Psalms · chapter 44 · verse 20
Psalm 44:20 in Kannada
ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದರೆ
Naavu namma devara hesarannu maretu anya devarige namma kaigalannu chaachidare
Psalm 44:20 in English
- King James Version (KJV)
- If we have forgotten the name of our God, or stretched out our hands to a strange god;
- World English Bible (WEB)
- If we have forgotten the name of our God, or spread out our hands to a strange god,
- American Standard Version (ASV)
- If we have forgotten the name of our God, Or spread forth our hands to a strange god;
- Bible in Basic English (BBE)
- If the name of our God has gone out of our minds, or if our hands have been stretched out to a strange god,
- Darby Translation (DBY)
- If we had forgotten the name of our God, and stretched out our hands to a strange god,
- Webster's Bible (WBS)
- If we have forgotten the name of our God, or stretched out our hands to a strange god;
- Young's Literal Translation (YLT)
- If we have forgotten the name of our God, And spread our hands to a strange God,
Read in context
- 18ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ಹಾದಿಯಿಂದ ತೊಲಗಲಿಲ್ಲ.
- 19ಆದಾ ಗ್ಯೂ ಮಹಾಘಟಸರ್ಪಗಳ ಸ್ಥಳದಲ್ಲಿ ನಮ್ಮನ್ನು ಜಜ್ಜಿ ಮರಣದ ನೆರಳಿನಿಂದ ನಮ್ಮನ್ನು ಮುಚ್ಚಿಬಿಟ್ಟಿದ್ದೀ.
- 20ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದರೆ
- 21ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.
- 22ಹೌದು, ನಿನ್ನ ನಿಮಿತ್ತ ದಿನ ವೆಲ್ಲಾ ಕೊಲ್ಲಲ್ಪಡುತ್ತೇವೆ; ಕೊಯ್ಗುರಿಗಳ ಹಾಗೆ ಎಣಿಸಲ್ಪಡುತ್ತೇವೆ.
Cross references
- Psalm 81:9 ಕೀರ್ತನೆಗಳು 81:9ನಿನ್ನಲ್ಲಿ ಅನ್ಯದೇವರು ಇರಬಾರದು; ಪರ ದೇವರಿಗೆ ಅಡ್ಡಬೀಳಬಾರದು.
- Job 11:13 ಯೋಬನು 11:13ನೀನು ನಿನ್ನ ಹೃದಯವನ್ನು ಸಿದ್ಧಮಾಡಿ ನಿನ್ನ ಕೈಗಳನ್ನು ಆತನ ಕಡೆಗೆ ಚಾಚಿದರೆ,
- Psalm 7:3–5 ಕೀರ್ತನೆಗಳು 7:3–5ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ, ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ, ವೈರಿಯು ನನ್ನ ಪ್ರಾಣ ವನ್ನು ಹಿಡಿದು ಹಿಂಸಿಸಿ ನನ್ನ ಜೀವವನ್ನು ಭೂಮಿಗೆ ತುಳಿದು ನನ್ನ ಗೌರವವನ್ನು ಧೂಳಿನೊಳಗೆ ಹಾಕಿ ಬಿಡಲಿ--ಸೆಲಾ.
- Psalm 68:31 ಕೀರ್ತನೆಗಳು 68:31ಐಗುಪ್ತದಿಂದ ಪ್ರಧಾನರು ಬರುವರು; ಕೂಷ್ ತನ್ನ ಕೈಗಳನ್ನು ದೇವರ ಕಡೆಗೆ ಬೇಗ ಚಾಚುವದು.
- Job 31:5–40 ಯೋಬನು 31:5–40ನಾನು ವ್ಯರ್ಥವಾಗಿ ನಡೆದುಕೊಂಡಿದ್ದರೆ ಮೋಸಕ್ಕೆ ನನ್ನ ಕಾಲು ತ್ವರೆಪಟ್ಟರೆ ಆತನು ನೀತಿಯ ತ್ರಾಸಿನಲ್ಲಿ ನನ್ನನ್ನು ತೂಗಲಿ; ದೇವರು ನನ್ನ ಸಂಪೂರ್ಣತೆಯನ್ನು ತಿಳಿದುಕೊಳ್ಳಲಿ. ನನ್ನ ಹೆಜ್ಜೆಯು ದಾರಿಯಿಂದ ತೊಲಗಿದ್ದರೆ, ನನ್ನ ಕಣ್ಣುಗಳ ಹಿಂದೆ ನನ್ನ ಹೃದಯವು ಹೋಗಿದ್ದರೆ, ನನ್ನ ಅಂಗೈಗಳಲ್ಲಿ ದೋಷ ಹತ್ತಿದ್ದರೆ, ನಾನು ಬಿತ್ತುವದನ್ನು ಬೇರೊಬ್ಬನು ತಿನ್ನಲಿ; ಹೌದು, ನನ್ನ ಸಂತತಿಯು ನಿರ್ಮೂಲವಾಗಲಿ. ನನ್ನ ಹೃದಯವು ಸ್ತ್ರೀಗೋಸ್ಕರ ಮರುಳು ಗೊಂಡಿದ್ದರೆ, ನನ್ನ ನೆರೆಯವನ ಬಾಗಲ ಹತ್ತಿರ ನಾನು ಹೊಂಚಿಕೊಂಡಿದ್ದರೆ, ನನ್ನ ಹೆಂಡತಿ ಮತ್ತೊಬ್ಬನಿ ಗೊಸ್ಕರ ಬೀಸಲಿ; ಮತ್ತೊಬ್ಬರು ಅವಳ ಮೇಲೆ ಒರಗಲಿ. ಯಾಕಂದರೆ ಅದು ಮಹಾ ಪಾಪವೂ ಹೌದು, ನ್ಯಾಯಾಧಿಪತಿಗಳಿಗೆ ಬರುವ ಅಕ್ರಮವೂ ಆಗಿರುವದು. ಅದು ನಾಶವಾಗುವ ವರೆಗೆ ದಹಿ ಸುವಂಥ, ಆದಾಯವನ್ನೆಲ್ಲಾ ನಿರ್ಮೂಲ ಮಾಡು ವಂಥ ಆಗ್ನಿಯಾಗಿರುವದು. ಅವರು ನನ್ನ ಸಂಗಡ ವಾದಿಸುವಾಗ ನಾನು ನನ್ನ ದಾಸನ, ದಾಸಿಯ ನ್ಯಾಯವನ್ನು ತಿರಸ್ಕರಿಸಿದ್ದರೆ, ದೇವರು ಏಳುವಾಗ ನಾನು ಏನು ಮಾಡುವೆನು? ಆತನು ವಿಚಾರಿಸುವಾಗ, ಆತನಿಗೆ ಏನು ಉತ್ತರ ಕೊಡುವೆನು? ಗರ್ಭದಲ್ಲಿ ನನ್ನನ್ನು ಉಂಟುಮಾಡಿ ದಾತನು ಅವನನ್ನೂ ಉಂಟು ಮಾಡಿದ್ದಾನಲ್ಲಾ? ನಮ್ಮನ್ನು ಗರ್ಭದಲ್ಲಿ ರೂಪಿಸಿದಾತನು ಒಬ್ಬನೇ ಅಲ್ಲವೋ? ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ, ದಿಕ್ಕಿಲ್ಲದ ವನು ಅದರಲ್ಲಿ ಉಣ್ಣದ ಹಾಗೆ ನಾನು ಮಾತ್ರ ನನ್ನ ತುತ್ತು ಉಂಡಿದ್ದರೆ, (ಯಾಕಂದರೆ ನನ್ನ ಯೌವನದಿಂದ ನನ್ನೊಂದಿಗೆ ನಾನು ಅವನನ್ನು ತಂದೆ ಯಂತೆ ಬೆಳೆಸಿದೆನಲ್ಲಾ. ನನ್ನ ತಾಯಿಯ ಗರ್ಭದಿಂದ ಅವಳನ್ನು ನಡಿಸಿದೆನಲ್ಲಾ). ಬಟ್ಟೆ ಇಲ್ಲದೆ ನಾಶ ವಾಗುವವನನ್ನೂ ದರಿದ್ರನಿಗೆ ಹೊದಿಕೆ ಇಲ್ಲದಿರುವ ದನ್ನೂ ನಾನು ನೋಡಿದ್ದರೆ ಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ ದ್ವಾರ ದಲ್ಲಿ ನನ್ನ ಸಹಾಯವನ್ನು ಕಂಡು ನಾನು ದಿಕ್ಕಿಲ್ಲದ ವನ ಮೇಲೆ ನನ್ನ ಕೈಚಾಚಿದ್ದರೆ, ನನ್ನ ಹೆಗಲು ಬೆನ್ನಿನ ಗುಬ್ಬೆಯಿಂದ ಬೀಳಲಿ. ನನ್ನ ತೋಳು ಎಲುಬಿ ನಿಂದ ಮುರಿದು ಹೋಗಲಿ. ದೇವರಿಂದ ಬರುವ ನಾಶವು ನನಗೆ ಹೆದರಿಕೆಯಾಗಿತ್ತು; ಆತನ ಉನ್ನತ ಕ್ಕೋಸ್ಕರ ನಾನು ತಾಳಲಾರದೆ ಇದ್ದೆನು. ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ, ನನ್ನ ಐಶ್ವರ್ಯವು ಬಹಳವಾಗಿದೆ ಎಂದು ನನ್ನ ಕೈ ಬಹಳವಾಗಿ ಸಂಪಾದಿಸಿ ಕೊಂಡಿತೆಂದು ನಾನು ಸಂತೋಷಿಸಿದ್ದರೆ, ಸೂರ್ಯನು ಹೊಳೆಯುವದನ್ನು ಚಂದ್ರನು ಪ್ರಭೆಯಲ್ಲಿ ನಡೆಯುವದನ್ನು ನಾನು ನೋಡಲಾಗಿ, ನನ್ನ ಹೃದಯವು ಅಂತರಂಗದಲ್ಲಿ ಮರುಳುಗೊಂಡು, ನನ್ನ ಬಾಯಿಂದ ನನ್ನ ಕೈಯನ್ನು ಮುದ್ದಿಟ್ಟಿದ್ದರೆ; ಇದು ಸಹ ನ್ಯಾಯಾಧಿಪತಿಯಿಂದ ಶಿಕ್ಷಿಸಲ್ಪಡುವ ಅಪರಾಧವಾಗಿದೆ; ಯಾಕಂದರೆ ಉನ್ನತ ದಲ್ಲಿರುವ ದೇವರನ್ನು ಬೊಂಕಿದವನಾಗಿರುವೆನು. ನನ್ನನ್ನು ಹಗೆಮಾಡುವವನ ನಾಶಕ್ಕೆ ನಾನು ಸಂತೋಷಪಟ್ಟು, ಅವನನ್ನು ಕೇಡು ಕಂಡು ಹಿಡಿಯಿ ತೆಂದು ಗರ್ವಪಟ್ಟರೆ, ಶಾಪದಿಂದ ಅವನ ಪ್ರಾಣ ವನ್ನು ಕೇಳುವುದರಿಂದ ನನ್ನ ಬಾಯಿಯು ಪಾಪ ಮಾಡಗೊಡಿಸಲಿಲ್ಲ. ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ? ಪರದೇಶಸ್ಥನು ಬೀದಿ ಯಲ್ಲಿ ಇಳುಕೊಳ್ಳಲಿಲ್ಲ; ಆದರೆ ನನ್ನ ಬಾಗಲನ್ನು ಮಾರ್ಗಸ್ಥರಿಗೆ ತೆರೆಯುತ್ತಾ ಇದ್ದೆನು. ನಾನು ಎದೆ ಯಲ್ಲಿ ನನ್ನ ಅನ್ಯಾಯವನ್ನು ಅಡಗಿಸಿ, ಆದಾಮನ ಪ್ರಕಾರ ನನ್ನ ದ್ರೋಹವನ್ನು ಮುಚ್ಚಿಕೊಳ್ಳಲಿಲ್ಲ. ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಉದಾಸೀನದಿಂದ ಕಳವಳಗೊಂಡೆನೋ? ಹೊರಗೆ ಬಾರದೆ ಮೌನವಾಗಿದ್ದೆನೋ? ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ. ನನ್ನ ಹೆಗಲಲ್ಲಿ ಅದನ್ನು ನಿಶ್ಚಯವಾಗಿ ಹೊರುವೆನು; ಅದನ್ನು ಕಿರೀಟವಾಗಿ ಕಟ್ಟಿಕೊಳ್ಳುವೆನು. ನನ್ನ ಹೆಜ್ಜೆ ಗಳ ಎಣಿಕೆಯನ್ನು ಆತನಿಗೆ ತೋರಿಸುವೆನು; ಅಧಿಪತಿ ಯಾಗಿ ಆತನ ಸವಿಾಪಕ್ಕೆ ಬರುವೆನು. ನನ್ನ ಭೂಮಿಯು ನನಗೆ ವಿರೋಧವಾಗಿ ಕೂಗಿದರೆ, ಅದರ ಸಾಲುಗಳು ಕೂಡ ದೂರಿದರೆ, ಅದರ ಫಲವನ್ನು ನಾನು ಹಣಕೊಡದೆ ತಿಂದಿದ್ದರೆ, ಅದರ ಯಾಜಮಾನರ ಪ್ರಾಣವನ್ನು ತೆಗೆದುಬಿಟ್ಟಿದ್ದರೆ,ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು. ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.
- Deuteronomy 6:14 ಧರ್ಮೋಪದೇಶಕಾಂಡ 6:14ನಿಮ್ಮ ಸುತ್ತಲಿರುವ ಜನಗಳ ದೇವರುಗಳಾದ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ.
- 1 Kings 8:22 1 ಅರಸುಗಳು 8:22ಆಗ ಸೊಲೊಮೋನನು ಇಸ್ರಾಯೇಲಿನ ಸಭೆ ಯವರ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ನಿಂತು ಆಕಾಶದ ಕಡೆಗೆ ತನ್ನ ಕೈಗಳನ್ನು ಎತ್ತಿ ಹೇಳಿದ್ದೇ ನಂದರೆ--
- Psalm 44:17 ಕೀರ್ತನೆಗಳು 44:17ಇದೆಲ್ಲಾ ನಮ್ಮ ಮೇಲೆ ಬಂತು; ಆದರೆ ನಿನ್ನನ್ನು ಮರೆತುಬಿಡಲಿಲ್ಲ; ನಿನ್ನ ಒಡಂಬಡಿಕೆಯಲ್ಲಿ ಸುಳ್ಳಾ ಡಲಿಲ್ಲ.
- Exodus 9:29 ವಿಮೋಚನಕಾಂಡ 9:29ಆಗ ಮೋಶೆಯು ಅವನಿಗೆ--ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೆ ಕರ್ತನ ಕಡೆಗೆ ನನ್ನ ಕೈಗಳನ್ನು ಚಾಚುವೆನು; ಭೂಮಿಯು ಕರ್ತನದೇ ಎಂದು ನೀನು ತಿಳುಕೊಳ್ಳು ವಂತೆ ಗುಡುಗುಗಳು ನಿಂತುಹೋಗುವವು. ಆನೆಕಲ್ಲಿನ ಮಳೆಯು ಇನ್ನು ಬಾರದು.
- Psalm 78:11 ಕೀರ್ತನೆಗಳು 78:11ಆತನು ಅವರಿಗೆ ತೋರಿ ಸಿದ ಆತನ ಕೃತ್ಯಗಳನ್ನೂ ಆದ್ಭುತಗಳನ್ನೂ ಮರೆತು ಬಿಟ್ಟರು.