Psalms · chapter 40 · verse 6
Psalm 40:6 in Kannada
ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ;
Yajnyadalliyoo arpaneyalliyoo neenu ishta padalilla; dahanabaliyannoo paapadabaliyannoo neenu kelalilla. Nanna kivigalannu neenu teredi;
Psalm 40:6 in English
- King James Version (KJV)
- Sacrifice and offering thou didst not desire; mine ears hast thou opened: burnt offering and sin offering hast thou not required.
- World English Bible (WEB)
- Sacrifice and offering you didn’t desire. You have opened my ears. You have not required burnt offering and sin offering.
- American Standard Version (ASV)
- Sacrifice and offering thou hast no delight in; Mine ears hast thou opened: Burnt-offering and sin-offering hast thou not required.
- Bible in Basic English (BBE)
- You had no desire for offerings of beasts or fruits of the earth; ears you made for me: for burned offerings and sin offerings you made no request.
- Darby Translation (DBY)
- Sacrifice and oblation thou didst not desire: ears hast thou prepared me. Burnt-offering and sin-offering hast thou not demanded;
- Webster's Bible (WBS)
- Sacrifice and offering thou didst not desire; my ears hast thou opened: burnt-offering and sin-offering hast thou not required.
- Young's Literal Translation (YLT)
- Sacrifice and present Thou hast not desired, Ears Thou hast prepared for me, Burnt and sin-offering Thou hast not asked.
Read in context
- 4ಕರ್ತನನ್ನು ತನ್ನ ಭರವಸವಾಗಿ ಮಾಡಿಕೊಂಡು ಅಹಂಕಾರಿಗಳನ್ನು ಗೌರವಿಸದೆಯೂ ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳ ದೆಯೂ ಇರುವ ಮನುಷ್ಯನು ಧನ್ಯನು.
- 5ಓ ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ.
- 6ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ;
- 7ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ.
- 8ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
Cross references
- Hebrews 10:5–12 ಇಬ್ರಿಯರಿಗೆ 10:5–12ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ; ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ; ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ. ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ. ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ. ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು. ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು. ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
- Isaiah 1:11 ಯೆಶಾಯ 1:11ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
- 1 Samuel 15:22 1 ಸಮುವೇಲನು 15:22ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.
- Psalm 51:16 ಕೀರ್ತನೆಗಳು 51:16ಯಜ್ಞ ವನ್ನು ನೀನು ಇಷ್ಟಪಡುದಿಲ್ಲ. ಇಲ್ಲವಾದರೆ ನಾನು ಅದನ್ನು ಕೊಡುತ್ತಿದ್ದೆನು. ದಹನಬಲಿಯಲ್ಲಿ ನೀನು ಸಂತೋಷಪಡುವದಿಲ್ಲ.
- Hosea 6:6 ಹೋಶೇಯ 6:6ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.
- Matthew 9:13 ಮತ್ತಾಯನು 9:13ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.
- Matthew 12:7 ಮತ್ತಾಯನು 12:7ಆದರೆ--ನನಗೆ ಯಜ್ಞವಲ್ಲ, ಕರುಣೆಯೇ ಬೇಕು ಎಂಬದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡು ತ್ತಿದ್ದಿಲ್ಲ.
- Amos 5:22 ಆಮೋಸ 5:22ನೀವು ನನಗೆ ದಹನಬಲಿಗಳನ್ನೂ ಆಹಾರ ಅರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವುಗಳನ್ನು ಅಂಗೀ ಕರಿಸುವದಿಲ್ಲ, ಇಲ್ಲವೆ ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನು ಲಕ್ಷಿಸುವದಿಲ್ಲ.
- Jeremiah 7:21–23 ಯೆರೆಮೀಯ 7:21–23ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ. ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ. ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
- Job 33:16 ಯೋಬನು 33:16ಆತನು ಮನುಷ್ಯರ ಕಿವಿಗಳನ್ನು ತೆರೆದು ಶಿಕ್ಷಣದ ಮಾತು ಗಳನ್ನು ಅವರಿಗೆ ಮುದ್ರೆಹಾಕುತ್ತಾನೆ.
- Isaiah 66:3 ಯೆಶಾಯ 66:3ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
- Isaiah 50:4–5 ಯೆಶಾಯ 50:4–5ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ. ಕರ್ತನಾದ ದೇವರು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರುಬೀಳಲಿಲ್ಲ ಇಲ್ಲವೆ ವಿಮುಖನಾಗಲೂ ಇಲ್ಲ.