Psalms · chapter 36 · verse 8
Psalm 36:8 in Kannada
ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ.
Ninna aalayada paripoornateyinda avaru santruptiyaaguvaru; ninna sambhramada nadiyinda avarige kudiya maaduvi.
Psalm 36:8 in English
- King James Version (KJV)
- They shall be abundantly satisfied with the fatness of thy house; and thou shalt make them drink of the river of thy pleasures.
- World English Bible (WEB)
- They shall be abundantly satisfied with the abundance of your house. You will make them drink of the river of your pleasures.
- American Standard Version (ASV)
- They shall be abundantly satisfied with the fatness of thy house; And thou wilt make them drink of the river of thy pleasures.
- Bible in Basic English (BBE)
- The delights of your house will be showered on them; you will give them drink from the river of your pleasures.
- Darby Translation (DBY)
- They shall be abundantly satisfied with the fatness of thy house; and thou wilt make them drink of the river of thy pleasures.
- Webster's Bible (WBS)
- They shall be abundantly satisfied with the fatness of thy house; and thou shalt make them drink of the river of thy pleasures.
- Young's Literal Translation (YLT)
- They are filled from the fatness of Thy house, And the stream of Thy delights Thou dost cause them to drink.
Read in context
- 6ನಿನ್ನ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿನ್ನ ನ್ಯಾಯತೀರ್ಪುಗಳು ಮಹಾ ಅಗಾಧವೇ. ಓ ಕರ್ತನೇ, ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.
- 7ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ.
- 8ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ.
- 9ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.
- 10ನಿನ್ನನ್ನು ತಿಳಿದವರಿಗೆ ನಿನ್ನ ಕೃಪೆಯನ್ನೂ ಯಥಾರ್ಥ ಹೃದಯದವರಿಗೆ ನಿನ್ನ ನೀತಿಯನ್ನೂ ನೆಲೆಯಾಗಿರಿಸು.
Cross references
- Psalm 16:11 ಕೀರ್ತನೆಗಳು 16:11ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Psalm 65:4 ಕೀರ್ತನೆಗಳು 65:4ನೀನು ಆದುಕೊಂಡು ನಿನ್ನ ಬಳಿಗೆ ಬರ ಮಾಡಿಕೊಳ್ಳುವವನು ಧನ್ಯನು; ನಿನ್ನ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿನ್ನ ಪರಿಶುದ್ಧ ಮಂದಿರ ವಾದ ನಿನ್ನ ಆಲಯದ ಒಳ್ಳೇದರಿಂದ ನಾವು ತೃಪ್ತರಾಗುವೆವು.
- Isaiah 58:11 ಯೆಶಾಯ 58:11ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
- Isaiah 25:6 ಯೆಶಾಯ 25:6ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.
- Jeremiah 31:12–14 ಯೆರೆಮೀಯ 31:12–14ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ. ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು. ಇದಲ್ಲದೆ ಯಾಜಕರ ಪ್ರಾಣವನ್ನು ಕೊಬ್ಬಿನಿಂದ ತುಂಬಿಸುವೆನು; ನನ್ನ ಜನರು ನನ್ನ ಒಳ್ಳೇತನದಿಂದ ತೃಪ್ತಿಪಡುವರೆಂದು ಕರ್ತನು ಅನ್ನುತ್ತಾನೆ.
- Psalm 63:5 ಕೀರ್ತನೆಗಳು 63:5ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ
- Matthew 5:6 ಮತ್ತಾಯನು 5:6ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು.
- Revelation 22:1–17 ಪ್ರಕಟನೆ 22:1–17ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು. ಅದರ ಬೀದಿಯ ಮಧ್ಯದಲ್ಲಿಯೂ ಆ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು. ಇನ್ನು ಮೇಲೆ ಶಾಪವೇನೂ ಇರುವದಿಲ್ಲ; ಅದರಲ್ಲಿ ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನವಿರುವದು. ಆತನ ಸೇವಕರು ಆತನನ್ನು ಸೇವಿಸುವರು. ಅವರು ಆತನ ಮುಖವನ್ನು ನೋಡುವರು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು. ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು. ಆಮೇಲೆ ಅವನು ನನಗೆ--ಈ ಮಾತುಗಳು ನಂಬತಕ್ಕದ್ದೂ ಸತ್ಯವಾದದ್ದೂ ಆಗಿವೆ; ಪರಿಶುದ್ಧ ಪ್ರವಾದಿಗಳ ದೇವರಾದ ಕರ್ತನು ಬೇಗನೆ ಸಂಭವಿಸ ತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು. ಇಗೋ, ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಗಳನ್ನು ಕಾಪಾಡುವವನು ಧನ್ಯನು ಎಂದು ಹೇಳಿದನು. ಯೋಹಾನನೆಂಬ ನಾನೇ ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ವಿಷಯಗಳನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು. ಆಗ ಅವನು ನನಗೆ--ಇದನ್ನು ಮಾಡಬೇಡ ನೋಡು; ಯಾಕಂದರೆ ನಾನು ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕ ದಲ್ಲಿ ಹೇಳಿರುವವುಗಳನ್ನು ಕೈಕೊಂಡು ನಡೆಯುವವ ರಿಗೂ ಜೊತೆಯ ಸೇವಕನಾಗಿದ್ದೇನೆ; ದೇವರನ್ನು ಆರಾಧಿಸು ಎಂದು ನನಗೆ ಹೇಳಿದನು. ಇದಲ್ಲದೆ ಅವನು ನನಗೆ--ಈ ಪುಸ್ತಕದಲ್ಲಿರುವ ಪ್ರವಾದನೆಯ ಹೇಳಿಕೆಗಳಿಗೆ ಮುದ್ರೆಹಾಕಬೇಡ; ಯಾಕಂದರೆ ಸಮಯವು ಸವಿಾಪವಾಗಿದೆ. ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ; ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ. ನಾನೇ ಅಲ್ಫಾಯೂ ಓಮೆಗವೂ ಆದಿಯೂ ಅಂತ್ಯವೂ ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ. ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು. ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು. ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ. ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
- Psalm 46:4 ಕೀರ್ತನೆಗಳು 46:4ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.
- Isaiah 48:21 ಯೆಶಾಯ 48:21ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ನೀರು ರಭಸದಿಂದ ಹೊರಗೆ ಬಂತು;ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.
- Job 20:17 ಯೋಬನು 20:17ಅವನು ಜೇನೂ ಬೆಣ್ಣೆ ಹರಿಯುವ ಹಳ್ಳ ಗಳನ್ನೂ ನದಿಯನ್ನೂ ಕಾಲಿವೆಗಳನ್ನೂ ನೋಡನು.
- Isaiah 55:1–2 ಯೆಶಾಯ 55:1–2ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ. ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ!