Psalms · chapter 34 · verse 13
Psalm 34:13 in Kannada
ಕೇಡಿನಿಂದ ನಿನ್ನ ನಾಲಿಗೆಯನ್ನೂ ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ಕಾಯಿ.
Kedininda ninna naaligeyannoo mosavannu nudiyada haage ninna tutigalannoo kaayi.
Psalm 34:13 in English
- King James Version (KJV)
- Keep thy tongue from evil, and thy lips from speaking guile.
- World English Bible (WEB)
- Keep your tongue from evil, and your lips from speaking lies.
- American Standard Version (ASV)
- Keep thy tongue from evil, And thy lips from speaking guile.
- Bible in Basic English (BBE)
- Keep your tongue from evil, and your lips from words of deceit.
- Darby Translation (DBY)
- Keep thy tongue from evil, and thy lips from speaking guile;
- Webster's Bible (WBS)
- Keep thy tongue from evil, and thy lips from speaking guile.
- Young's Literal Translation (YLT)
- Keep thy tongue from evil, And thy lips from speaking deceit.
Read in context
- 11ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.
- 12ಒಳ್ಳೆಯದನ್ನು ನೋಡುವಂತೆ ದಿವಸಗಳನ್ನು ಪ್ರೀತಿ ಮಾಡಿ, ಜೀವವನ್ನು ಕೋರುವ ಮನುಷ್ಯನು ಯಾರು?
- 13ಕೇಡಿನಿಂದ ನಿನ್ನ ನಾಲಿಗೆಯನ್ನೂ ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ಕಾಯಿ.
- 14ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.
- 15ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.
Cross references
- James 3:5–10 ಯಾಕೋಬನು 3:5–10ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ. ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ. ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ. ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ. ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.
- Psalm 141:3 ಕೀರ್ತನೆಗಳು 141:3ಓ ಕರ್ತನೇ, ನನ್ನ ಬಾಯಿಗೆ ಕಾವ ಲಿಡು; ನನ್ನ ತುಟಿಗಳ ಕದವನ್ನು ಕಾಯಿ. ಅಪರಾಧ ಮಾಡುವ ಮನುಷ್ಯರ ಸಂಗಡ ದುಷ್ಟತ್ವದಿಂದ ಕರ್ಮಗಳನ್ನು ನಡಿಸುವ ಕೆಟ್ಟ ಕಾರ್ಯಕ್ಕೆ
- Proverbs 21:23 ಜ್ಞಾನೋಕ್ತಿಗಳು 21:23ತನ್ನ ಬಾಯಿಯನ್ನು ನಾಲಿಗೆಯನ್ನು ಕಾಯುವ ವನು ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
- 1 Peter 2:22 1 ಪೇತ್ರನು 2:22ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.
- James 1:26 ಯಾಕೋಬನು 1:26ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
- James 1:19 ಯಾಕೋಬನು 1:19ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
- Colossians 3:9 ಕೊಲೊಸ್ಸೆಯವರಿಗೆ 3:9ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ?
- Proverbs 13:3 ಜ್ಞಾನೋಕ್ತಿಗಳು 13:3ತನ್ನ ಬಾಯನ್ನು ಕಾಪಾಡುವವನು ಜೀವ ವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಅಗಲವಾಗಿ ತೆರೆಯುವವನಿಗೆ ನಾಶನವಾಗುವದು.
- James 3:2 ಯಾಕೋಬನು 3:2ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.
- Psalm 39:1 ಕೀರ್ತನೆಗಳು 39:1ನನ್ನ ನಾಲಿಗೆಯಿಂದ ಪಾಪಮಾಡದ ಹಾಗೆ ನನ್ನ ಮಾರ್ಗಗಳನ್ನು ಕಾಪಾಡಿ ಕೊಳ್ಳುವೆನೆಂದೂ ದುಷ್ಟನು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಇಟ್ಟುಕೊಳ್ಳುವೆನೆಂದೂ ಹೇಳಿದೆನು.
- Matthew 12:35–37 ಮತ್ತಾಯನು 12:35–37ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ. ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು. ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.
- Proverbs 12:22 ಜ್ಞಾನೋಕ್ತಿಗಳು 12:22ಸುಳ್ಳಾ ಡುವ ತುಟಿಗಳು ಕರ್ತನಿಗೆ ಅಸಹ್ಯವಾಗಿವೆ. ಸತ್ಯದಿಂದ ನಡೆದುಕೊಳ್ಳುವವರು ಆತನ ಆನಂದವಾಗಿದ್ದಾರೆ.