Psalms · chapter 41 · verse 3
Psalm 41:3 in Kannada
ಹಾಸಿಗೆಯ ಮೇಲೆ ಕ್ಷೀಣಿಸುವ ವನನ್ನು ಕರ್ತನು ಬಲಪಡಿಸುವನು. ನೀನು ಅವನ ರೋಗದಲ್ಲಿ ಹಾಸಿಗೆಯನ್ನು ಸರಿಮಾಡುವಿ.
Haasigeya mele ksheenisuva vanannu kartanu balapadisuvanu. Neenu avana rogadalli haasigeyannu sarimaaduvi.
Psalm 41:3 in English
- King James Version (KJV)
- The LORD will strengthen him upon the bed of languishing: thou wilt make all his bed in his sickness.
- World English Bible (WEB)
- The LORD will sustain him on his sickbed, and restore him from his bed of illness.
- American Standard Version (ASV)
- Jehovah will support him upon the couch of languishing: Thou makest all his bed in his sickness.
- Bible in Basic English (BBE)
- The Lord will be his support on his bed of pain: by you will all his grief be turned to strength.
- Darby Translation (DBY)
- Jehovah will sustain him upon the bed of languishing: thou turnest all his bed in his sickness.
- Webster's Bible (WBS)
- The LORD will strengthen him upon the bed of languishing: thou wilt make all his bed in his sickness.
- Young's Literal Translation (YLT)
- Jehovah supporteth on a couch of sickness, All his bed Thou hast turned in his weakness.
Read in context
- 1ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
- 2ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ.
- 3ಹಾಸಿಗೆಯ ಮೇಲೆ ಕ್ಷೀಣಿಸುವ ವನನ್ನು ಕರ್ತನು ಬಲಪಡಿಸುವನು. ನೀನು ಅವನ ರೋಗದಲ್ಲಿ ಹಾಸಿಗೆಯನ್ನು ಸರಿಮಾಡುವಿ.
- 4ಕರ್ತನೇ, ನನಗೆ ಕರುಣೆ ತೋರಿಸಿ ನನ್ನ ಪ್ರಾಣವನ್ನು ಸ್ವಸ್ಥಮಾಡು; ನಿನಗೆ ವಿರೋಧವಾಗಿ ಪಾಪಮಾಡಿದೆ ನೆಂದು ನಾನು ಹೇಳಿದೆನು.
- 5ಅವನು ಸತ್ತು ಅವನ ಹೆಸರು ನಾಶವಾಗುವದು ಯಾವಾಗ ಎಂದು ನನ್ನ ಶತ್ರುಗಳು ನನ್ನನ್ನು ಕುರಿತು ಕೇಡನ್ನು ಮಾತನಾಡುತ್ತಾರೆ.
Cross references
- 2 Kings 20:5–6 2 ಅರಸುಗಳು 20:5–6ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ. ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರುಷ ಹೆಚ್ಚಾಗಿ ಕೂಡಿ ಸುತ್ತೇನೆ; ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರಿನ ಅರಸನ ಕೈಗೆ ಬೀಳದಂತೆ ತಪ್ಪಿಸಿಬಿಡುವೆನು. ಈ ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನೆಂದು ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೇಳು ತ್ತಾನೆ ಎಂಬದೇ.
- Psalm 73:26 ಕೀರ್ತನೆಗಳು 73:26ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
- Philippians 2:26–27 ಫಿಲಿಪ್ಪಿಯವರಿಗೆ 2:26–27ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು, ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ತುಂಬಾ ವ್ಯಸನಪಟ್ಟನು. ಅವನು ರೋಗದಲ್ಲಿ ಬಿದ್ದು ಸಾಯುವಹಾಗಿದ್ದನೆಂಬದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನೂ ಕರುಣಿಸಿದನು.
- 2 Corinthians 4:16–17 2 ಕೊರಿಂಥದವರಿಗೆ 4:16–17ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು. ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
- 2 Kings 1:16 2 ಅರಸುಗಳು 1:16ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ--ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
- 2 Kings 1:6 2 ಅರಸುಗಳು 1:6ಅವರು ಅವನಿಗೆ ಹೇಳಿದ್ದೇನಂದರೆ--ಒಬ್ಬ ಮನು ಷ್ಯನು ಎದುರಾಗಿ ಬಂದು ನಮಗೆ--ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ತಿರುಗಿ ಹೋಗಿ-- ಇಸ್ರಾ ಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ಕಳುಹಿಸುವದೇನು? ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆಂಬದಾಗಿ ಅವನಿಗೆ ಹೇಳಿರಿ ಅಂದನು.