Psalms · chapter 34 · verse 19
Psalm 34:19 in Kannada
ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
Neetivantanige baruva kedugalu bahalavaagive; aadare avellavugalinda kartanu avanannu bidisuttaane.
Psalm 34:19 in English
- King James Version (KJV)
- Many [are] the afflictions of the righteous: but the LORD delivereth him out of them all.
- World English Bible (WEB)
- Many are the afflictions of the righteous, but the LORD delivers him out of them all.
- American Standard Version (ASV)
- Many are the afflictions of the righteous; But Jehovah delivereth him out of them all.
- Bible in Basic English (BBE)
- Great are the troubles of the upright: but the Lord takes him safely out of them all.
- Darby Translation (DBY)
- Many are the adversities of the righteous, but Jehovah delivereth him out of them all:
- Webster's Bible (WBS)
- Many [are] the afflictions of the righteous: but the LORD delivereth him out of them all.
- Young's Literal Translation (YLT)
- Many [are] the evils of the righteous, Out of them all doth Jehovah deliver him.
Read in context
- 17ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ.
- 18ಮುರಿದ ಹೃದಯದವರಿಗೆ ಕರ್ತನು ಸವಿಾಪವಾಗಿದ್ದಾನೆ; ಜಜ್ಜಿದ ಆತ್ಮವನ್ನು ರಕ್ಷಿಸುತ್ತಾನೆ.
- 19ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
- 20ಆತನ ಎಲುಬು ಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿಯಲ್ಪಡುವದಿಲ್ಲ.
- 21ಕೇಡು ದುಷ್ಟನನ್ನು ಕೊಲ್ಲು ವದು; ನೀತಿವಂತನನ್ನು ಹಗೆಮಾಡುವವರು ಹಾಳಾ ಗುವರು.ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.
Cross references
- Psalm 34:17 ಕೀರ್ತನೆಗಳು 34:17ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ.
- 1 Peter 4:12–13 1 ಪೇತ್ರನು 4:12–13ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ. ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.
- Psalm 34:6 ಕೀರ್ತನೆಗಳು 34:6ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
- 2 Corinthians 4:17 2 ಕೊರಿಂಥದವರಿಗೆ 4:17ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
- John 16:33 ಯೋಹಾನನು 16:33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- Psalm 34:4 ಕೀರ್ತನೆಗಳು 34:4ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು.
- Job 5:19 ಯೋಬನು 5:19ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.
- 2 Timothy 3:11–12 2 ತಿಮೊಥೆಯನಿಗೆ 3:11–12ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು. ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು.
- Proverbs 24:16 ಜ್ಞಾನೋಕ್ತಿಗಳು 24:16ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.
- 2 Corinthians 4:7–12 2 ಕೊರಿಂಥದವರಿಗೆ 4:7–12ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು. ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ. ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟ ವರಾಗಿದ್ದರೂ ನಾಶವಾದವರಲ್ಲ. ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ. ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ. ಹೀಗೆ ನಮ್ಮಲ್ಲಿ ಮರಣವೂ ನಿಮ್ಮಲ್ಲಿ ಜೀವವೂ ಪ್ರವರ್ತಿಸುತ್ತದೆ.
- Psalm 71:20 ಕೀರ್ತನೆಗಳು 71:20ಕಠಿಣವಾದ ಇಕ್ಕಟ್ಟುಗಳನ್ನು ನೋಡಮಾಡಿದ ನನ್ನನ್ನು ನೀನು ತಿರಿಗಿ ಬದುಕಿಸಿದಿ; ಭೂಮಿಯ ಆಗಾಧ ಗಳೊಳಗಿಂದ ನನ್ನನ್ನು ಮೇಲಕ್ಕೆ ತರುತ್ತೀ.
- Hebrews 11:33–38 ಇಬ್ರಿಯರಿಗೆ 11:33–38ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು. ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು. ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು. ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು. ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು. ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.