುಂಪಾಗಿ ವಿಭಾಗಿಸಿ ಎಲ್ಲರ ಕೈಯಲ್ಲಿ ತುತೂರಿಗಳನ್ನೂ ಬರಿದಾದ ಕೊಡಗಳನ್ನೂ ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟು ಅವರಿಗೆ ಹೇಳಿದ್ದೇ ನಂದರೆ-- ನಾನು ಮಾಡುವದನ್ನು ನೋಡಿ ಹಾಗೆಯೇ ನೀವೂ ಮಾಡಿರಿ. ಇಗೋ, ನಾನು ದಂಡಿನ ಹೊರಗೆ ಬಂದಾಗ ಹೇಗೆ ಮಾಡುವೆನೋ ಹಾಗೆಯೇ ನೀವೂ ಮಾಡಿರಿ. ನಾನೂ ನನ್ನ ಸಂಗಡ ಇರುವವ ರೆಲ್ಲರೂ ತುತೂರಿಯನ್ನು ಊದುವಾಗ ನೀವೆಲ್ಲರೂ ದಂಡಿನ ಸುತ್ತಲೂ ಎಲ್ಲಾ ಕಡೆಯಲ್ಲೂ ತುತೂರಿಗಳನ್ನು ಊದಿ ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಹೇಳಿರಿ ಅಂದನು. ಮಧ್ಯ ರಾತ್ರಿ ಮೊದಲನೆಯ ಜಾವದಲ್ಲಿ ಕಾವಲು ಗಾರರನ್ನು ಬದಲಾಯಿಸಿದಾಗ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ ದಂಡಿನ ಹೊರಗೆ ಬಂದು ತುತೂರಿಗಳನ್ನು ಊದಿ ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು. ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು. ಆಗ ದಂಡೆಲ್ಲಾ ಕಿರಿಚಿಕೊಂಡು ಓಡಿ ಹೋದರು. ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು. ನಫ್ತಾಲಿ ಯಿಂದಲೂ ಆಶೇರನಿಂದಲೂ ಸಮಸ್ತ ಮನಸ್ಸೆಯ ವರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು. ಇದಲ್ಲದೆ ಗಿದ್ಯೋನನು ಎಫ್ರಾಯಾಮ್ ಬೆಟ್ಟ ದಲ್ಲೆಲ್ಲಾ ದೂತರನ್ನು ಕಳುಹಿಸಿ--ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ ಬೇತ್ಬಾರ ಮತ್ತು ಯೊರ್ದನ್ ವರೆಗಿರುವ ನೀರುಗಳನ್ನು ಅವರಿಗೆ ಮುಂದಾಗಿ ಹಿಡಿಯಿರಿ ಎಂದು ಹೇಳಿದನು. ಹಾಗೆಯೇ ಎಫ್ರಾಯಾಮ್ ಮನುಷ್ಯರೆಲ್ಲರು ಕೂಡಿಕೊಂಡು ಬೇತ್ಬಾರ ಮತ್ತು ಯೊರ್ದನ್ ವರೆಗೆ ನೀರುಗಳನ್ನು ಹಿಡಿದರು.ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು. ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.