Psalms · chapter 37 · verse 35
Psalm 37:35 in Kannada
ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು.
Dushtanu dodda adhikaaradalliru vadannu naanu nodidenu; avanu hasuraagi vistarisikonda marada haage iddanu.
Psalm 37:35 in English
- King James Version (KJV)
- I have seen the wicked in great power, and spreading himself like a green bay tree.
- World English Bible (WEB)
- I have seen the wicked in great power, spreading himself like a green tree in its native soil.
- American Standard Version (ASV)
- I have seen the wicked in great power, And spreading himself like a green tree in its native soil.
- Bible in Basic English (BBE)
- I have seen the evil-doer in great power, covering the earth like a great tree.
- Darby Translation (DBY)
- I have seen the wicked in great power, and spreading like a green tree in its native soil:
- Webster's Bible (WBS)
- I have seen the wicked in great power, and spreading himself like a green bay tree.
- Young's Literal Translation (YLT)
- I have seen the wicked terrible, And spreading as a green native plant,
Read in context
- 33ಕರ್ತನು ಅವನನ್ನು ದುಷ್ಟನ ಕೈಯಲ್ಲಿ ಬಿಡುವದಿಲ್ಲ; ಇಲ್ಲವೆ ನ್ಯಾಯವಿಚಾರಣೆಯಲ್ಲಿ ಅವನು ದುಷ್ಟನೆಂದು ತೀರ್ಪು ಹೊಂದುವದಿಲ್ಲ.
- 34ಕರ್ತನನ್ನು ನಿರೀಕ್ಷಿಸು, ಆತನ ಮಾರ್ಗವನ್ನು ಕೈಕೊಳ್ಳು; ಆಗ ಭೂಮಿಯನ್ನು ಸ್ವಾಧೀ ನಮಾಡಿಕೊಳ್ಳುವ ಹಾಗೆ ನಿನ್ನನ್ನು ಆತನು ಎತ್ತು ವನು; ದುಷ್ಟರು ಕಡಿದುಹಾಕಲ್ಪಟ್ಟಾಗ ನೀನು ಅದನ್ನು ನೋಡುವಿ.
- 35ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು.
- 36ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.
- 37ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ.
Cross references
- Job 5:3 ಯೋಬನು 5:3ಮೂಢನು ಬೇರೂರುವದನ್ನು ನಾನು ನೋಡಿದೆನು; ಸಂಗಡಲೇ ಅವನ ಸ್ಥಾನವನ್ನು ನಾನು ಶಪಿಸಿದೆನು.
- Job 21:7–17 ಯೋಬನು 21:7–17ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ? ಅವರ ಸಂತಾನದವರು ಅವರ ಮುಂದೆ ಅವರ ಸಂಗಡ ದೃಢವಾಗಿದ್ದಾರೆ; ಅವರ ಸಂತಾನದವರು ಅವರ ಕಣ್ಣು ಗಳ ಮುಂದೆ ಇದ್ದಾರೆ. ಅವರ ಮನೆಗಳು ಅಂಜಿಕೆ ಇಲ್ಲದೆ ಸಮಾಧಾನವಾಗಿವೆ; ದೇವರ ಕೋಲು ಅವರ ಮೇಲೆ ಇಲ್ಲ. ಅವನ ಗೂಳಿ ಹೇಸದೆ ಬಸುರು ಮಾಡುತ್ತದೆ; ಅವನ ಆಕಳು ತಪ್ಪದೆ ಈಯುತ್ತದೆ; ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ. ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ. ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ. ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ. ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ. ಇಗೋ, ಅವರ ಸುಖವು ಅವರ ಕೈಯಲ್ಲಿ ಇಲ್ಲ; ದುಷ್ಟರ ಆಲೋಚನೆ ನನಗೆ ದೂರ ವಾಗಿದೆ. ಎಷ್ಟು ಸಾರಿ ದುಷ್ಟರ ದೀಪವು ಆರಿ ಹೋಗುತ್ತದೆ; ಅವರ ನಾಶನವು ಅವರ ಮೇಲೆ ಬರುತ್ತದೆ; ದೇವರು ವೇದನೆಗಳನ್ನು ತನ್ನ ಕೋಪ ದಿಂದ ಹಂಚುತ್ತಾನೆ.
- Psalm 73:3–11 ಕೀರ್ತನೆಗಳು 73:3–11ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು. ಅವರ ಮರಣಕ್ಕೆ ಬಂಧನಗಳು ಇಲ್ಲ; ಅವರ ತ್ರಾಣವು ಸ್ಥಿರವಾಗಿದೆ. ಬೇರೆ ಮನುಷ್ಯರಂತೆ ಅವರು ಕಷ್ಟದಲ್ಲಿಲ್ಲ. ಇಲ್ಲವೆ ಬೇರೆ ಮನುಷ್ಯರ ಹಾಗೆ ಅವರಿಗೆ ವ್ಯಾಧಿಯೂ ಇಲ್ಲ; ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ. ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ. ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ. ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು. ಆದದರಿಂದ ಅವನ ಜನರು ಇಲ್ಲಿಗೆ ತಿರುಗಿ ಕೊಳ್ಳುತ್ತಾರೆ; ಅವರಿಗೆ ಪಾನವು ಯಥೇಚ್ಚವಾಗಿ ದೊರೆಯುತ್ತದೆ. ಅವರು-- ದೇವರು ಹೇಗೆ ಬಲ್ಲನು? ಮಹೋನ್ನತನಲ್ಲಿ ತಿಳುವಳಿಕೆ ಉಂಟೋ ಎಂದು ಅಂದುಕೊಳ್ಳುತ್ತಾರೆ.
- Ezekiel 31:18 ಯೆಹೆಜ್ಕೇಲನು 31:18ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 14:14–19 ಯೆಶಾಯ 14:14–19ಉನ್ನತವಾದ ಮೇಘ ಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುತ್ತೇನೆ ಅಂದು ಕೊಂಡಿದ್ದೆಯಲ್ಲಾ; ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ. ನಿನ್ನನ್ನು ನೋಡುವ ವರು ನಿನ್ನನ್ನು ಸೂಕ್ಷ್ಮವಾಗಿ ದೃಷ್ಟಿಸಿ ಯೋಚಿಸುತ್ತಾ --ಭೂಮಿಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ ಪಟ್ಟಣವನ್ನು ನಾಶಮಾಡಿ ಲೋಕವನ್ನು ಕಾಡ ನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದ ವನು ಈ ಮನುಷ್ಯನೋ ಎಂದು ಅಂದುಕೊಳ್ಳುವರು. ಜನಾಂಗಗಳ ಅರಸುಗಳೆಲ್ಲಾ ಅವರೆಲ್ಲರೂ ವೈಭವ ದಿಂದ ತಮ್ಮತಮ್ಮ ಮನೆಗಳಲ್ಲಿ ಮಲಗುತ್ತಾರೆ. ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ.
- Job 8:13–19 ಯೋಬನು 8:13–19ದೇವರನ್ನು ಮರೆಯುವ ವರೆಲ್ಲರ ಹಾದಿಗಳು ಹಾಗೆಯೇ; ಕಪಟಿಯ ನಿರೀಕ್ಷೆಯು ನಾಶವಾಗುವದು. ಅವನ ನಿರೀಕ್ಷೆಯು ಕತ್ತರಿಸಲ್ಪಡುತ್ತದೆ; ಅವನ ಭರವಸವು ಜೇಡರ ಹುಳದ ಮನೆಯೇ. ಅವನು ತನ್ನ ಮನೆಗೆ ಆತುಕೊಂಡರೆ ಅದು ನಿಲ್ಲದು; ಅದನ್ನು ಬಿಗಿ ಹಿಡಿದರೆ ಅದು ತಡೆಯಲಾರದು. ಸೂರ್ಯನ ಮುಂದೆ ಅವನು ಹಸುರಾಗಿದ್ದಾನೆ; ಅವನ ಬಳ್ಳಿಯು ಅವನ ತೋಟದಲ್ಲಿ ಹಬ್ಬುವದು. ಅವನ ಬೇರುಗಳು ರಾಶಿಯ ಮೇಲೆ ಸುತ್ತಿ ಕಲ್ಲಿನ ಸ್ಥಳವನ್ನು ಕಾಣುತ್ತವೆ. ಅವನನ್ನು ಅವನ ಸ್ಥಳದಿಂದ ಕಿತ್ತಿದರೆ ಅದು--ನಾನು ನಿನ್ನನ್ನು ನೋಡಲಿಲ್ಲವೆಂದು ಅವನನ್ನು ಬೊಂಕುವದು; ಇಗೋ, ಇದು ಅವನ ಮಾರ್ಗದ ಆನಂದವು. ಆದರೆ ಭೂಮಿಯೊಳಗಿನಿಂದ ಬೇರೆಯವರು ಮೊಳೆಯುವರು.
- Esther 5:11 ಎಸ್ತೇರಳು 5:11ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.
- Ezekiel 31:6–10 ಯೆಹೆಜ್ಕೇಲನು 31:6–10ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು. ಹೀಗೆ ಅವನು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ಕೊಂಬೆಗಳ ಉದ್ದದಲ್ಲಿ ಸುಂದರವಾಗಿದ್ದನು; ಯಾಕಂದರೆ ಅವನ ಬೇರು ಮಹಾ ನೀರಿನಿಂದಾಗಿತ್ತು. ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ. ನಾನು ಅವನನ್ನು ಅವನ ಕೊಂಬೆಗಳ ಸಮೂಹದಿಂದ ಸೌಂದರ್ಯಪಡಿಸಿದೆನು; ಅದರಿಂದ ದೇವರ ತೋಟ ದಲ್ಲಿನ ಏದೆನಿನ ಮರಗಳೆಲ್ಲಾ ಅವನ ಮೇಲೆ ಹೊಟ್ಟೇ ಕಿಚ್ಚುಪಟ್ಟವು. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಯಾಕಂದರೆ ನೀನು ನೀಳದಲ್ಲಿ ಎತ್ತರವಾಗಿ ಅವನು ತನ್ನ ತಲೆಯನ್ನು ಒತ್ತಿಕೊಂಡಿರುವ ಕೊಂಬೆಗಳ ಕಡೆಗೆ ಚಾಚಿದ ಕಾರಣದಿಂದ ಅವನ ಹೃದಯವು ತನ್ನ ಎತ್ತರದಲ್ಲಿ ಹೆಚ್ಚಿಸಲ್ಪಟ್ಟಿದೆ.
- Daniel 4:20–33 ದಾನಿಯೇಲನು 4:20–33ನೀನು ಕಂಡ ಮರವು ಬೆಳೆದು ಬಲವಾ ದದ್ದೂ ಅದರ ಎತ್ತರವು ಆಕಾಶಕ್ಕೂ ಅದರ ದೃಷ್ಟಿಯು ಭೂಮಿಯ ಎಲ್ಲಾ ಕಡೆಯವರೆಗೂ ಇವೆ; ಅದರ ಎಲೆಗಳು ಅಂದವಾಗಿದ್ದವು, ಫಲವು ಬಹಳವಾಗಿತ್ತು, ಅದರಲ್ಲಿ ಎಲ್ಲರಿಗೂ ಆಹಾರ ಇತ್ತು; ಅದರ ಕೆಳಗೆ ಬಯಲಿನ ಮೃಗಗಳು ವಾಸಮಾಡಿದ್ದವು; ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸಮಾಡಿದ್ದವು. ಓ ಅರಸನೇ, ಆ ಮರವು ನೀನೇ ಆಗಿರುವಿ, ನೀನು ಬೆಳೆದು ಬಲವಾಗಿರುವಿ; ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ ನಿನ್ನ ಅಧಿಕಾರವು ಭೂಮಿಯ ಅಂತ್ಯದ ವರೆಗೂ ಮುಟ್ಟುವದು. ಆಗ ಪಾಲಕನು ಮತ್ತು ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದು ಬಂದು--ಮರವನ್ನು ಕಡಿದು ನಾಶಮಾಡಿರಿ; ಆದರೆ ಅದರ ಬೇರಿನ ಮೋಟನ್ನು ಕಬ್ಬಿಣ ಮತ್ತು ಕಂಚುಗಳ ಕಟ್ಟುಳ್ಳದ್ದಾಗಿ ಭೂಮಿಯಲ್ಲಿಯೂ ಬಯಲಿನ ಎಳೇ ಹುಲ್ಲಿನಲ್ಲಿಯೂ ಬಿಡಿರಿ. ಅದು ಆಕಾಶದ ಮಂಜಿನಿಂದ ತೇವವಾಗಲಿ; ಏಳು ಕಾಲಗಳು ಕಳೆಯುವ ತನಕ ಅದರ ಪಾಲು ಕಾಡು ಮೃಗಗಳ ಸಹವಾಸದ ಗತಿಯಂತೆ ಬರಲಿ ಎಂದು ಸಾರುವದನ್ನು ಅರಸನಾದ ನೀನು ನೋಡಿದೆಯಲ್ಲಾ. ಓ ಅರಸನೇ, ಇದರ ಅರ್ಥವು ಏನಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ. ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು. ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂದು ಅವರು ಆಜ್ಞೆ ಮಾಡಿದ್ದರಲ್ಲಿ ಅಂದರೆ ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವದು. ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು. ಅರಸನಾದ ನೆಬೂಕದ್ನೆಚ್ಚರನಿಗೆ ಇದೆಲ್ಲವೂ ಸಂಭ ವಿಸಿತು. ಹನ್ನೆರಡು ತಿಂಗಳಾದ ಮೇಲೆ ಅವನು ಬಾಬೆಲಿನ ರಾಜ್ಯದ ಅರಮನೆಯಲ್ಲಿ ತಿರುಗಾಡಿದನು. ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು. ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಶಬ್ದವು ಉಂಟಾಯಿತು; ಏನಂದರೆ--ಓ ಅರಸನಾದ ನೆಬೂಕದ್ನೆ ಚ್ಚರನೇ, ನಿನಗೆ ಹೇಳುವದೇನಂದರೆ, ನಿನ್ನ ರಾಜ್ಯವು ನಿನ್ನನ್ನು ಬಿಟ್ಟು ಹೋಯಿತು. ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು. ಅದೇ ಗಳಿಗೆಯಲ್ಲಿ ಈ ಸಂಗತಿಯು ನೆಬೂಕದ್ನೆಚ್ಚರನಲ್ಲಿ ನೆರವೇರಿತು. ಅವನು ಮನುಷ್ಯ ರಿಂದ ತಳ್ಳಲ್ಪಟ್ಟು ಎತ್ತುಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೂ ಬೆಳೆಯುವ ವರೆಗೆ ಅವನ ಶರೀರವು ಆಕಾಶದ ಮಂಜಿ ನಿಂದ ತೇವವಾಯಿತು.