Psalms · chapter 4 · verse 3
Psalm 4:3 in Kannada
ಕರ್ತನು ತನ್ನ ಭಕ್ತನನ್ನು ತನಗಾಗಿ ಪ್ರತ್ಯೇಕಿಸಿದ್ದಾನೆಂದು ತಿಳಿದು ಕೊಳ್ಳಿರಿ. ನಾನು ಕರ್ತನನ್ನು ಮೊರೆಯಿಡಲು ಆತನು ಕೇಳುವನು.
Kartanu tanna bhaktanannu tanagaagi pratyekisiddaanendu tilidu kolliri. Naanu kartanannu moreyidalu aatanu keluvanu.
Psalm 4:3 in English
- King James Version (KJV)
- But know that the LORD hath set apart him that is godly for himself: the LORD will hear when I call unto him.
- World English Bible (WEB)
- But know that the LORD has set apart for himself him who is godly; The LORD will hear when I call to him.
- American Standard Version (ASV)
- But know that Jehovah hath set apart for himself him that is godly: Jehovah will hear when I call unto him.
- Bible in Basic English (BBE)
- See how the Lord has made great his mercy for me; the Lord will give ear to my cry.
- Darby Translation (DBY)
- But know that Jehovah hath set apart the pious [man] for himself: Jehovah will hear when I call unto him.
- Webster's Bible (WBS)
- But know that the LORD hath set apart him that is godly for himself: the LORD will hear when I call to him.
- Young's Literal Translation (YLT)
- And know ye that Jehovah Hath separated a saintly one to Himself. Jehovah heareth in my calling to Him.
Read in context
- 1ನನ್ನ ನೀತಿಯಾದ ಓ ದೇವರೇ, ನಾನು ಮೊರೆಯಿಡಲು ನನಗೆ ಕಿವಿಗೊಡು, ಇಕ್ಕಟ್ಟಿನಲ್ಲಿ ನನಗೆ ವಿಶಾಲಮಾಡಿದಿ. ನನ್ನ ಮೇಲೆ ಕರುಣೆಯಿಟ್ಟು ನನ್ನ ಪ್ರಾರ್ಥನೆಯನ್ನು ಕೇಳು.
- 2ಓ ಮನುಷ್ಯರ ಪುತ್ರರೇ, ನನ್ನ ಘನವನ್ನು ಅವ ಮಾನಕ್ಕೆ ತಿರುಗಿಸುವದು ಎಷ್ಟರ ವರೆಗೆ? ನೀವು ವ್ಯರ್ಥವಾದದ್ದನ್ನು ಪ್ರೀತಿಮಾಡಿ ಸುಳ್ಳನ್ನು ಹುಡುಕು ವದು ಎಷ್ಟರ ವರೆಗೆ? ಸೆಲಾ.
- 3ಕರ್ತನು ತನ್ನ ಭಕ್ತನನ್ನು ತನಗಾಗಿ ಪ್ರತ್ಯೇಕಿಸಿದ್ದಾನೆಂದು ತಿಳಿದು ಕೊಳ್ಳಿರಿ. ನಾನು ಕರ್ತನನ್ನು ಮೊರೆಯಿಡಲು ಆತನು ಕೇಳುವನು.
- 4ಭಯಭಕ್ತಿಯಿಂದಿರ್ರಿ; ಪಾಪಮಾಡಬೇಡಿರಿ; ಹಾಸಿಗೆ ಗಳ ಮೇಲೆ ನಿಮ್ಮ ಸ್ವಂತ ಹೃದಯದಲ್ಲಿ ಮಾತನಾಡಿ ಮೌನವಾಗಿರ್ರಿ. ಸೆಲಾ.
- 5ನೀತಿಯ ಬಲಿಗಳನ್ನು ಅರ್ಪಿ ಸಿರಿ; ಕರ್ತನಲ್ಲಿ ನಿಮ್ಮ ಭರವಸವಿಡಿರಿ.
Cross references
- John 15:16 ಯೋಹಾನನು 15:16ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
- Psalm 34:15 ಕೀರ್ತನೆಗಳು 34:15ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.
- Psalm 91:14–15 ಕೀರ್ತನೆಗಳು 91:14–15ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು. ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- 2 Thessalonians 2:13–14 2 ಥೆಸಲೊನೀಕದವರಿಗೆ 2:13–14ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
- 2 Timothy 2:19 2 ತಿಮೊಥೆಯನಿಗೆ 2:19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
- 2 Peter 2:9 2 ಪೇತ್ರನು 2:9ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Ephesians 2:10 ಎಫೆಸದವರಿಗೆ 2:10ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- Exodus 33:16 ವಿಮೋಚನಕಾಂಡ 33:16ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು.
- Psalm 6:8 ಕೀರ್ತನೆಗಳು 6:8ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ;
- Psalm 31:23 ಕೀರ್ತನೆಗಳು 31:23ಕರ್ತನ ಎಲ್ಲಾ ಪರಿಶುದ್ಧರೇ, ಆತನನ್ನು ಪ್ರೀತಿ ಮಾಡಿರಿ; ಕರ್ತನು ನಂಬಿಕೆಯುಳ್ಳವರನ್ನು ಕಾಯು ತ್ತಾನೆ; ಅಹಂಕಾರ ಮಾಡುವವನಿಗೆ ಬಹಳವಾಗಿ ಮುಯ್ಯಿಗೆಮುಯ್ಯಿ ತೀರಿಸುತ್ತಾನೆ.ಕರ್ತನಲ್ಲಿ ನಿರೀಕ್ಷಿ ಸುವವರೆಲ್ಲರೇ, ಧೈರ್ಯವಾಗಿರ್ರಿ; ಆತನು ನಿಮ್ಮ ಹೃದಯವನ್ನು ದೃಢಪಡಿಸುವನು.