Psalms · chapter 34 · verse 11
Psalm 34:11 in Kannada
ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.
Makkale, neevu bandu nanna maatannu keliri; naanu kartana bhayavannu nimage kalisuvenu.
Psalm 34:11 in English
- King James Version (KJV)
- Come, ye children, hearken unto me: I will teach you the fear of the LORD.
- World English Bible (WEB)
- Come, you children, listen to me. I will teach you the fear of the LORD.
- American Standard Version (ASV)
- Come, ye children, hearken unto me: I will teach you the fear of Jehovah.
- Bible in Basic English (BBE)
- Come, children, give attention to me; I will be your teacher in the fear of the Lord.
- Darby Translation (DBY)
- Come, ye sons, hearken unto me: I will teach you the fear of Jehovah.
- Webster's Bible (WBS)
- Come, ye children, hearken to me; I will teach you the fear of the LORD.
- Young's Literal Translation (YLT)
- Come ye, children, hearken to me, The fear of Jehovah I do teach you.
Read in context
- 9ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ.
- 10ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.
- 11ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.
- 12ಒಳ್ಳೆಯದನ್ನು ನೋಡುವಂತೆ ದಿವಸಗಳನ್ನು ಪ್ರೀತಿ ಮಾಡಿ, ಜೀವವನ್ನು ಕೋರುವ ಮನುಷ್ಯನು ಯಾರು?
- 13ಕೇಡಿನಿಂದ ನಿನ್ನ ನಾಲಿಗೆಯನ್ನೂ ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ಕಾಯಿ.
Cross references
- Proverbs 1:7 ಜ್ಞಾನೋಕ್ತಿಗಳು 1:7ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
- Psalm 111:10 ಕೀರ್ತನೆಗಳು 111:10ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
- Proverbs 2:1–9 ಜ್ಞಾನೋಕ್ತಿಗಳು 2:1–9ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ, ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ. ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ. ನೀತಿವಂತರಿಗೋಸ್ಕರ ಆತನು ಸುಜ್ಞಾನವನ್ನು ಕೂಡಿಸುವನು. ಯಥಾರ್ಥದಿಂದ ನಡೆದುಕೊಳ್ಳುವವರಿಗೆ ಆತನು ಗುರಾಣಿಯಾಗಿದ್ದಾನೆ. ತೀರ್ಪಿನ ದಾರಿಗಳನ್ನು ಆತನು ಕಾಯುತ್ತಾನೆ. ತನ್ನ ಪರಿಶುದ್ಧರ ಮಾರ್ಗವನ್ನು ಭದ್ರಪಡಿಸುತ್ತಾನೆ. ಆಗ ನೀನು ನ್ಯಾಯವನ್ನೂ ತೀರ್ಪನ್ನೂ ನೀತಿಯನ್ನೂ ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದು ಕೊಳ್ಳುವಿ.
- Psalm 32:8 ಕೀರ್ತನೆಗಳು 32:8ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
- Isaiah 28:9 ಯೆಶಾಯ 28:9ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಯಾರಿಗೆ ಬೋಧನೆಯನ್ನು ತಿಳುಕೊಳ್ಳುವ ಹಾಗೆ ಮಾಡುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ? ಎದೆ ಬಿಟ್ಟ ಮಕ್ಕಳಿಗೋ?
- Psalm 66:16 ಕೀರ್ತನೆಗಳು 66:16ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು.
- Proverbs 8:17 ಜ್ಞಾನೋಕ್ತಿಗಳು 8:17ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ. ಶೀಘ್ರವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
- Proverbs 7:24 ಜ್ಞಾನೋಕ್ತಿಗಳು 7:24ಆದುದರಿಂದ ಓ ನನ್ನ ಮಕ್ಕಳಿರಾ, ನನ್ನ ಕಡೆಗೆ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳನ್ನು ಆಲಿಸಿರಿ.
- Proverbs 4:1 ಜ್ಞಾನೋಕ್ತಿಗಳು 4:1ಮಕ್ಕಳಿರಾ, ತಂದೆಯ ಶಿಕ್ಷಣವನ್ನು ನೀವು ಕೇಳಿರಿ. ವಿವೇಕವನ್ನು ಗ್ರಹಿಸುವಂತೆ ನೋಡಿರಿ.
- Matthew 18:2–4 ಮತ್ತಾಯನು 18:2–4ಆಗ ಯೇಸು ಒಂದು ಚಿಕ್ಕ ಮಗುವನ್ನು ತನ್ನ ಬಳಿಗೆ ಕರೆದು ಅವನನ್ನು ಅವರ ಮಧ್ಯದಲ್ಲಿ ನಿಲ್ಲಿಸಿ-- ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು.
- Proverbs 8:32 ಜ್ಞಾನೋಕ್ತಿಗಳು 8:32ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.
- Proverbs 22:6 ಜ್ಞಾನೋಕ್ತಿಗಳು 22:6ನಡೆಯಬೇಕಾದ ಮಾರ್ಗದಲ್ಲಿರುವಂತೆ ಹುಡುಗನಿಗೆ ಶಿಕ್ಷಣಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದ ರಿಂದ ಹೊರಟು ಹೋಗುವದಿಲ್ಲ.