Psalms · chapter 44 · verse 14
Psalm 44:14 in Kannada
ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ.
Anyajanaangagalalli gaadeyaagiyoo prajegalalli taleyaadisuvante nammannu iduttee.
Psalm 44:14 in English
- King James Version (KJV)
- Thou makest us a byword among the heathen, a shaking of the head among the people.
- World English Bible (WEB)
- You make us a byword among the nations, a shaking of the head among the peoples.
- American Standard Version (ASV)
- Thou makest us a byword among the nations, A shaking of the head among the peoples.
- Bible in Basic English (BBE)
- Our name is a word of shame among the nations, a sign for the shaking of heads among the peoples.
- Darby Translation (DBY)
- Thou makest us a byword among the nations, a shaking of the head among the peoples.
- Webster's Bible (WBS)
- Thou makest us a by-word among the heathen, a shaking of the head among the people.
- Young's Literal Translation (YLT)
- Thou makest us a simile among nations, A shaking of the head among peoples.
Read in context
- 12ನಿನ್ನ ಜನರನ್ನು ಕ್ರಯವಿಲ್ಲದೆ ಮಾರಿಬಿಡುತ್ತೀ. ಅವರ ಬೆಲೆಯಿಂದ ನೀನು ನಿನ್ನ ಸಂಪತ್ತನ್ನು ಹೆಚ್ಚು ಮಾಡಲಿಲ್ಲ.
- 13ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ.
- 14ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ.
- 15ನಿಂದಕನ ಮತ್ತು ದೂಷಕನ ಸ್ವರಕ್ಕೋಸ್ಕರವೂ ಶತ್ರುವಿನ ಮುಯ್ಯಿಗೆಮುಯ್ಯಿ ಕೊಡುವವನ ನಿಮಿ ತ್ತವೂ
- 16ದಿನವೆಲ್ಲಾ ನನ್ನ ಗಲಿಬಿಲಿಯು ನನ್ನ ಮುಂದೆ ಇದೆ; ನನ್ನ ಮುಖದ ನಾಚಿಕೆಯು ನನ್ನನ್ನು ಮುಚ್ಚಿಯದೆ.
Cross references
- Jeremiah 24:9 ಯೆರೆಮೀಯ 24:9ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
- 2 Kings 19:21 2 ಅರಸುಗಳು 19:21ಚೀಯೋನಿನ ಮಗಳಾದ ಕನ್ಯಾಸ್ತ್ರೀ ನಿನ್ನನ್ನು ಉದಾಸೀನ ಮಾಡಿ ನಿನಗೆ ಅಪಹಾಸ್ಯ ಮಾಡು ತ್ತಾಳೆ; ಯೆರೂಸಲೇಮಿನ ಕುಮಾರ್ತೆ ನಿನ್ನ ಹಿಂದೆ ತಲೆ ಅಲ್ಲಾಡಿಸುತ್ತಾಳೆ.
- Job 16:4 ಯೋಬನು 16:4ನಿಮ್ಮ ಪ್ರಾಣವು ನನ್ನ ಪ್ರಾಣದ ಸ್ಥಳದಲ್ಲಿ ಇದ್ದರೆ ನಾನು ಸಹ ನಿಮ್ಮ ಹಾಗೆ ಮಾತಾಡಬಹುದು; ಮಾತುಗಳನ್ನು ನಿಮ್ಮ ಮೇಲೆ ಕೂಡಿಸಬಹುದು; ನಿಮಗೆ ವಿರೋಧವಾಗಿ ನನ್ನ ತಲೆ ಅಲ್ಲಾಡಿಸಬಹುದು.
- Deuteronomy 28:37 ಧರ್ಮೋಪದೇಶಕಾಂಡ 28:37ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ.
- Job 17:6 ಯೋಬನು 17:6ನನ್ನನ್ನು ಜನರಿಗೆ ಗಾದೆಯಾಗ ಮಾಡಿದನು; ಅವರ ಮುಂದೆ ನಾನು ಬಾರಿಸುವ ವಾದ್ಯವಾದೆನು.
- Lamentations 2:15–17 ಪ್ರಲಾಪಗಳು 2:15–17ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ? ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ. ಕರ್ತನು ತಾನು ಸಂಕಲ್ಪಿಸಿದ್ದನ್ನು ಮಾಡಿದ್ದಾನೆ; ಆತನು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತನ್ನ ವಾಕ್ಯವನ್ನು ಪೂರೈಸಿದ್ದಾನೆ. ಆತನು ಕೆಡವಿ ಕನಿಕರಿಸಲಿಲ್ಲ; ಆತನು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿ ಅವನ ಕೊಂಬನ್ನು ಎತ್ತಿದ್ದಾನೆ.
- 1 Kings 9:7 1 ಅರಸುಗಳು 9:7ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.
- 2 Chronicles 7:20 2 ಪೂರ್ವಕಾಲವೃತ್ತಾಂತ 7:20ನಾನು ಅವರಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ನಿರ್ಮೂಲ ಮಾಡುವೆನು. ಇದಲ್ಲದೆ ನನ್ನ ಹೆಸರಿಗೋಸ್ಕರ ನಾನು ಪರಿಶುದ್ಧ ಮಾಡಿದ ಈ ಆಲ ಯವನ್ನು ನನ್ನ ಸಮ್ಮುಖದಿಂದ ತಳ್ಳಿ ಅದನ್ನು ಸಮಸ್ತ ಜನಗಳಲ್ಲಿ ಗಾದೆಯಾಗಿಯೂ ಹಾಸ್ಯವಾಗಿಯೂ ಮಾಡುವೆನು.
- Psalm 22:7 ಕೀರ್ತನೆಗಳು 22:7ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--
- Isaiah 37:22 ಯೆಶಾಯ 37:22ಇಸ್ರಾಯೇಲ್ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ.
- Psalm 109:25 ಕೀರ್ತನೆಗಳು 109:25ನಾನು ಅವರಿಗೆ ನಿಂದೆಯಾಗಿದ್ದೇನೆ; ನನ್ನನ್ನು ನೋಡಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ.