Psalms · chapter 34 · verse 17
Psalm 34:17 in Kannada
ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ.
Neetivantaru koogu ttaare; aaga kartanu keli avara ellaa ikkattugalolaginda avarannu bidisuttaane.
Psalm 34:17 in English
- King James Version (KJV)
- [The righteous] cry, and the LORD heareth, and delivereth them out of all their troubles.
- World English Bible (WEB)
- The righteous cry, and the LORD hears, and delivers them out of all their troubles.
- American Standard Version (ASV)
- [The righteous] cried, and Jehovah heard, And delivered them out of all their troubles.
- Bible in Basic English (BBE)
- The cry of the upright comes before the Lord, and he takes them out of all their troubles.
- Darby Translation (DBY)
- [The righteous] cry, and Jehovah heareth, and delivereth them out of all their troubles.
- Webster's Bible (WBS)
- [The righteous] cry, and the LORD heareth, and delivereth them out of all their troubles.
- Young's Literal Translation (YLT)
- They cried, and Jehovah heard, And from all their distresses delivered them.
Read in context
- 15ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.
- 16ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ.
- 17ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ.
- 18ಮುರಿದ ಹೃದಯದವರಿಗೆ ಕರ್ತನು ಸವಿಾಪವಾಗಿದ್ದಾನೆ; ಜಜ್ಜಿದ ಆತ್ಮವನ್ನು ರಕ್ಷಿಸುತ್ತಾನೆ.
- 19ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
Cross references
- Psalm 145:18–20 ಕೀರ್ತನೆಗಳು 145:18–20ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ. ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ. ಕರ್ತನು ತನ್ನನ್ನು ಪ್ರೀತಿ ಮಾಡುವ ವರೆಲ್ಲರನ್ನು ಕಾಪಾಡುತ್ತಾನೆ; ಆದರೆ ದುಷ್ಟರೆಲ್ಲರನ್ನು ನಾಶಮಾಡುತ್ತಾನೆ.ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
- Isaiah 65:24 ಯೆಶಾಯ 65:24ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Psalm 34:19 ಕೀರ್ತನೆಗಳು 34:19ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
- Psalm 34:6 ಕೀರ್ತನೆಗಳು 34:6ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
- Psalm 91:15 ಕೀರ್ತನೆಗಳು 91:15ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- Psalm 34:15 ಕೀರ್ತನೆಗಳು 34:15ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.
- Acts 12:5–11 ಅಪೊಸ್ತಲರ ಕೃತ್ಯಗಳು 12:5–11ಪೇತ್ರನು ಸೆರೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ದೇವರಿಗೆ ಎಡೆಬಿಡದೆ ಪ್ರಾರ್ಥಿಸುತ್ತಿದ್ದರು. ಹೆರೋದನು ಪೇತ್ರನನ್ನು ಹೊರಗೆ ತರಬೇಕೆಂದಿದ್ದ ಅದೇ ರಾತ್ರಿಯಲ್ಲಿ ಅವನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟು ಇಬ್ಬರು ಸೈನಿಕರ ಮಧ್ಯದಲ್ಲಿ ನಿದ್ರೆಮಾಡುತ್ತಿದ್ದನು; ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯು ತ್ತಿದ್ದರು. ಆಗ ಇಗೋ, ಕರ್ತನ ದೂತನು ಪೇತ್ರನ ಬಳಿಗೆ ಬಂದಾಗ ಅವನಿದ್ದ ಸೆರೆಮನೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ--ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಂದ ಸರಪಣಿಗಳು ಕಳಚಿಬಿದ್ದವು. ಆ ದೂತನು ಅವನಿಗೆ--ನಡುಕಟ್ಟಿಕೊಂಡು ನಿನ್ನ ಕೆರಗಳನ್ನು ಮೆಟ್ಟಿಕೋ ಎಂದು ಹೇಳಲು ಅವನು ಹಾಗೆಯೇ ಮಾಡಿದನು. ಆ ದೂತನು ಅವನಿಗೆ ನಿನ್ನ ಮೇಲಂಗಿ ಯನ್ನು ಹಾಕಿಕೊಂಡು ನನ್ನ ಹಿಂದೆ ಬಾ ಅಂದನು. ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ ಅವನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ದರ್ಶನವೆಂದು ನೆನಸಿದನು. ಅವನು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೆ ಆ ದೂತನು ಅವನನ್ನು ಬಿಟ್ಟು ಹೊರಟುಹೋದನು. ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.
- 2 Chronicles 32:24 2 ಪೂರ್ವಕಾಲವೃತ್ತಾಂತ 32:24ಆ ದಿನಗಳಲ್ಲಿ ಹಿಜ್ಕೀಯನು ಸಾಯುವ ರೋಗ ದಲ್ಲಿದ್ದದ್ದರಿಂದ ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ದನು. ಆಗ ಆತನು ಅವನ ಸಂಗಡ ಮಾತನಾಡಿ ಅವನಿಗೆ ಗುರುತನ್ನು ಕೊಟ್ಟನು.
- 2 Chronicles 32:20–21 2 ಪೂರ್ವಕಾಲವೃತ್ತಾಂತ 32:20–21ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು. ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.