Psalms · chapter 35 · verse 19
Psalm 35:19 in Kannada
ನನ್ನ ಶತ್ರುಗಳು ನನ್ನ ವಿಷ ಯದಲ್ಲಿ ಸುಳ್ಳಾಗಿ ಸಂತೋಷಪಡದೆ ಇರಲಿ; ಇಲ್ಲವೆ ನನ್ನನ್ನು ಕಾರಣವಿಲ್ಲದೆ ಹಗೆಮಾಡುವವರು ಕಣ್ಣು ಸನ್ನೆಮಾಡದೆ ಇರಲಿ.
Nanna shatrugalu nanna visha yadalli sullaagi santoshapadade irali; illave nannannu kaaranavillade hagemaaduvavaru kannu sannemaadade irali.
Psalm 35:19 in English
- King James Version (KJV)
- Let not them that are mine enemies wrongfully rejoice over me: [neither] let them wink with the eye that hate me without a cause.
- World English Bible (WEB)
- Don’t let those who are my enemies wrongfully rejoice over me; neither let those who hate me without a cause wink their eyes.
- American Standard Version (ASV)
- Let not them that are mine enemies wrongfully rejoice over me; Neither let them wink with the eye that hate me without a cause.
- Bible in Basic English (BBE)
- Do not let my haters be glad over me falsely; let not those who are against me without cause make sport of me.
- Darby Translation (DBY)
- Let not them that are wrongfully mine enemies rejoice over me; let them not wink with the eye that hate me without cause.
- Webster's Bible (WBS)
- Let not them that are my enemies wrongfully rejoice over me: [neither] let them wink with the eye that hate me without a cause.
- Young's Literal Translation (YLT)
- Mine enemies rejoice not over me [with] falsehood, Those hating me without cause wink the eye.
Read in context
- 17ಕರ್ತನೇ, ಎಷ್ಟರ ವರೆಗೆ ನೀನು ನೋಡುವಿ? ಅವರ ನಾಶನಗಳಿಂದಲೂ ಸಿಂಹಗಳಿಂದಲೂ ನನ್ನ ಪ್ರಿಯವಾದ ಪ್ರಾಣವನ್ನು ತಪ್ಪಿಸು.
- 18ಮಹಾಸಭೆ ಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರಲ್ಲಿ ನಿನ್ನನ್ನು ಸ್ತುತಿಸುವೆನು.
- 19ನನ್ನ ಶತ್ರುಗಳು ನನ್ನ ವಿಷ ಯದಲ್ಲಿ ಸುಳ್ಳಾಗಿ ಸಂತೋಷಪಡದೆ ಇರಲಿ; ಇಲ್ಲವೆ ನನ್ನನ್ನು ಕಾರಣವಿಲ್ಲದೆ ಹಗೆಮಾಡುವವರು ಕಣ್ಣು ಸನ್ನೆಮಾಡದೆ ಇರಲಿ.
- 20ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ.
- 21ಹೌದು, ನನಗೆ ವಿರೋಧವಾಗಿ ತಮ್ಮ ಬಾಯನ್ನು ಅಗಲ ಮಾಡಿ--ಆಹಾ, ಆಹಾ ನಮ್ಮ ಕಣ್ಣು ಅದನ್ನು ನೋಡಿತು ಅನ್ನುತ್ತಾರೆ.
Cross references
- Psalm 69:4 ಕೀರ್ತನೆಗಳು 69:4ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.
- John 15:25 ಯೋಹಾನನು 15:25ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
- Proverbs 6:13 ಜ್ಞಾನೋಕ್ತಿಗಳು 6:13ಅವನು ತನ್ನ ಕಣ್ಣುಗಳಿಂದ ಸನ್ನೆಮಾಡಿ ತನ್ನ ಕಾಲುಗಳಿಂದ ಮಾತಾಡುತ್ತಾ ತನ್ನ ಬೆರಳುಗಳಿಂದ ಬೋಧಿಸುತ್ತಾನೆ.
- Psalm 13:4 ಕೀರ್ತನೆಗಳು 13:4ನನ್ನ ಶತ್ರುವು--ಅವನನ್ನು ಗೆದ್ದೆನೆಂದು ಹೇಳದ ಹಾಗೆಯೂ ನಾನು ಕದಲುವಾಗ ನನ್ನನ್ನು ಹಿಂಸಿಸುವವರು ಉಲ್ಲಾಸಪಡದ ಹಾಗೆಯೂ ನನ್ನ ಕಣ್ಣುಗಳನ್ನು ಬೆಳಗುವ ಹಾಗೆ ಮಾಡು.
- Psalm 38:19 ಕೀರ್ತನೆಗಳು 38:19ಆದರೆ ನನ್ನ ಶತ್ರುಗಳು ಚುರು ಕಾಗಿ ಬಲವಾಗಿದ್ದಾರೆ; ನನ್ನನ್ನು ತಪ್ಪಾಗಿ ಹಗೆಮಾಡು ವವರು ಹೆಚ್ಚಿದ್ದಾರೆ.
- Proverbs 10:10 ಜ್ಞಾನೋಕ್ತಿಗಳು 10:10ಕಣ್ಣು ಮಿಟಕಿ ಸುವವನು ದುಃಖವನ್ನುಂಟುಮಾಡುತ್ತಾನೆ; ಹರಟೆಯ ಮೂರ್ಖನು ಬೀಳುವನು.
- Psalm 38:16 ಕೀರ್ತನೆಗಳು 38:16ಅವರು ನನ್ನ ವಿಷಯದಲ್ಲಿ ಸಂತೋಷಪಡದಿರಲಿ ಎಂದು ನಾನು ಅಂದುಕೊಂಡೆನು; ನನ್ನ ಪಾದ ಜಾರು ವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುತ್ತಾರೆ.
- John 16:20–22 ಯೋಹಾನನು 16:20–22ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು. ಒಬ್ಬ ಸ್ತ್ರೀಗೆ ತನ್ನ ಪ್ರಸವವೇದನೆಯ ಗಳಿಗೆ ಬಂದಾಗ ದುಃಖವಿರುವದು; ಆಕೆಯು ಮಗುವನ್ನು ಹೆತ್ತಕೂಡಲೆ ಈ ಲೋಕದೊಳಗೆ ಒಬ್ಬ ಮನುಷ್ಯನು ಹುಟ್ಟಿದನೆಂದು ಸಂತೋಷದಿಂದ ಆ ನೋವನ್ನು ಆಕೆಯು ನೆನಪಿಗೆ ತರುವದೇ ಇಲ್ಲ. ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
- Psalm 109:3 ಕೀರ್ತನೆಗಳು 109:3ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ.
- Revelation 11:7–10 ಪ್ರಕಟನೆ 11:7–10ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು. ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು. ಆಗ ಪ್ರಜೆ ಕುಲ ಭಾಷೆ ಜನಾಂಗಗಳವರು ಸತ್ತುಹೋದ ಅವರ ಶವಗಳನ್ನು ಮೂರುವರೆ ದಿನಗಳು ನೋಡುವರು, ಸತ್ತುಹೋದ ಅವರ ಶವಗಳನ್ನು ಸಮಾಧಿಯಲ್ಲಿ ಇಡ ಗೊಡಿಸುವದಿಲ್ಲ. ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.
- Job 15:12 ಯೋಬನು 15:12ನಿನ್ನ ಹೃದಯವು ನಿನ್ನನ್ನು ಒಯ್ಯುವದು ಯಾಕೆ? ಯಾಕೆ ನಿನ್ನ ಕಣ್ಣುಗಳು ಮಿಟಿಕಿಸುವದು?
- 1 Samuel 24:11–12 1 ಸಮುವೇಲನು 24:11–12ಇದಲ್ಲದೆ ನನ್ನ ತಂದೆಯೇ, ನೋಡು; ಹೌದು, ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ಅಂಚನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ ನಿನ್ನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ನನ್ನಲ್ಲಿ ಕೆಟ್ಟತನವು ದ್ರೋಹವು ಇಲ್ಲವೆಂದು ನಾನು ನಿನಗೆ ವಿರೋಧವಾಗಿ ಪಾಪಮಾಡ ಲಿಲ್ಲವೆಂದೂ ತಿಳಿದುಕೊಂಡು ನೋಡು. ಹೀಗಿದ್ದರೂ ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ. ಕರ್ತನು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ, ಕರ್ತನು ತಾನೇ ನನಗೋಸ್ಕರ ನಿನ್ನ ವಿಷಯ ಮುಯ್ಯಿಗೆ ಮುಯ್ಯಿ ಮಾಡಲಿ; ಆದರೆ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.