Skip to content
ThuthiThuthiThuthi
Psalms · chapter 38 of 150 · 22 verses

Psalm 38 in Kannada

ಕೀರ್ತನೆಗಳು 38

  1. ಓ ಕರ್ತನೇ, ನಿನ್ನ ರೌದ್ರದಿಂದ ನನ್ನನ್ನು ಗದರಿಸಬೇಡ; ನಿನ್ನ ರೋಷದಿಂದ ನನ್ನನ್ನು ಶಿಕ್ಷಿಸಬೇಡ.

    A Psalm of David, to bring to remembrance. O LORD, rebuke me not in thy wrath: neither chasten me in thy hot displeasure.

  2. ನಿನ್ನ ಬಾಣಗಳು ನನ್ನಲ್ಲಿ ಬಲವಾಗಿ ನೆಟ್ಟಿವೆ; ನಿನ್ನ ಕೈ ನನ್ನ ಮೇಲೆ ಭಾರವಾಗಿದೆ.

    For thine arrows stick fast in me, and thy hand presseth me sore.

  3. ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ.

    [There is] no soundness in my flesh because of thine anger; neither [is there any] rest in my bones because of my sin.

  4. ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ.

    For mine iniquities are gone over mine head: as an heavy burden they are too heavy for me.

  5. ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ.

    My wounds stink [and] are corrupt because of my foolishness.

  6. ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ.

    I am troubled; I am bowed down greatly; I go mourning all the day long.

  7. ನನ್ನ ನಡುವು ಉರಿಯಿಂದ ತುಂಬಿದೆ; ನನ್ನ ಮಾಂಸದಲ್ಲಿ ಸ್ವಸ್ಥವೇನೂ ಇಲ್ಲ.

    For my loins are filled with a loathsome [disease:] and [there is] no soundness in my flesh.

  8. ನಾನು ಬಹಳವಾಗಿ ಜಜ್ಜಲ್ಪಟ್ಟು ಬಲಹೀನನಾಗಿದ್ದೇನೆ; ನನ್ನ ಹೃದಯದ ನರಳುವಿಕೆ ಯಿಂದ ಮೂಲ್ಗುತ್ತೇನೆ.

    I am feeble and sore broken: I have roared by reason of the disquietness of my heart.

  9. ಕರ್ತನೇ, ನನ್ನ ಆಶೆಯೆಲ್ಲಾ ನಿನ್ನ ಮುಂದೆ ಇದೆ; ನನ್ನ ನಿಟ್ಟುಸಿರು ನಿನಗೆ ಮರೆಯಾದದ್ದಲ್ಲ.

    Lord, all my desire [is] before thee; and my groaning is not hid from thee.

  10. ನನ್ನ ಹೃದಯವು ಬಡಿದುಕೊಳ್ಳುತ್ತದೆ; ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ನನ್ನಲ್ಲಿ ಇಲ್ಲ.

    My heart panteth, my strength faileth me: as for the light of mine eyes, it also is gone from me.

  11. ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.

    My lovers and my friends stand aloof from my sore; and my kinsmen stand afar off.

  12. ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ.

    They also that seek after my life lay snares [for me:] and they that seek my hurt speak mischievous things, and imagine deceits all the day long.

  13. ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳಲಿಲ್ಲ; ತನ್ನ ಬಾಯನ್ನು ತೆರೆಯದ ಮೂಕನ ಹಾಗೆ ನಾನಿದ್ದೆನು.

    But I, as a deaf [man], heard not; and [I was] as a dumb man [that] openeth not his mouth.

  14. ನಾನು ಕಿವಿ ಕೇಳಿಸದವನಂತೆಯೂ ಪ್ರತ್ತ್ಯುತ್ತರ ಕೊಡಲಾರದವನಂತೆಯೂ ಆದೆನು.

    Thus I was as a man that heareth not, and in whose mouth [are] no reproofs.

  15. ಓ ಕರ್ತನೇ, ನಿನ್ನನ್ನು ನಿರೀಕ್ಷಿಸುತ್ತೇನೆ; ನನ್ನ ದೇವರಾದ ಓ ಕರ್ತನೇ, ನೀನು ಉತ್ತರ ಕೊಡುವಿ.

    For in thee, O LORD, do I hope: thou wilt hear, O Lord my God.

  16. ಅವರು ನನ್ನ ವಿಷಯದಲ್ಲಿ ಸಂತೋಷಪಡದಿರಲಿ ಎಂದು ನಾನು ಅಂದುಕೊಂಡೆನು; ನನ್ನ ಪಾದ ಜಾರು ವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುತ್ತಾರೆ.

    For I said, [Hear me], lest [otherwise] they should rejoice over me: when my foot slippeth, they magnify [themselves] against me.

  17. ನಾನು ಕೆಡಲ್ಪಡುವ ಸ್ಥಿತಿಯಲ್ಲಿದ್ದೇನೆ; ನನ್ನ ವ್ಯಸನವು ಯಾವಾಗಲೂ ನನ್ನ ಮುಂದೆ ಅದೆ.

    For I [am] ready to halt, and my sorrow [is] continually before me.

  18. ನನ್ನ ಅಕ್ರಮವನ್ನು ತಿಳಿಸುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು.

    For I will declare mine iniquity; I will be sorry for my sin.

  19. ಆದರೆ ನನ್ನ ಶತ್ರುಗಳು ಚುರು ಕಾಗಿ ಬಲವಾಗಿದ್ದಾರೆ; ನನ್ನನ್ನು ತಪ್ಪಾಗಿ ಹಗೆಮಾಡು ವವರು ಹೆಚ್ಚಿದ್ದಾರೆ.

    But mine enemies [are] lively, [and] they are strong: and they that hate me wrongfully are multiplied.

  20. ಒಳ್ಳೇದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುವವರು ನನ್ನ ಶತ್ರುಗಳಾಗಿದ್ದಾರೆ. ನಾನು ಒಳ್ಳೇ ದನ್ನು ಅನುಸರಿಸುವವನಾಗಿದ್ದೇನೆ.

    They also that render evil for good are mine adversaries; because I follow [the thing that] good [is].

  21. ಓ ಕರ್ತನೇ, ನನ್ನನ್ನು ಬಿಡಬೇಡ; ನನ್ನ ದೇವರೇ, ನನಗೆ ದೂರವಾಗಿರಬೇಡ.ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ.

    Forsake me not, O LORD: O my God, be not far from me.

  22. ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ.

    Make haste to help me, O Lord my salvation.

All chapters of Psalms · Kannada Bible · Psalm 38 in Tamil

Kannada Bible: Kannada Old Version, public domain.

King James Version: public domain.