Psalms · chapter 37 · verse 17
Psalm 37:17 in Kannada
ದುಷ್ಟರ ತೋಳುಗಳು ಮುರಿದು ಹೋಗು ವವು; ಆದರೆ ನೀತಿವಂತರನ್ನು ಕರ್ತನು ಉದ್ಧಾರ ಮಾಡುತ್ತಾನೆ.
Dushtara tolugalu muridu hogu vavu; aadare neetivantarannu kartanu uddhaara maaduttaane.
Psalm 37:17 in English
- King James Version (KJV)
- For the arms of the wicked shall be broken: but the LORD upholdeth the righteous.
- World English Bible (WEB)
- For the arms of the wicked shall be broken, but the LORD upholds the righteous.
- American Standard Version (ASV)
- For the arms of the wicked shall be broken; But Jehovah upholdeth the righteous.
- Bible in Basic English (BBE)
- For the arms of the evil-doers will be broken: but the Lord is the support of the good.
- Darby Translation (DBY)
- for the arms of the wicked shall be broken, but Jehovah upholdeth the righteous.
- Webster's Bible (WBS)
- For the arms of the wicked shall be broken: but the LORD upholdeth the righteous.
- Young's Literal Translation (YLT)
- For the arms of the wicked are shivered, And Jehovah is sustaining the righteous.
Read in context
- 15ಅವರ ಕತ್ತಿಯು ಅವರ ಹೃದಯವನ್ನೇ ಇರಿಯುವದು; ಅವರ ಬಿಲ್ಲುಗಳು ಮುರಿದುಹೋಗುವವು.
- 16ನೀತಿವಂತನಿಗಿರುವ ಸ್ವಲ್ಪ ವಾದದ್ದು ಅನೇಕ ದುಷ್ಟರ ಐಶ್ವರ್ಯಕ್ಕಿಂತಲೂ ಶ್ರೇಷ್ಠ ವಾಗಿದೆ.
- 17ದುಷ್ಟರ ತೋಳುಗಳು ಮುರಿದು ಹೋಗು ವವು; ಆದರೆ ನೀತಿವಂತರನ್ನು ಕರ್ತನು ಉದ್ಧಾರ ಮಾಡುತ್ತಾನೆ.
- 18ಕರ್ತನು ಯಥಾರ್ಥರ ದಿನಗಳನ್ನು ಅರಿತಿದ್ದಾನೆ; ಅವರ ಬಾಧ್ಯತೆಯು ಯುಗಯುಗಕ್ಕೂ ಇರುವದು.
- 19ವಿಪತ್ಕಾಲದಲ್ಲಿ ಅವರು ಆಶಾಭಂಗ ಪಡುವದಿಲ್ಲ; ಕ್ಷಾಮದ ದಿವಸಗಳಲ್ಲಿ ತೃಪ್ತಿಪಡುವರು.
Cross references
- Isaiah 41:10 ಯೆಶಾಯ 41:10ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
- Psalm 63:8 ಕೀರ್ತನೆಗಳು 63:8ನನ್ನ ಪ್ರಾಣವು ನಿನ್ನನ್ನು ಹಿಂಬಾಲಿಸಿ ಬರುತ್ತದೆ; ನಿನ್ನ ಬಲಗೈ ನನ್ನನ್ನು ಗಟ್ಟಿ ಯಾಗಿ ಎತ್ತಿಹಿಡಿಯುತ್ತದೆ.
- Psalm 145:14 ಕೀರ್ತನೆಗಳು 145:14ಕರ್ತನು ಬೀಳುವವರೆಲ್ಲರನ್ನು ಉದ್ಧಾರಮಾಡುತ್ತಾನೆ; ತಗ್ಗಿಸಿ ಕೊಳ್ಳುವವರೆಲ್ಲರನ್ನು ಎತ್ತುತ್ತಾನೆ.
- Isaiah 42:1 ಯೆಶಾಯ 42:1ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
- Psalm 37:24 ಕೀರ್ತನೆಗಳು 37:24ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ.
- Psalm 119:116–117 ಕೀರ್ತನೆಗಳು 119:116–117ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಎತ್ತಿಹಿಡಿ; ಆಗ ಬದುಕುವೆನು; ನನ್ನ ನಿರೀಕ್ಷೆಯ ನಿಮಿತ್ತ ನನ್ನನ್ನು ನಾಚಿಕೆಪಡಿಸಬೇಡ. ನನ್ನನ್ನು ನೀನು ಹಿಡಿ; ಆಗ ನಾನು ಸುರಕ್ಷಿತನಾಗಿದ್ದು ನಿನ್ನ ನಿಯಮಗಳನ್ನು ಯಾವಾ ಗಲೂ ಗೌರವಿಸುವೆನು.
- Psalm 51:12 ಕೀರ್ತನೆಗಳು 51:12ನಿನ್ನ ರಕ್ಷಣೆಯ ಆನಂದವನ್ನು ನನಗೆ ತಿರುಗಿಕೊಡು; ನಿನ್ನ ಸಿದ್ಧಮನಸ್ಸಿನಿಂದ ನನ್ನನ್ನು ಮೇಲೆತ್ತು.
- Jude 1:24 ಯೂದನು 1:24ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
- Psalm 10:15 ಕೀರ್ತನೆಗಳು 10:15ದುಷ್ಟನ ಮತ್ತು ಕೆಡುಕನ ತೋಳನ್ನು ಮುರಿ; ಅದು ಸಿಕ್ಕದೆ ಹೋಗುವ ವರೆಗೂ ಅವನ ದುಷ್ಟತ್ವ ವನ್ನು ನೀನು ಹುಡುಕು.
- Job 38:15 ಯೋಬನು 38:15ದುಷ್ಟರಿಂದ ಅವರ ಬೆಳಕು ಹಿಂತೆಗೆಯಲ್ಪಡುತ್ತದೆ. ಎತ್ತಿದ ತೋಳು ಮುರಿದು ಹೋಗುವದು.
- Psalm 41:12 ಕೀರ್ತನೆಗಳು 41:12ನನ್ನನ್ನಾದರೋ ನನ್ನ ಯಥಾರ್ಥ ತ್ವದಲ್ಲಿ ನೀನು ಉದ್ಧರಿಸಿ ನಿನ್ನ ಸಮ್ಮುಖದಲ್ಲಿ ಎಂದೆಂದಿಗೂ ನನ್ನನ್ನು ನಿಲ್ಲಿಸಿದ್ದೀ.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
- Ezekiel 30:21–25 ಯೆಹೆಜ್ಕೇಲನು 30:21–25ಮನುಷ್ಯ ಪುತ್ರನೇ, ನಾನು ಐಗುಪ್ತದ ಅರಸ ನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ; ಇಗೋ, ಅದು ಕಟ್ಟಲ್ಪಡುವ ಹಾಗೆ ವಾಸಿಯಾಗುವದೇ ಇಲ್ಲ, ಅದು ಕತ್ತಿಯನ್ನು ಹಿಡಿಯುವ ಹಾಗೆಯೇ ಅದಕ್ಕೆ ಬಲಬರುವ ಹಾಗೆ ಪಟ್ಟಿ ಬಿಗಿಸಲ್ಪಡುವದಿಲ್ಲ. ಆದ ದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ಐಗುಪ್ತದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿ ಯುತ್ತೇನೆ; ಅವನ ಕೈಯಿಂದ ಕತ್ತಿಯನ್ನು ಬೀಳಿಸುತ್ತೇನೆ. ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು. ಬಾಬೆಲಿನ ಅರಸನ ತೋಳು ಗಳನ್ನು ನಾನು ಬಲಪಡಿಸುವೆನು; ಅವನ ಕೈಯಲ್ಲಿ ನನ್ನ ಕತ್ತಿಯನ್ನಿಡುವೆನು; ಫರೋಹನ ತೋಳನ್ನು ಮುರಿಯುವೆನು, ಅವನು ಗಾಯದಿಂದ ಸಾಯುವ ಹಾಗೆ ಅವನ ಮುಂದೆ ನರಳಾಡುವನು. ನಾನು ಬಾಬೆಲಿನ ಅರಸನ ತೋಳುಗಳಿಗೆ ಬಲ ಕೊಡುವೆನು, ಫರೋಹನ ತೋಳುಗಳು ಬಿದ್ದು ಹೋಗುವವು; ಯಾವಾಗ ನಾನು ನನ್ನ ಕತ್ತಿಯನ್ನು ಬಾಬೆಲಿನ ಅರಸನ ಕೈಗೆ ಕೊಡುವೆನೋ ಅದನ್ನು ಐಗುಪ್ತದೇಶದಿಂದ ಹೊರಗೆ ಚಾಚುವೆನೋ ಆಗ ನಾನೇ ಕರ್ತನೆಂದು ಅವರಿಗೆ ಗೊತ್ತಾಗುವದು.ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.