Psalms · chapter 45 · verse 12
Psalm 45:12 in Kannada
ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.
Toorina magalu kaanikeyondige alli iruvalu; andare praje galalli sthitivantaru ninna dayeyannu koruvaru.
Psalm 45:12 in English
- King James Version (KJV)
- And the daughter of Tyre [shall be there] with a gift; [even] the rich among the people shall intreat thy favour.
- World English Bible (WEB)
- The daughter of Tyre comes with a gift. The rich among the people entreat your favor.
- American Standard Version (ASV)
- And the daughter of Tyre [shall be there] with a gift; The rich among the people shall entreat thy favor.
- Bible in Basic English (BBE)
- And the daughters of Tyre will be there with an offering; those who have wealth among the people will be looking for your approval.
- Darby Translation (DBY)
- And the daughter of Tyre with a gift, the rich ones among the people, shall court thy favour.
- Webster's Bible (WBS)
- And the daughter of Tyre [shall be there] with a gift; [even] the rich among the people shall entreat thy favor.
- Young's Literal Translation (YLT)
- And the daughter of Tyre with a present, The rich of the people do appease thy face.
Read in context
- 10ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು.
- 11ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು.
- 12ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.
- 13ಅರಸನ ಮಗಳು ತನ್ನಲ್ಲಿ ಪೂರ್ಣ ಘನವುಳ್ಳವ ಳಾಗಿದ್ದಾಳೆ; ಅವಳ ವಸ್ತ್ರವು ಚಿನ್ನದಿಂದ ನೆಯಿದದೆ.
- 14ಇವಳು ಕಸೂತಿ ವಸ್ತ್ರಗಳನ್ನುಟ್ಟು ಅರಸನ ಬಳಿಗೆ ತರಲ್ಪಡುತ್ತಾಳೆ; ಅವಳ ಹಿಂದೆ ಇರುವ ಕನ್ಯೆಯರಾದ ಅವಳ ಸಂಗಡಿಗರು ನಿನ್ನ ಬಳಿಗೆ ತರಲ್ಪಡುತ್ತಾರೆ.
Cross references
- Psalm 22:29 ಕೀರ್ತನೆಗಳು 22:29ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು.
- Isaiah 60:3 ಯೆಶಾಯ 60:3ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
- Matthew 2:11 ಮತ್ತಾಯನು 2:11ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.
- Isaiah 49:23 ಯೆಶಾಯ 49:23ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
- Psalm 72:10 ಕೀರ್ತನೆಗಳು 72:10ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
- Isaiah 23:17–18 ಯೆಶಾಯ 23:17–18ಎಪ್ಪತ್ತು ವರುಷ ಗಳಾದ ಮೇಲೆ ಆಗುವದೇನಂದರೆ -- ಕರ್ತನು ತೂರನ್ನು ಪರಾಮರಿಸುವನು (ಹಿತ ತರುವನು). ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕ ದಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ಸೂಳೆತನ ಮಾಡುವದು.(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು. (ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
- Psalm 68:29 ಕೀರ್ತನೆಗಳು 68:29ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು.
- Isaiah 60:10–11 ಯೆಶಾಯ 60:10–11ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು. ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ.
- Isaiah 60:6–7 ಯೆಶಾಯ 60:6–7ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು. ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು.
- Acts 21:3–6 ಅಪೊಸ್ತಲರ ಕೃತ್ಯಗಳು 21:3–6ನಾವು ಕುಪ್ರವನ್ನು ಕಂಡು ಅದನ್ನು ಎಡಗಡೆಗೆ ಬಿಟ್ಟು ಸಿರಿಯದ ಕಡೆಗೆ ಸಾಗಿ ತೂರ್ಗೆ ಬಂದು ಇಳಿದೆವು. ಹಡಗು ಅಲ್ಲಿ ಸರಕನ್ನು ಇಳಿಸ ಬೇಕಾಗಿತ್ತು. ಅಲ್ಲಿ ನಾವು ಶಿಷ್ಯರನ್ನು ಕಂಡು ಏಳು ದಿವಸ ಇದ್ದೆವು; ಪೌಲನು ಯೆರೂಸ ಲೇಮಿಗೆ ಹೋಗಬಾರದೆಂದು ಅವರು ಆತ್ಮನ ಮುಖಾಂತರ ಅವನಿಗೆ ಹೇಳಿದರು. ಆ ದಿವಸಗಳು ಕಳೆದ ಮೇಲೆ ನಾವು ಹೊರಟು ಹೋಗುತ್ತಿರುವಾಗ ಅವರು ತಮ್ಮ ಹೆಂಡತಿಯರು ಮಕ್ಕಳ ಸಹಿತವಾಗಿ ನಮ್ಮನ್ನು ಪಟ್ಟಣದ ಹೊರಗೆ ಸಾಗಕಳುಹಿಸಿದರು; ನಾವು ಸಮುದ್ರದ ತೀರದಲ್ಲಿ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು. ಆಗ ನಾವು ಒಬ್ಬರನ್ನೊಬ್ಬರು ಬಿಟ್ಟು ಹಡಗನ್ನು ಹತ್ತಿದಾಗ ಅವರು ತಮ್ಮ ಮನೆಗೆ ಹಿಂತಿರುಗಿದರು.