Psalms · chapter 45 · verse 14
Psalm 45:14 in Kannada
ಇವಳು ಕಸೂತಿ ವಸ್ತ್ರಗಳನ್ನುಟ್ಟು ಅರಸನ ಬಳಿಗೆ ತರಲ್ಪಡುತ್ತಾಳೆ; ಅವಳ ಹಿಂದೆ ಇರುವ ಕನ್ಯೆಯರಾದ ಅವಳ ಸಂಗಡಿಗರು ನಿನ್ನ ಬಳಿಗೆ ತರಲ್ಪಡುತ್ತಾರೆ.
Ivalu kasooti vastragalannuttu arasana balige taralpaduttaale; avala hinde iruva kanyeyaraada avala sangadigaru ninna balige taralpaduttaare.
Psalm 45:14 in English
- King James Version (KJV)
- She shall be brought unto the king in raiment of needlework: the virgins her companions that follow her shall be brought unto thee.
- World English Bible (WEB)
- She shall be led to the king in embroidered work. The virgins, her companions who follow her, shall be brought to you.
- American Standard Version (ASV)
- She shall be led unto the king in broidered work: The virgins her companions that follow her Shall be brought unto thee.
- Bible in Basic English (BBE)
- She will come before the king in robes of needlework; the virgins in her train will come before you.
- Darby Translation (DBY)
- She shall be brought unto the king in raiment of embroidery; the virgins behind her, her companions, shall be brought in unto thee:
- Webster's Bible (WBS)
- She shall be brought to the king in raiment of needlework: the virgins her companions that follow her shall be brought to thee.
- Young's Literal Translation (YLT)
- In divers colours she is brought to the king, Virgins — after her — her companions, Are brought to thee.
Read in context
- 12ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.
- 13ಅರಸನ ಮಗಳು ತನ್ನಲ್ಲಿ ಪೂರ್ಣ ಘನವುಳ್ಳವ ಳಾಗಿದ್ದಾಳೆ; ಅವಳ ವಸ್ತ್ರವು ಚಿನ್ನದಿಂದ ನೆಯಿದದೆ.
- 14ಇವಳು ಕಸೂತಿ ವಸ್ತ್ರಗಳನ್ನುಟ್ಟು ಅರಸನ ಬಳಿಗೆ ತರಲ್ಪಡುತ್ತಾಳೆ; ಅವಳ ಹಿಂದೆ ಇರುವ ಕನ್ಯೆಯರಾದ ಅವಳ ಸಂಗಡಿಗರು ನಿನ್ನ ಬಳಿಗೆ ತರಲ್ಪಡುತ್ತಾರೆ.
- 15ಸಂತೋಷದಿಂದಲೂ ಉಲ್ಲಾಸದಿಂದಲೂ ಅವರು ತರಲ್ಪಡುತ್ತಾರೆ; ಅವರು ಅರಸನ ಅರಮನೆಯೊಳಗೆ ಪ್ರವೇಶಿಸುವರು.
- 16ನಿನ್ನ ತಂದೆಗಳಿಗೆ ಬದಲಾಗಿ ನಿನ್ನ ಮಕ್ಕಳು ಇರುವರು; ಅವರನ್ನು ಭೂಮಿಯ ಮೇಲೆಲ್ಲಾ ಪ್ರಧಾನರನ್ನಾಗಿ ಮಾಡುವಿ.ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.
Cross references
- 2 Corinthians 11:2 2 ಕೊರಿಂಥದವರಿಗೆ 11:2ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ.
- Song of Solomon 8:13 ಪರಮಗೀತೆ 8:13ತೋಟಗಳಲ್ಲಿ ವಾಸವಾಗಿರುವವನೇ, ಜತೆ ಗಾರರು ನಿನ್ನ ಶಬ್ದವನ್ನು ಆಲೈಸುತ್ತಾರೆ. ನಾನು ಕೇಳುವಂತೆ ಮಾಡು.ನನ್ನ ಪ್ರಿಯನೇ, ತ್ವರೆಮಾಡು, ಜಿಂಕೆಯ ಹಾಗೆ ಇಲ್ಲವೆ ಸುಗಂಧವುಳ್ಳ ಪರ್ವತಗಳ ಮೇಲಿರುವ ದುಪ್ಪಿ ಮರಿಯ ಹಾಗೆಯೆ ಇರು.
- Song of Solomon 2:7 ಪರಮಗೀತೆ 2:7ಓ ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸಬೇಡಿರಿ, ಇಲ್ಲವೆ ನನ್ನ ಪ್ರಿಯನನ್ನು ಎಚ್ಚರಿಸಬೇಡಿರಿ ಎಂದು ದುಪ್ಪಿಗಳಿಂದಲೂ ಅಡವಿಯ ಜಿಂಕೆಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.
- Song of Solomon 1:3–5 ಪರಮಗೀತೆ 1:3–5ನಿನ್ನ ಒಳ್ಳೇ ತೈಲಗಳ ಪರಿಮಳದಂತೆ ನಿನ್ನ ಹೆಸರು ಹೊಯ್ಯಲ್ಪಟ್ಟ ತೈಲವಾಗಿದೆ; ಆದದರಿಂದ ಕನ್ನಿಕೆಯರು ನಿನ್ನನ್ನು ಪ್ರೀತಿಮಾಡುತ್ತಾರೆ. ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ. ನಾನು ಕಪ್ಪಾದವಳು; ಆದರೂ ಓ ಯೆರೂಸ ಲೇಮಿನ ಕುಮಾರ್ತೆಯರೇ, ಕೆದಾರಿನ ಗುಡಾರಗಳ ಹಾಗೆಯೂ ಸೊಲೊಮೋನನ ತೆರೆಗಳ ಹಾಗೆಯೂ ಸುಂದರಿಯಾಗಿದ್ದೇನೆ.
- Song of Solomon 6:1 ಪರಮಗೀತೆ 6:1ನಿನ್ನ ಪ್ರಿಯನು ಎಲ್ಲಿಗೆ ಹೋದನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಾವು ಅವನನ್ನು ನಿನ್ನ ಸಂಗಡ ಹುಡುಕುವ ಹಾಗೆ ನಿನ್ನ ಪ್ರಿಯನು ಯಾವ ಕಡೆಗೆ ತಿರುಗಿದ್ದಾನೆ?
- Song of Solomon 6:8 ಪರಮಗೀತೆ 6:8ಅರು ವತ್ತು ಮಂದಿ ರಾಣಿಯರೂ ಎಂಭತ್ತು ಮಂದಿ ಉಪಪತ್ನಿಯರೂ ಲೆಕ್ಕವಿಲ್ಲದ ಕನ್ಯೆಯರೂ ಇದ್ದಾರೆ.
- Song of Solomon 6:13 ಪರಮಗೀತೆ 6:13ತಿರಿಗಿ ಬಾ, ತಿರಿಗಿ ಬಾ, ಓ ಶೂಲಮ್ನವಳೇ; ನಾವು ನಿನ್ನನ್ನು ದೃಷ್ಟಿಸುವ ಹಾಗೆ ತಿರಿಗಿ ಬಾ, ತಿರಿಗಿ ಬಾ. ಎರಡು ಸೈನ್ಯದ ಗುಂಪಿನವರ ಹಾಗೆಯೇಶೂಲಮ್ಯಳಲ್ಲಿ ನೀವು ದೃಷ್ಟಿಸಬೇಕಾದದ್ದೇನು?
- Exodus 28:39 ವಿಮೋಚನಕಾಂಡ 28:39ನಯವಾದ ನಾರಿನಿಂದ ಕಸೂತಿ ಮಾಡಿದ ಮೇಲಂಗಿಯನ್ನೂ ನಯವಾದ ನಾರಿನ ಮುಂಡಾಸ ವನ್ನೂ ಹೆಣಿಗೆಯ ಕೆಲಸದ ನಡುಕಟ್ಟನ್ನೂ ಮಾಡಿಸ ಬೇಕು.
- John 17:24 ಯೋಹಾನನು 17:24ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
- Revelation 14:1–4 ಪ್ರಕಟನೆ 14:1–4ಆಗ ಇಗೋ, ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು. ಇದಲ್ಲದೆ ಪರಲೋಕದ ಕಡೆಯಿಂದ ಬಹಳ ನೀರುಗಳಂತೆಯೂ ಮಹಾಗುಡುಗಿನಂತೆಯೂ ಇದ್ದ ಶಬ್ದವನ್ನು ನಾನು ಕೇಳಿದೆನು. ತಮ್ಮ ವೀಣೆಗಳನ್ನು ಬಾರಿಸುತ್ತಿದ್ದ ವೀಣೆಗಾರರ ಸ್ವರವನ್ನೂ ನಾನು ಕೇಳಿದೆನು. ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು. ಸ್ತ್ರೀಯ ರೊಂದಿಗೆ ಮಲಿನರಾಗದವರು ಇವರೇ. ಯಾಕಂದರೆ ಇವರು ಕನ್ನಿಕೆಯರು. ಕುರಿಮರಿಯಾದಾತನು ಎಲ್ಲಿಗೆ ಹೋದರೂ ಆತನ ಹಿಂದೆ ಹೋಗುವವರು ಇವರೇ. ದೇವರಿಗೂ ಕುರಿಮರಿಯಾದಾತನಿಗೂ ಪ್ರಥಮ ಫಲ ವಾಗಿರುವ ಇವರು ಮನುಷ್ಯರೊಳಗಿಂದ ವಿಮೋಚಿಸ ಲ್ಪಟ್ಟವರು.
- Song of Solomon 5:8–9 ಪರಮಗೀತೆ 5:8–9ನಿಮಗೆ ಆಣೆ ಇಡುತ್ತೇನೆ, ಓ ಯೆರೂಸಲೇಮಿನ ಕುಮಾರ್ತೆ ಯರೇ--ನೀವು ನನ್ನ ಪ್ರಿಯನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ. ಇತರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯ ವೇನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನೀನು ನಮಗೆ ಹೀಗೆ ಆಣೆ ಇಡುವದಕ್ಕೆ ಇತರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯವೇನು?
- Judges 5:30 ನ್ಯಾಯಸ್ಥಾಪಕರು 5:30ಅವರು ಓಡಲಿಲ್ಲವೋ? ಕೊಳ್ಳೆಹಂಚಿ ಕೊಳ್ಳಲಿಲ್ಲವೋ? ಒಬ್ಬೊಬ್ಬ ಮನುಷ್ಯನಿಗೆ ಒಂದೆರಡು ಹೆಣ್ಣು, ಸೀಸೆರನಿಗೆ ನಾನಾ ವರ್ಣವುಳ್ಳ ಕೊಳ್ಳೆ, ನಾನಾ ವರ್ಣವುಳ್ಳಂಥ ವಿಚಿತ್ರವಾಗಿ, ಹೊಲಿದಂಥ, ಎರಡು ಪಕ್ಕೆಗಳಲ್ಲಿ ವಿಚಿತ್ರವಾಗಿ ಹೊಲಿದಂಥ, ಕೊಳ್ಳೆ ಹಿಡಿ ಯುವರ ಕಂಠಗಳಿಗೆ ತಕ್ಕಂಥ ನಾನಾ ವರ್ಣವುಳ್ಳ ಕೊಳ್ಳೆ, ಸಿಕ್ಕಲಿಲ್ಲವೋ?ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.