Psalms · chapter 36 · verse 2
Psalm 36:2 in Kannada
ಹಗೆಗೆ ತಕ್ಕ ತನ್ನ ಅಕ್ರಮವನ್ನು ಕಂಡುಕೊಳ್ಳುವವರೆಗೆ ಅವನು ತನ್ನನ್ನು ತಾನೇ ಹೊಗಳಿಕೊಳ್ಳುತ್ತಾನೆ.
Hagege takka tanna akramavannu kandukolluvavarege avanu tannannu taane hogalikolluttaane.
Psalm 36:2 in English
- King James Version (KJV)
- For he flattereth himself in his own eyes, until his iniquity be found to be hateful.
- World English Bible (WEB)
- For he flatters himself in his own eyes, too much to detect and hate his sin.
- American Standard Version (ASV)
- For he flattereth himself in his own eyes, That his iniquity will not be found out and be hated.
- Bible in Basic English (BBE)
- For he takes comfort in the thought that his sin will not be uncovered and hated.
- Darby Translation (DBY)
- For he flattereth himself in his own eyes, [even] when his iniquity is found to be hateful.
- Webster's Bible (WBS)
- For he flattereth himself in his own eyes, until his iniquity is found to be hateful.
- Young's Literal Translation (YLT)
- For he made [it] smooth to himself in his eyes, To find his iniquity to be hated.
Read in context
- 1ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವದರಿಂದ ಅವನ ಕಣ್ಣೆದು ರಿಗೆ ದೇವರ ಭಯವೇ ಇಲ್ಲ.
- 2ಹಗೆಗೆ ತಕ್ಕ ತನ್ನ ಅಕ್ರಮವನ್ನು ಕಂಡುಕೊಳ್ಳುವವರೆಗೆ ಅವನು ತನ್ನನ್ನು ತಾನೇ ಹೊಗಳಿಕೊಳ್ಳುತ್ತಾನೆ.
- 3ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.
- 4ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.
Cross references
- Deuteronomy 29:19 ಧರ್ಮೋಪದೇಶಕಾಂಡ 29:19ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ
- Psalm 49:18 ಕೀರ್ತನೆಗಳು 49:18ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು.
- Romans 7:9 ರೋಮಾಪುರದವರಿಗೆ 7:9ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.
- 1 Chronicles 10:13–14 1 ಪೂರ್ವಕಾಲವೃತ್ತಾಂತ 10:13–14ಹೀಗೆಯೇ ಸೌಲನು ಕರ್ತನಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಕರ್ತನ ವಾಕ್ಯವನ್ನು ಕೈಕೊಳ್ಳದೆ,ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು. ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
- Psalm 10:3 ಕೀರ್ತನೆಗಳು 10:3ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
- 1 Samuel 15:18–24 1 ಸಮುವೇಲನು 15:18–24ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ ಅವರು ತೀರಿಹೋಗುವ ವರೆಗೂ ಅವರ ಸಂಗಡ ಯುದ್ಧಮಾಡಬೇಕೆಂದು ಕರ್ತನು ನಿನ್ನನ್ನು ಕಳುಹಿಸಿದನು. ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು. ಆಗ ಸೌಲನು ಸಮುವೇಲನಿಗೆ--ಹೌದು, ನಾನು ಕರ್ತನ ಮಾತಿಗೆ ವಿಧೇಯನಾಗಿ, ಕರ್ತನು ನನ್ನನ್ನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು. ಆದರೆ ಜನರು ನಿನ್ನ ದೇವರಾದ ಕರ್ತನಿಗೆ ಗಿಲ್ಗಾಲಿ ನಲ್ಲಿ ಬಲಿ ಕೊಡುವದಕ್ಕಾಗಿ ಕೊಳ್ಳೆಯಲ್ಲಿ ಸಂಪೂರ್ಣ ವಾಗಿ ನಾಶಮಾಡಬೇಕೆಂದಿರುವ ಕುರಿ ಪಶುಗಳಲ್ಲಿ ಮೇಲ್ತರವಾದವುಗಳನ್ನು ಹಿಡುಕೊಂಡು ಬಂದರು ಅಂದನು. ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು. ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು. ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.
- Romans 10:3 ರೋಮಾಪುರದವರಿಗೆ 10:3ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
- Jeremiah 2:23 ಯೆರೆಮೀಯ 2:23ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ;
- Luke 16:14–15 ಲೂಕನು 16:14–15ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು. ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
- Jeremiah 17:9 ಯೆರೆಮೀಯ 17:9ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?
- Jeremiah 2:34–35 ಯೆರೆಮೀಯ 2:34–35ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ. ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.
- Romans 3:9 ರೋಮಾಪುರದವರಿಗೆ 3:9ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ.