Psalms · chapter 38 · verse 11
Psalm 38:11 in Kannada
ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.
Nanna priyaroo snehitaroo nanna hunnannu nodi oreyaagi nilluttaare; nanna nereyavaru dooradalli nintiddaare.
Psalm 38:11 in English
- King James Version (KJV)
- My lovers and my friends stand aloof from my sore; and my kinsmen stand afar off.
- World English Bible (WEB)
- My lovers and my friends stand aloof from my plague. My kinsmen stand far away.
- American Standard Version (ASV)
- My lovers and my friends stand aloof from my plague; And my kinsmen stand afar off.
- Bible in Basic English (BBE)
- My lovers and my friends keep away from my disease; my relations keep far away.
- Darby Translation (DBY)
- My lovers and mine associates stand aloof from my stroke; and my kinsmen stand afar off.
- Webster's Bible (WBS)
- My lovers and my friends stand aloof from my affliction; and my kinsmen stand afar off.
- Young's Literal Translation (YLT)
- My lovers and my friends over-against my plague stand. And my neighbours afar off have stood.
Read in context
- 9ಕರ್ತನೇ, ನನ್ನ ಆಶೆಯೆಲ್ಲಾ ನಿನ್ನ ಮುಂದೆ ಇದೆ; ನನ್ನ ನಿಟ್ಟುಸಿರು ನಿನಗೆ ಮರೆಯಾದದ್ದಲ್ಲ.
- 10ನನ್ನ ಹೃದಯವು ಬಡಿದುಕೊಳ್ಳುತ್ತದೆ; ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ನನ್ನಲ್ಲಿ ಇಲ್ಲ.
- 11ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.
- 12ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ.
- 13ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳಲಿಲ್ಲ; ತನ್ನ ಬಾಯನ್ನು ತೆರೆಯದ ಮೂಕನ ಹಾಗೆ ನಾನಿದ್ದೆನು.
Cross references
- Luke 23:49 ಲೂಕನು 23:49ಆತನಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯ ದಿಂದ ಆತನನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು.
- Psalm 31:11 ಕೀರ್ತನೆಗಳು 31:11ನನ್ನ ವೈರಿ ಗಳೆಲ್ಲರಿಗೆ, ವಿಶೇಷವಾಗಿ ನನ್ನ ನೆರೆಯವರಿಗೆ, ನಾನು ನಿಂದೆಯೂ ಪರಿಚಿತರಿಗೆ ಹೆದರಿಕೆಯೂ ಆಗಿದ್ದೇನೆ; ಹೊರಗೆ ನನ್ನನ್ನು ನೋಡಿದವರು ನನ್ನನ್ನು ಬಿಟ್ಟು ಓಡಿಹೋದರು.
- Job 19:13–17 ಯೋಬನು 19:13–17ನನ್ನ ಸಹೋದರರನ್ನು ನನಗೆ ದೂರ ಮಾಡು ತ್ತಾನೆ; ನನ್ನ ಪರಿಚಯದ ಸ್ನೇಹಿತರು ನನಗೆ ಅನ್ಯರೇ ಆದರು. ನನ್ನ ನೆರೆಯವರು ತಡೆಯುತ್ತಾರೆ; ನನ್ನ ಪರಿಚಯದ ಸ್ನೇಹಿತರು ನನ್ನನ್ನು ಮರೆತ್ತಿದ್ದಾರೆ. ನನ್ನ ಮನೆಯಲ್ಲಿ ತಂಗುವವರೂ ನನ್ನ ದಾಸಿಗಳೂ ನನ್ನನ್ನೂ ಪರನೆಂದು ಎಣಿಸುತ್ತಾರೆ; ಅವರ ದೃಷ್ಟಿಯಲ್ಲಿ ನಾನು ಪರದೇಶದವನ ಹಾಗೆ ಇದ್ದೇನೆ. ನನ್ನ ಸೇವಕನನ್ನು ಕರೆದರೆ, ಅವನು ನನಗೆ ಉತ್ತರ ಕೊಡುವದಿಲ್ಲ; ನನ್ನ ಬಾಯಿಯಿಂದ ಅವನನ್ನು ಬೇಡಿಕೊಳ್ಳಬೇಕಾ ಯಿತು. ನನ್ನ ಶ್ವಾಸವು ನನ್ನ ಹೆಂಡತಿಗೆ ತಿಳಿಯದ್ದಾಗಿದೆ; ನನ್ನ ಹೊಟ್ಟೆಯ ಮಕ್ಕಳನ್ನು ಬೇಡುತ್ತೇನೆ.
- Psalm 88:18 ಕೀರ್ತನೆಗಳು 88:18ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
- John 16:32 ಯೋಹಾನನು 16:32ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ.ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- Luke 22:54 ಲೂಕನು 22:54ಆಗ ಅವರು ಆತನನ್ನು ತೆಗೆದುಕೊಂಡು ಮಹಾ ಯಾಜಕನ ಮನೆಯೊಳಕ್ಕೆ ಸಾಗಿಸಿಕೊಂಡು ಬಂದರು. ಪೇತ್ರನು ದೂರದಿಂದ ಹಿಂಬಾಲಿಸಿದನು.
- Luke 10:31–32 ಲೂಕನು 10:31–32ಆಗ ಅನಿರೀಕ್ಷಿತವಾಗಿ ಒಬ್ಬಾನೊಬ್ಬ ಯಾಜಕನು ಆ ಮಾರ್ಗವಾಗಿ ಬಂದು ಅವನನ್ನು ನೋಡಿ ಓರೆ ಯಾಗಿ ಹೋದನು. ಅದೇ ಪ್ರಕಾರ ಒಬ್ಬ ಲೇವಿ ಯೂ ಆ ಸ್ಥಳಕ್ಕೆ ಬಂದು ಅವನನ್ನು ನೋಡಿ ಓರೆಯಾಗಿ ಹೋದನು.
- Job 6:21–23 ಯೋಬನು 6:21–23ಈಗ ನೀವು ಏನೂ ಅಲ್ಲದವರಾ ಗಿದ್ದೀರಿ; ನನ್ನ ವಿಪತ್ತನ್ನು ನೋಡಿ ಭಯಪಡುತ್ತೀರಿ. ನನ್ನ ಬಳಿಗೆ ತನ್ನಿರಿ ಎಂದೂ ನಿಮ್ಮ ಸಂಪತ್ತಿನಿಂದ ಲಂಚಕೊಡಿರಿ ಎಂದೂ ಶತ್ರುವಿನ ಕೈಯಿಂದ ನನ್ನನ್ನು ತಪ್ಪಿಸಿರಿ ಎಂದೂ ಬಲಾತ್ಕಾರಿಗಳ ಕೈಗಳಿಂದ ನನ್ನನ್ನು ವಿಮೋಚಿಸಿರೆಂದೂ ನಾನು ಹೇಳಿದೆನೋ?
- Matthew 26:56 ಮತ್ತಾಯನು 26:56ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
- Isaiah 53:4 ಯೆಶಾಯ 53:4ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.
- Isaiah 53:8 ಯೆಶಾಯ 53:8ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು.