Skip to content
ThuthiThuthiThuthi
Psalms · chapter 34 of 150 · 22 verses

Psalm 34 in Kannada

ಕೀರ್ತನೆಗಳು 34

  1. ನಾನು ಎಲ್ಲಾ ಕಾಲಗಳಲ್ಲಿ ಕರ್ತನನ್ನು ಸ್ತುತಿಸುವೆನು; ಆತನ ಸ್ತೋತ್ರವು ಯಾವಾ ಗಲೂ ನನ್ನ ಬಾಯಲ್ಲಿ ಇರುವದು.

    [A Psalm] of David, when he changed his behaviour before Abimelech; who drove him away, and he departed. I will bless the LORD at all times: his praise [shall] continually [be] in my mouth.

  2. ನನ್ನ ಪ್ರಾಣವು ಕರ್ತನಲ್ಲಿ ಹೊಗಳಿಕೊಳ್ಳುವದು; ಇದನ್ನು ದೀನರು ಕೇಳಿ ಸಂತೋಷಪಡುವರು.

    My soul shall make her boast in the LORD: the humble shall hear [thereof], and be glad.

  3. ನನ್ನ ಸಂಗಡ ಕರ್ತ ನನ್ನು ಘನಪಡಿಸಿರಿ. ನಾವು ಒಟ್ಟಾಗಿ ಆತನ ಹೆಸ ರನ್ನು ಘನಪಡಿಸೋಣ.

    O magnify the LORD with me, and let us exalt his name together.

  4. ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು.

    I sought the LORD, and he heard me, and delivered me from all my fears.

  5. ಅವರು ಆತನನ್ನು ದೃಷ್ಟಿಸಿ ಪ್ರಕಾಶ ಹೊಂದಿದರು. ಅವರ ಮುಖಗಳು ನಾಚಿಕೆಪಡಲಿಲ್ಲ.

    They looked unto him, and were lightened: and their faces were not ashamed.

  6. ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.

    This poor man cried, and the LORD heard [him], and saved him out of all his troubles.

  7. ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.

    The angel of the LORD encampeth round about them that fear him, and delivereth them.

  8. ಕರ್ತನು ಒಳ್ಳೆಯವನೆಂದು ರುಚಿಸಿ ನೋಡಿರಿ; ಆತನಲ್ಲಿ ಆಶ್ರ ಯಿಸಿಕೊಳ್ಳುವ ಮನುಷ್ಯನು ಧನ್ಯನು.

    O taste and see that the LORD [is] good: blessed [is] the man [that] trusteth in him.

  9. ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ.

    O fear the LORD, ye his saints: for [there is] no want to them that fear him.

  10. ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.

    The young lions do lack, and suffer hunger: but they that seek the LORD shall not want any good [thing].

  11. ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.

    Come, ye children, hearken unto me: I will teach you the fear of the LORD.

  12. ಒಳ್ಳೆಯದನ್ನು ನೋಡುವಂತೆ ದಿವಸಗಳನ್ನು ಪ್ರೀತಿ ಮಾಡಿ, ಜೀವವನ್ನು ಕೋರುವ ಮನುಷ್ಯನು ಯಾರು?

    What man [is he that] desireth life, [and] loveth [many] days, that he may see good?

  13. ಕೇಡಿನಿಂದ ನಿನ್ನ ನಾಲಿಗೆಯನ್ನೂ ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ಕಾಯಿ.

    Keep thy tongue from evil, and thy lips from speaking guile.

  14. ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.

    Depart from evil, and do good; seek peace, and pursue it.

  15. ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.

    The eyes of the LORD [are] upon the righteous, and his ears [are open] unto their cry.

  16. ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ.

    The face of the LORD [is] against them that do evil, to cut off the remembrance of them from the earth.

  17. ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ.

    [The righteous] cry, and the LORD heareth, and delivereth them out of all their troubles.

  18. ಮುರಿದ ಹೃದಯದವರಿಗೆ ಕರ್ತನು ಸವಿಾಪವಾಗಿದ್ದಾನೆ; ಜಜ್ಜಿದ ಆತ್ಮವನ್ನು ರಕ್ಷಿಸುತ್ತಾನೆ.

    The LORD [is] nigh unto them that are of a broken heart; and saveth such as be of a contrite spirit.

  19. ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.

    Many [are] the afflictions of the righteous: but the LORD delivereth him out of them all.

  20. ಆತನ ಎಲುಬು ಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿಯಲ್ಪಡುವದಿಲ್ಲ.

    He keepeth all his bones: not one of them is broken.

  21. ಕೇಡು ದುಷ್ಟನನ್ನು ಕೊಲ್ಲು ವದು; ನೀತಿವಂತನನ್ನು ಹಗೆಮಾಡುವವರು ಹಾಳಾ ಗುವರು.ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.

    Evil shall slay the wicked: and they that hate the righteous shall be desolate.

  22. ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.

    The LORD redeemeth the soul of his servants: and none of them that trust in him shall be desolate.

All chapters of Psalms · Kannada Bible · Psalm 34 in Tamil

Kannada Bible: Kannada Old Version, public domain.

King James Version: public domain.