Psalms · chapter 45 · verse 5
Psalm 45:5 in Kannada
ನಿನ್ನ ಹದವಾದ ಬಾಣಗಳು ಅರಸನ ಶತ್ರು ಗಳ ಹೃದಯದಲ್ಲಿ ನೆಟ್ಟಿವೆ; ಅವುಗಳಿಂದ ಜನರು ನಿನ್ನ ಕೆಳಗೆ ಬೀಳುತ್ತಾರೆ
Ninna hadavaada baanagalu arasana shatru gala hrudayadalli nettive; avugalinda janaru ninna kelage beeluttaare
Psalm 45:5 in English
- King James Version (KJV)
- Thine arrows [are] sharp in the heart of the king’s enemies; [whereby] the people fall under thee.
- World English Bible (WEB)
- Your arrows are sharp. The nations fall under you, with arrows in the heart of the king’s enemies.
- American Standard Version (ASV)
- Thine arrows are sharp; The peoples fall under thee; [They are] in the heart of the king’s enemies.
- Bible in Basic English (BBE)
- Your arrows are sharp in the heart of the king's haters; because of them the peoples are falling under you.
- Darby Translation (DBY)
- Thine arrows are sharp — peoples fall under thee — in the heart of the king's enemies.
- Webster's Bible (WBS)
- Thy arrows [are] sharp in the heart of the king's enemies; [by which] the people fall under thee.
- Young's Literal Translation (YLT)
- Thine arrows [are] sharp, — Peoples fall under Thee — In the heart of the enemies of the king.
Read in context
- 3ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ.
- 4ಸತ್ಯತೆ ಸಾತ್ವಿಕತೆ ನೀತಿಗೋಸ್ಕರವೂ ನಿನ್ನ ಘನತೆಯಿಂದ ಅಭಿವೃದ್ಧಿಹೊಂದಿ ಸವಾರಿಮಾಡು; ನಿನ್ನ ಬಲಗೈ ಭಯಂಕರವಾದವುಗಳನ್ನು ನಿನಗೆ ಕಲಿಸುವದು.
- 5ನಿನ್ನ ಹದವಾದ ಬಾಣಗಳು ಅರಸನ ಶತ್ರು ಗಳ ಹೃದಯದಲ್ಲಿ ನೆಟ್ಟಿವೆ; ಅವುಗಳಿಂದ ಜನರು ನಿನ್ನ ಕೆಳಗೆ ಬೀಳುತ್ತಾರೆ
- 6ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.
- 7ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
Cross references
- Psalm 21:12 ಕೀರ್ತನೆಗಳು 21:12ನೀನು ಅವರನ್ನು ಬೆನ್ನು ತಿರಿಗಿಸುವಂತೆ ಮಾಡುವಿ: ಅವರ ಮುಖಕ್ಕೆ ಎದುರಾಗಿ ನಿನ್ನ ಬಿಲ್ಲನೂ ಹಗ್ಗಗಳಲ್ಲಿ ಹೂಡುವಿ.ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
- Numbers 24:8 ಅರಣ್ಯಕಾಂಡ 24:8ದೇವರು ಅವನನ್ನು ಐಗುಪ್ತದಿಂದ ಹೊರಗೆ ತಂದನು. ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಅವನಿಗೆ ಉಂಟು. ಅವನು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು ಅವರ ಎಲುಬುಗಳನ್ನು ಚೂರು ಮಾಡಿ ತನ್ನ ಬಾಣ ಗಳಿಂದ ಗಾಯಮಾಡುವನು.
- Psalm 38:2 ಕೀರ್ತನೆಗಳು 38:2ನಿನ್ನ ಬಾಣಗಳು ನನ್ನಲ್ಲಿ ಬಲವಾಗಿ ನೆಟ್ಟಿವೆ; ನಿನ್ನ ಕೈ ನನ್ನ ಮೇಲೆ ಭಾರವಾಗಿದೆ.
- Zechariah 9:13–14 ಜೆಕರ್ಯ 9:13–14ಯೆಹೂದವನ್ನು ನನಗಾಗಿ ಬೊಗ್ಗಿಸಿದಾಗ ಎಫ್ರಾಯಾಮನ್ನು ಬಿಲ್ಲುಗಳಿಂದ ತುಂಬಿಸಿದ್ದೇನೆ; ಚೀಯೋನೇ, ನಿನ್ನ ಕುಮಾರರನ್ನು ಗ್ರೀಕ್ ಕುಮಾರರಿಗೆ ವಿರೋಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯಂತೆ ಮಾಡಿದ್ದೇನೆ. ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು.
- Psalm 22:27 ಕೀರ್ತನೆಗಳು 22:27ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
- Romans 15:18–19 ರೋಮಾಪುರದವರಿಗೆ 15:18–19ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ. ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
- Psalm 66:3–4 ಕೀರ್ತನೆಗಳು 66:3–4ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು; ಭೂನಿವಾಸಿಗಳೆಲ್ಲ ನಿನ್ನನ್ನು ಹಾಡಿ ಆರಾಧಿಸಿ ನಿನ್ನ ನಾಮವನ್ನು ಕೀರ್ತಿಸುವರು. ಸೆಲಾ.
- Luke 19:42–44 ಲೂಕನು 19:42–44ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ. ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು. ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
- Acts 4:4 ಅಪೊಸ್ತಲರ ಕೃತ್ಯಗಳು 4:4ಆದಾಗ್ಯೂ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರವಾಗಿತ್ತು.
- Psalm 2:1–9 ಕೀರ್ತನೆಗಳು 2:1–9ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ? ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ. ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ. ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು. ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು. ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ. ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ. ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು. ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
- Acts 6:7 ಅಪೊಸ್ತಲರ ಕೃತ್ಯಗಳು 6:7ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
- Acts 5:33 ಅಪೊಸ್ತಲರ ಕೃತ್ಯಗಳು 5:33ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.