Psalms · chapter 37 · verse 21
Psalm 37:21 in Kannada
ದುಷ್ಟನು ಸಾಲಮಾಡಿ ತಿರಿಗಿ ಸಲ್ಲಿಸುವದಿಲ್ಲ; ನೀತಿವಂತನು ದಯಾಳುವಾಗಿ ಕೊಡುತ್ತಾನೆ.
Dushtanu saalamaadi tirigi sallisuvadilla; neetivantanu dayaaluvaagi koduttaane.
Psalm 37:21 in English
- King James Version (KJV)
- The wicked borroweth, and payeth not again: but the righteous sheweth mercy, and giveth.
- World English Bible (WEB)
- The wicked borrow, and don’t pay back, but the righteous give generously.
- American Standard Version (ASV)
- The wicked borroweth, and payeth not again; But the righteous dealeth graciously, and giveth.
- Bible in Basic English (BBE)
- The sinner takes money and does not give it back; but the upright man has mercy, and gives to others.
- Darby Translation (DBY)
- The wicked borroweth, and payeth not again; but the righteous is gracious and giveth:
- Webster's Bible (WBS)
- The wicked borroweth, and payeth not again: but the righteous showeth mercy, and giveth.
- Young's Literal Translation (YLT)
- The wicked is borrowing and repayeth not, And the righteous is gracious and giving.
Read in context
- 19ವಿಪತ್ಕಾಲದಲ್ಲಿ ಅವರು ಆಶಾಭಂಗ ಪಡುವದಿಲ್ಲ; ಕ್ಷಾಮದ ದಿವಸಗಳಲ್ಲಿ ತೃಪ್ತಿಪಡುವರು.
- 20ದುಷ್ಟರು ನಾಶವಾಗುವರು; ಕರ್ತನ ಶತ್ರುಗಳು ಕುರಿಮರಿಗಳ ಕೊಬ್ಬಿನ ಹಾಗೆ ಇದ್ದು ಕರಗಿಹೋಗು ವರು; ಹೊಗೆಯಲ್ಲಿ ಕರಗಿಹೋಗುವರು.
- 21ದುಷ್ಟನು ಸಾಲಮಾಡಿ ತಿರಿಗಿ ಸಲ್ಲಿಸುವದಿಲ್ಲ; ನೀತಿವಂತನು ದಯಾಳುವಾಗಿ ಕೊಡುತ್ತಾನೆ.
- 22ಆತನು ಆಶೀರ್ವದಿಸಿದವರು ಭೂಮಿಯನ್ನು ಸ್ವತಂತ್ರಿಸಿ ಕೊಳ್ಳುವರು; ಆತನು ಶಪಿಸಿದವರು ಕಡಿದು ಹಾಕಲ್ಪಡವರು.
- 23ಒಳ್ಳೇ ಮನುಷ್ಯನ ಹೆಜ್ಜೆಗಳು ಕರ್ತನಿಂದ ದೃಢ ವಾಗುತ್ತವೆ; ಆತನು ಅವನ ಮಾರ್ಗದಲ್ಲಿ ಸಂತೋಷ ಪಡುತ್ತಾನೆ.
Cross references
- Hebrews 13:16 ಇಬ್ರಿಯರಿಗೆ 13:16ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
- Psalm 112:5 ಕೀರ್ತನೆಗಳು 112:5ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
- Proverbs 22:7 ಜ್ಞಾನೋಕ್ತಿಗಳು 22:7ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ. ಸಾಲಗಾರನು ಸಾಲಕೊಟ್ಟ ವನಿಗೆ ಸೇವಕನು.
- Psalm 112:9 ಕೀರ್ತನೆಗಳು 112:9ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
- Luke 6:30 ಲೂಕನು 6:30ನಿನ್ನಿಂದ ಕೇಳುವ ಪ್ರತಿ ಮನುಷ್ಯನಿಗೆ ಕೊಡು; ನಿನ್ನ ಸೊತ್ತನ್ನು ತಕ್ಕೊಳ್ಳುವವನಿಂದ ಅವುಗಳನ್ನು ತಿರಿಗಿ ಕೇಳಬೇಡ.
- Deuteronomy 28:12 ಧರ್ಮೋಪದೇಶಕಾಂಡ 28:12ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.
- 2 Corinthians 8:9 2 ಕೊರಿಂಥದವರಿಗೆ 8:9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- 2 Corinthians 9:6–15 2 ಕೊರಿಂಥದವರಿಗೆ 9:6–15ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ. ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ. ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ. (ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ. ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.) ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು. ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು. ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು. ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ.ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ. ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
- Isaiah 58:7–10 ಯೆಶಾಯ 58:7–10ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ? ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು. ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ, ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು.
- Deuteronomy 15:9–11 ಧರ್ಮೋಪದೇಶಕಾಂಡ 15:9–11ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ. ಅವನಿಗೆ ಕೊಟ್ಟೇ ಕೊಡಬೇಕು; ಅವನಿಗೆ ಕೊಡುವಾಗ ನಿನ್ನ ಹೃದಯದಲ್ಲಿ ದುಃಖವಾಗಬಾರದು; ಯಾಕಂದರೆ ಇದಕ್ಕೋಸ್ಕರವೇ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೆಲಸಗಳಲ್ಲಿಯೂ ನೀನು ಕೈ ಹಾಕುವ ದೆಲ್ಲಾದರಲ್ಲಿಯೂ ಆಶೀರ್ವದಿಸುವನು. ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
- Job 31:16–20 ಯೋಬನು 31:16–20ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ, ದಿಕ್ಕಿಲ್ಲದ ವನು ಅದರಲ್ಲಿ ಉಣ್ಣದ ಹಾಗೆ ನಾನು ಮಾತ್ರ ನನ್ನ ತುತ್ತು ಉಂಡಿದ್ದರೆ, (ಯಾಕಂದರೆ ನನ್ನ ಯೌವನದಿಂದ ನನ್ನೊಂದಿಗೆ ನಾನು ಅವನನ್ನು ತಂದೆ ಯಂತೆ ಬೆಳೆಸಿದೆನಲ್ಲಾ. ನನ್ನ ತಾಯಿಯ ಗರ್ಭದಿಂದ ಅವಳನ್ನು ನಡಿಸಿದೆನಲ್ಲಾ). ಬಟ್ಟೆ ಇಲ್ಲದೆ ನಾಶ ವಾಗುವವನನ್ನೂ ದರಿದ್ರನಿಗೆ ಹೊದಿಕೆ ಇಲ್ಲದಿರುವ ದನ್ನೂ ನಾನು ನೋಡಿದ್ದರೆ ಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ
- Acts 20:35 ಅಪೊಸ್ತಲರ ಕೃತ್ಯಗಳು 20:35ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.