Psalms · chapter 44 · verse 9
Psalm 44:9 in Kannada
ಆದರೆ ನೀನು ನಮ್ಮನ್ನು ತಳ್ಳಿಬಿಟ್ಟು ನಮ್ಮನ್ನು ಅವಮಾನಪಡಿಸುತ್ತೀ; ನಮ್ಮ ಸೈನ್ಯಗಳ ಸಂಗಡ ನೀನು ಹೊರಟುಹೋಗುವದಿಲ್ಲ.
Aadare neenu nammannu tallibittu nammannu avamaanapadisuttee; namma sainyagala sangada neenu horatuhoguvadilla.
Psalm 44:9 in English
- King James Version (KJV)
- But thou hast cast off, and put us to shame; and goest not forth with our armies.
- World English Bible (WEB)
- But now you rejected us, and brought us to dishonor, and don’t go out with our armies.
- American Standard Version (ASV)
- But now thou hast cast [us] off, and brought us to dishonor, And goest not forth with our hosts.
- Bible in Basic English (BBE)
- But now you have sent us away from you, and put us to shame; you do not go out with our armies.
- Darby Translation (DBY)
- But thou hast cast off, and put us to confusion, and dost not go forth with our armies;
- Webster's Bible (WBS)
- But thou hast cast off, and put us to shame; and goest not forth with our armies.
- Young's Literal Translation (YLT)
- In anger Thou hast cast off and causest us to blush, And goest not forth with our hosts.
Read in context
- 7ನೀನು ನಮ್ಮ ವೈರಿಗಳಿಂದ ನಮ್ಮನ್ನು ರಕ್ಷಿಸಿದಿ; ನಮ್ಮನ್ನು ಹಗೆಮಾಡಿದವರನ್ನು ನಾಚಿಕೆ ಪಡಿಸಿದಿ.
- 8ನಾವು ದಿನವೆಲ್ಲಾ ದೇವರಲ್ಲಿ ಹೆಚ್ಚಳ ಪಡುವೆವು; ನಿನ್ನ ಹೆಸರನ್ನು ಯುಗಯುಗಕ್ಕೂ ಕೊಂಡಾ ಡುವೆವು. ಸೆಲಾ.
- 9ಆದರೆ ನೀನು ನಮ್ಮನ್ನು ತಳ್ಳಿಬಿಟ್ಟು ನಮ್ಮನ್ನು ಅವಮಾನಪಡಿಸುತ್ತೀ; ನಮ್ಮ ಸೈನ್ಯಗಳ ಸಂಗಡ ನೀನು ಹೊರಟುಹೋಗುವದಿಲ್ಲ.
- 10ವೈರಿಯ ಮುಂದೆ ನಾವು ಹಿಂದಿರುಗ ಮಾಡುತ್ತೀ; ನಮ್ಮ ಹಗೆಯವರು ತಮಗೋಸ್ಕರ ಕೊಳ್ಳೆ ಇಡುತ್ತಾರೆ.
- 11ತಿನ್ನತಕ್ಕ ಕುರಿಗಳ ಹಾಗೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀ; ಅನ್ಯಜನಾಂಗ ಗಳಲ್ಲಿ ನಮ್ಮನ್ನು ಚದರಿಸಿದ್ದೀ.
Cross references
- Psalm 60:10 ಕೀರ್ತನೆಗಳು 60:10ಓ ದೇವರೇ, ನಮ್ಮನ್ನು ತಳ್ಳಿಬಿಟ್ಟು ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನ ಲ್ಲವೋ?
- Psalm 74:1 ಕೀರ್ತನೆಗಳು 74:1ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
- Psalm 108:11 ಕೀರ್ತನೆಗಳು 108:11ದೇವರೇ, ನಮ್ಮನ್ನು ತೊರೆದು ಬಿಟ್ಟವನು ನೀನೇ ಅಲ್ಲವೋ? ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನಲ್ಲವೋ?
- Psalm 60:1 ಕೀರ್ತನೆಗಳು 60:1ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.
- Psalm 43:2 ಕೀರ್ತನೆಗಳು 43:2ನೀನು ನನ್ನ ಬಲವಾದ ದೇವರಾಗಿದ್ದೀ; ಯಾಕೆ ನನ್ನನ್ನು ತಳ್ಳಿ ಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದುಕೊಳ್ಳಬೇಕು?
- Psalm 89:38–45 ಕೀರ್ತನೆಗಳು 89:38–45ಆದರೆ ನೀನು ಅಸಹ್ಯಿಸಿಬಿಟ್ಟು ತಿರಸ್ಕರಿಸಿ ನಿನ್ನ ಅಭಿಷಕ್ತನ ಮೇಲೆ ಉಗ್ರನಾದಿ; ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ. ಅವನ ಬೇಲಿಗಳ ನ್ನೆಲ್ಲಾ ಮುರಿದು ಅವನ ಕೋಟೆಗಳನ್ನು ಹಾಳು ಮಾಡಿದ್ದೀ. ಮಾರ್ಗಸ್ಥರೆಲ್ಲರು ಅವನನ್ನು ಕೊಳ್ಳೇ ಹೊಡೆಯುತ್ತಾರೆ; ತನ್ನ ನೆರೆಯವರಿಗೆ ಅವನು ನಿಂದೆ ಯಾಗಿದ್ದಾನೆ. ಅವನ ವೈರಿಗಳ ಬಲಗೈಯನ್ನು ಉನ್ನತ ಮಾಡಿದ್ದೀ; ಶತ್ರುಗಳೆಲ್ಲರನ್ನು ಸಂತೋಷಪಡಿಸಿದ್ದೀ. ಅವನ ಕತ್ತಿಯ ಬಾಯನ್ನು ಹಿಂದಿರುಗಿಸಿ, ಯುದ್ಧ ದಲ್ಲಿ ಅವನನ್ನು ನಿಲ್ಲುವಂತೆ ಮಾಡಲಿಲ್ಲ. ಅವನ ಪ್ರಭೆಯನ್ನು ತಡೆದಿ; ಅವನ ಸಿಂಹಾಸನವನ್ನು ನೆಲಕ್ಕೆ ಹಾಕಿದ್ದೀ. ಅವನ ಯೌವನದ ದಿವಸಗಳನ್ನು ಕಡಿಮೆಮಾಡಿ, ನಾಚಿಕೆಯಿಂದ ಅವನನ್ನು ಮುಚ್ಚಿದ್ದೀ ಸೆಲಾ.
- Lamentations 3:31–32 ಪ್ರಲಾಪಗಳು 3:31–32ಕರ್ತನು ಎಂದೆಂದಿಗೂ ತಳ್ಳಿಬಿಡುವದಿಲ್ಲ; ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು.
- Jeremiah 33:24–26 ಯೆರೆಮೀಯ 33:24–26ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ. ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು. ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
- Romans 11:1–6 ರೋಮಾಪುರದವರಿಗೆ 11:1–6ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ. ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ-- ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಕೊಂದು ನಿನ್ನ ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ; ಆದರೆ ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಿದ್ದಾರೆ ಎಂದು ಬರಹವು ಹೇಳಿದ್ದು ನಿಮಗೆ ಗೊತ್ತಿಲ್ಲವೋ? ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು. ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ. ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
- Psalm 88:14 ಕೀರ್ತನೆಗಳು 88:14ಕರ್ತನೇ,ಯಾಕೆ ನನ್ನ ಪ್ರಾಣವನ್ನು ತೊರೆದು ಬಿಡುತ್ತೀ?ಯಾಕೆ ನಿನ್ನ ಮುಖವನ್ನು ನನಗೆ ಮರೆಮಾಡುತ್ತೀ?
- Psalm 80:12–13 ಕೀರ್ತನೆಗಳು 80:12–13ಮಾರ್ಗ ದಲ್ಲಿ ಹಾದು ಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಯಾಕೆ ಅದರ ಬೇಲಿಗಳನ್ನು ನೀನು ಮುರಿದು ಬಿಟ್ಟಿದ್ದೀ? ಅಡವಿಯಿಂದ ಬಂದ ಹಂದಿಯು ಅದನ್ನು ಹಾಳುಮಾಡುತ್ತದೆ ಕಾಡಿನ ಮೃಗವು ಅದನ್ನು ಮೇಯ್ದು ಬಿಡುತ್ತದೆ.