Psalms · chapter 4 · verse 5
Psalm 4:5 in Kannada
ನೀತಿಯ ಬಲಿಗಳನ್ನು ಅರ್ಪಿ ಸಿರಿ; ಕರ್ತನಲ್ಲಿ ನಿಮ್ಮ ಭರವಸವಿಡಿರಿ.
Neetiya baligalannu arpi siri; kartanalli nimma bharavasavidiri.
Psalm 4:5 in English
- King James Version (KJV)
- Offer the sacrifices of righteousness, and put your trust in the LORD.
- World English Bible (WEB)
- Offer the sacrifices of righteousness. Put your trust in the LORD.
- American Standard Version (ASV)
- Offer the sacrifices of righteousness, And put your trust in Jehovah.
- Bible in Basic English (BBE)
- Give the offerings of righteousness, and put your faith in the Lord.
- Darby Translation (DBY)
- Offer sacrifices of righteousness, and confide in Jehovah.
- Webster's Bible (WBS)
- Offer the sacrifices of righteousness, and put your trust in the LORD.
- Young's Literal Translation (YLT)
- Sacrifice ye sacrifices of righteousness, And trust ye unto Jehovah.
Read in context
- 3ಕರ್ತನು ತನ್ನ ಭಕ್ತನನ್ನು ತನಗಾಗಿ ಪ್ರತ್ಯೇಕಿಸಿದ್ದಾನೆಂದು ತಿಳಿದು ಕೊಳ್ಳಿರಿ. ನಾನು ಕರ್ತನನ್ನು ಮೊರೆಯಿಡಲು ಆತನು ಕೇಳುವನು.
- 4ಭಯಭಕ್ತಿಯಿಂದಿರ್ರಿ; ಪಾಪಮಾಡಬೇಡಿರಿ; ಹಾಸಿಗೆ ಗಳ ಮೇಲೆ ನಿಮ್ಮ ಸ್ವಂತ ಹೃದಯದಲ್ಲಿ ಮಾತನಾಡಿ ಮೌನವಾಗಿರ್ರಿ. ಸೆಲಾ.
- 5ನೀತಿಯ ಬಲಿಗಳನ್ನು ಅರ್ಪಿ ಸಿರಿ; ಕರ್ತನಲ್ಲಿ ನಿಮ್ಮ ಭರವಸವಿಡಿರಿ.
- 6ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.
- 7ಅವರ ಧಾನ್ಯವೂ ದ್ರಾಕ್ಷಾರಸವೂ ಹೆಚ್ಚಿದ ಕಾಲಕ್ಕಿಂತ ಅಧಿಕ ವಾಗಿ ನನ್ನ ಹೃದಯದಲ್ಲಿ ಸಂತೋಷವನ್ನು ಇಟ್ಟಿದ್ದೀ.ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
Cross references
- Hebrews 13:15–16 ಇಬ್ರಿಯರಿಗೆ 13:15–16ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ. ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
- Psalm 37:3 ಕೀರ್ತನೆಗಳು 37:3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
- Psalm 51:19 ಕೀರ್ತನೆಗಳು 51:19ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
- 1 Peter 4:19 1 ಪೇತ್ರನು 4:19ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
- Deuteronomy 33:19 ಧರ್ಮೋಪದೇಶಕಾಂಡ 33:19ಅವರು ಜನಗಳನ್ನು ಬೆಟ್ಟಕ್ಕೆ ಕರೆಯುವರು. ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. ಯಾಕಂದರೆ ಸಮುದ್ರಗಳ ಉಗ್ರಾಣವನ್ನೂ ಮರಳಿನ ಗುಪ್ತವಾದ ದ್ರವ್ಯವನ್ನೂ ಹೀರಿಕೊಳ್ಳುವರು ಎಂದು ಹೇಳಿದನು.
- Psalm 62:8 ಕೀರ್ತನೆಗಳು 62:8ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Isaiah 1:11–18 ಯೆಶಾಯ 1:11–18ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ. ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು? ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು. ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ. ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ. ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ; ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ. ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
- Psalm 50:14 ಕೀರ್ತನೆಗಳು 50:14ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.
- Matthew 5:23 ಮತ್ತಾಯನು 5:23ಆದದರಿಂದ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಬಳಿಗೆ ತಂದಾಗ ನಿನಗೆ ವಿರೋಧ ವಾದದ್ದು ನಿನ್ನ ಸಹೋದರನಿಗೆ ಇದೆಯೆಂದು ನೆನಪಿಗೆ ಬಂದರೆ
- Malachi 1:8 ಮಲಾಕಿಯ 1:8ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ?
- Psalm 84:11–12 ಕೀರ್ತನೆಗಳು 84:11–12ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು. ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- Isaiah 61:8 ಯೆಶಾಯ 61:8ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.