Psalms · chapter 40 · verse 4
Psalm 40:4 in Kannada
ಕರ್ತನನ್ನು ತನ್ನ ಭರವಸವಾಗಿ ಮಾಡಿಕೊಂಡು ಅಹಂಕಾರಿಗಳನ್ನು ಗೌರವಿಸದೆಯೂ ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳ ದೆಯೂ ಇರುವ ಮನುಷ್ಯನು ಧನ್ಯನು.
Kartanannu tanna bharavasavaagi maadikondu ahankaarigalannu gauravisadeyoo illave sullina kadege tirugikolla deyoo iruva manushyanu dhanyanu.
Psalm 40:4 in English
- King James Version (KJV)
- Blessed [is] that man that maketh the LORD his trust, and respecteth not the proud, nor such as turn aside to lies.
- World English Bible (WEB)
- Blessed is the man who makes the LORD his trust, and doesn’t respect the proud, nor such as turn away to lies.
- American Standard Version (ASV)
- Blessed is the man that maketh Jehovah his trust, And respecteth not the proud, nor such as turn aside to lies.
- Bible in Basic English (BBE)
- Happy is the man who has faith in the Lord, and does not give honour to the men of pride or to those who are turned away to deceit.
- Darby Translation (DBY)
- Blessed is the man that hath made Jehovah his confidence, and turneth not to the proud, and to such as turn aside to lies.
- Webster's Bible (WBS)
- Blessed [is] that man that maketh the LORD his trust, and respecteth not the proud, nor such as turn aside to lies.
- Young's Literal Translation (YLT)
- O the happiness of the man Who hath made Jehovah his trust, And hath not turned unto the proud, And those turning aside to lies.
Read in context
- 2ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು.
- 3ನನ್ನ ಬಾಯಲ್ಲಿ ನೂತನ ಹಾಡನ್ನು ಇಟ್ಟಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ; ಅನೇಕರು ಇದನ್ನು ನೋಡಿ ಭಯಪಟ್ಟು ಕರ್ತನಲ್ಲಿ ಭರವಸವಿಡುವರು.
- 4ಕರ್ತನನ್ನು ತನ್ನ ಭರವಸವಾಗಿ ಮಾಡಿಕೊಂಡು ಅಹಂಕಾರಿಗಳನ್ನು ಗೌರವಿಸದೆಯೂ ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳ ದೆಯೂ ಇರುವ ಮನುಷ್ಯನು ಧನ್ಯನು.
- 5ಓ ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ.
- 6ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ;
Cross references
- Jeremiah 17:7–8 ಯೆರೆಮೀಯ 17:7–8ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು. ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.
- Psalm 84:11–12 ಕೀರ್ತನೆಗಳು 84:11–12ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು. ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- Psalm 34:8 ಕೀರ್ತನೆಗಳು 34:8ಕರ್ತನು ಒಳ್ಳೆಯವನೆಂದು ರುಚಿಸಿ ನೋಡಿರಿ; ಆತನಲ್ಲಿ ಆಶ್ರ ಯಿಸಿಕೊಳ್ಳುವ ಮನುಷ್ಯನು ಧನ್ಯನು.
- Psalm 125:5 ಕೀರ್ತನೆಗಳು 125:5ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
- Psalm 118:8–9 ಕೀರ್ತನೆಗಳು 118:8–9ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು. ಅಧಿಪತಿಗಳಲ್ಲಿ ಭರವಸವಿಡುವದಕ್ಕಿಂತ ಕರ್ತನನ್ನು ನಂಬಿಕೊಳ್ಳುವದು ಒಳ್ಳೇದು.
- Psalm 2:12 ಕೀರ್ತನೆಗಳು 2:12ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- Romans 15:12–13 ರೋಮಾಪುರದವರಿಗೆ 15:12–13ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು. ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
- Jonah 2:8 ಯೋನ 2:8ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.
- 2 Thessalonians 2:9–11 2 ಥೆಸಲೊನೀಕದವರಿಗೆ 2:9–11ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
- Psalm 15:4 ಕೀರ್ತನೆಗಳು 15:4ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
- Jeremiah 10:14–15 ಯೆರೆಮೀಯ 10:14–15ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ. ಅವು ವ್ಯರ್ಥವೇ, ತಪ್ಪಾದ ಕೆಲಸವೇ; ಅವು ವಿಚಾ ರಿಸಲ್ಪಡುವ ಕಾಲದಲ್ಲಿ ನಾಶವಾಗುವವು.
- Isaiah 44:18–20 ಯೆಶಾಯ 44:18–20ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ. ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು. ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.