Skip to content
ThuthiThuthiThuthi
Psalms · chapter 40 of 150 · 17 verses

Psalm 40 in Kannada

ಕೀರ್ತನೆಗಳು 40

  1. ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.

    To the chief Musician, A Psalm of David. I waited patiently for the LORD; and he inclined unto me, and heard my cry.

  2. ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು.

    He brought me up also out of an horrible pit, out of the miry clay, and set my feet upon a rock, [and] established my goings.

  3. ನನ್ನ ಬಾಯಲ್ಲಿ ನೂತನ ಹಾಡನ್ನು ಇಟ್ಟಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ; ಅನೇಕರು ಇದನ್ನು ನೋಡಿ ಭಯಪಟ್ಟು ಕರ್ತನಲ್ಲಿ ಭರವಸವಿಡುವರು.

    And he hath put a new song in my mouth, [even] praise unto our God: many shall see [it], and fear, and shall trust in the LORD.

  4. ಕರ್ತನನ್ನು ತನ್ನ ಭರವಸವಾಗಿ ಮಾಡಿಕೊಂಡು ಅಹಂಕಾರಿಗಳನ್ನು ಗೌರವಿಸದೆಯೂ ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳ ದೆಯೂ ಇರುವ ಮನುಷ್ಯನು ಧನ್ಯನು.

    Blessed [is] that man that maketh the LORD his trust, and respecteth not the proud, nor such as turn aside to lies.

  5. ಓ ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ.

    Many, O LORD my God, [are] thy wonderful works [which] thou hast done, and thy thoughts [which are] to us-ward: they cannot be reckoned up in order unto thee: [if] I would declare and speak [of them], they are more than can be numbered.

  6. ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ;

    Sacrifice and offering thou didst not desire; mine ears hast thou opened: burnt offering and sin offering hast thou not required.

  7. ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ.

    Then said I, Lo, I come: in the volume of the book [it is] written of me,

  8. ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.

    I delight to do thy will, O my God: yea, thy law [is] within my heart.

  9. ನಾನು ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿಬಿಟ್ಟಿದ್ದೇನೆ; ಇಗೋ, ಓ ಕರ್ತನೇ, ನಾನು ನನ್ನ ತುಟಿಗಳಿಗೆ ಅಡ್ಡಿ ಮಾಡಲಿಲ್ಲವೆಂಬ ಸಂಗತಿ ನೀನು ತಿಳಿದವ ನಾಗಿದ್ದೀ.

    I have preached righteousness in the great congregation: lo, I have not refrained my lips, O LORD, thou knowest.

  10. ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ.

    I have not hid thy righteousness within my heart; I have declared thy faithfulness and thy salvation: I have not concealed thy lovingkindness and thy truth from the great congregation.

  11. ಕರ್ತನೇ, ನಿನ್ನ ಅಂತಃಕರುಣೆಗಳನ್ನು ನನ್ನಿಂದ ಹಿಂತೆಗೆಯಬೇಡ; ನಿನ್ನ ಪ್ರೀತಿ ಕರುಣೆಗಳೂ ನಿನ್ನ ಸತ್ಯವೂ ಯಾವಾಗಲೂ ನನ್ನನ್ನು ಕಾಯಲಿ.

    Withhold not thou thy tender mercies from me, O LORD: let thy lovingkindness and thy truth continually preserve me.

  12. ಲೆಕ್ಕ ವಿಲ್ಲದಷ್ಟು ಕೇಡುಗಳು ನನ್ನ ಸುತ್ತಲು ಆವರಿಸಿಕೊಂಡಿವೆ; ನಾನು ಮೇಲಕ್ಕೆ ನೋಡಲಾರದಷ್ಟು ನನ್ನ ಅಕ್ರಮ ಗಳು ನನ್ನನ್ನು ಹಿಡಿದವೆ; ಅವು ನನ್ನ ತಲೆಯ ಕೂದಲು ಗಳಿಗಿಂತ ಹೆಚ್ಚಾಗಿವೆ; ಆದದರಿಂದ ನನ್ನ ಹೃದಯವು ನನ್ನನ್ನು ಕುಂದಿಸಿತು.

    For innumerable evils have compassed me about: mine iniquities have taken hold upon me, so that I am not able to look up; they are more than the hairs of mine head: therefore my heart faileth me.

  13. ಓ ಕರ್ತನೇ, ನನ್ನನ್ನು ಬಿಡಿಸು ವದಕ್ಕೆ ಇಷ್ಟವುಳ್ಳವನಾಗಿ, ಓ ಕರ್ತನೆ, ನನ್ನ ಸಹಾ ಯಕ್ಕೆ ತ್ವರೆಪಡು.

    Be pleased, O LORD, to deliver me: O LORD, make haste to help me.

  14. ನನ್ನ ಪ್ರಾಣವನ್ನು ತೆಗೆಯಲು ಅದನ್ನು ಹುಡುಕುವದಕ್ಕೆ ಕೂಡಿಕೊಳ್ಳುವವರೆಲ್ಲರೂ ಆಶಾಭಂಗಪಟ್ಟು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಪಡುವವರು ಹಿಂದಕ್ಕೆ ಅಟ್ಟಲ್ಪಟ್ಟು ಅವ ಮಾನ ಹೊಂದಲಿ.

    Let them be ashamed and confounded together that seek after my soul to destroy it; let them be driven backward and put to shame that wish me evil.

  15. ಆಹಾ, ಆಹಾ ಎಂದು ನನಗೆ ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ಹಾಳಾಗಲಿ;

    Let them be desolate for a reward of their shame that say unto me, Aha, aha.

  16. ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡುವ ವರು--ಕರ್ತನು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ.ಆದರೆ ನಾನು ದೀನನೂ ಬಡ ವನೂ ಆಗಿದ್ದೇನೆ; ಆದರೂ ಕರ್ತನು ನನಗೋಸ್ಕರ ಯೋಚಿಸುತ್ತಾನೆ; ನನ್ನ ಸಹಾಯವೂ ನನ್ನನ್ನು ತಪ್ಪಿಸುವಾ ತನೂ ನೀನೇ; ಓ ನನ್ನ ದೇವರೇ, ತಡ ಮಾಡಬೇಡ.

    Let all those that seek thee rejoice and be glad in thee: let such as love thy salvation say continually, The LORD be magnified.

  17. ಆದರೆ ನಾನು ದೀನನೂ ಬಡ ವನೂ ಆಗಿದ್ದೇನೆ; ಆದರೂ ಕರ್ತನು ನನಗೋಸ್ಕರ ಯೋಚಿಸುತ್ತಾನೆ; ನನ್ನ ಸಹಾಯವೂ ನನ್ನನ್ನು ತಪ್ಪಿಸುವಾ ತನೂ ನೀನೇ; ಓ ನನ್ನ ದೇವರೇ, ತಡ ಮಾಡಬೇಡ.

    But I [am] poor and needy; [yet] the Lord thinketh upon me: thou [art] my help and my deliverer; make no tarrying, O my God.

All chapters of Psalms · Kannada Bible · Psalm 40 in Tamil

Kannada Bible: Kannada Old Version, public domain.

King James Version: public domain.