Skip to content
ThuthiThuthiThuthi
Psalms · chapter 46 of 150 · 11 verses

Psalm 46 in Kannada

ಕೀರ್ತನೆಗಳು 46

  1. ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.

    To the chief Musician for the sons of Korah, A Song upon Alamoth. God [is] our refuge and strength, a very present help in trouble.

  2. ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ

    Therefore will not we fear, though the earth be removed, and though the mountains be carried into the midst of the sea;

  3. ಅದರ ನೀರುಗಳು ಘೋಷಿಸಿ ಕದಲಿದರೂ ಅದರ ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. ಸೆಲಾ.

    [Though] the waters thereof roar [and] be troubled, [though] the mountains shake with the swelling thereof. Selah.

  4. ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.

    [There is] a river, the streams whereof shall make glad the city of God, the holy [place] of the tabernacles of the most High.

  5. ದೇವರು ಅದರ ಮಧ್ಯದಲ್ಲಿ ಇದ್ದಾನೆ; ಅದು ಕದಲದು; ದೇವರು ಹೊತ್ತಾರೆಯಲ್ಲಿ ಅದಕ್ಕೆ ಸಹಾಯ ಮಾಡುವನು.

    God [is] in the midst of her; she shall not be moved: God shall help her, [and that] right early.

  6. ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.

    The heathen raged, the kingdoms were moved: he uttered his voice, the earth melted.

  7. ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.

    The LORD of hosts [is] with us; the God of Jacob [is] our refuge. Selah.

  8. ಬನ್ನಿರಿ, ಕರ್ತನ ಕಾರ್ಯಗಳನ್ನು ದೃಷ್ಟಿಸಿರಿ. ಆತನು ಭೂಮಿಯಲ್ಲಿ ಎಂಥಾ ನಾಶನಗಳನ್ನು ನಡಿಸಿದ್ದಾನೆ;

    Come, behold the works of the LORD, what desolations he hath made in the earth.

  9. ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.

    He maketh wars to cease unto the end of the earth; he breaketh the bow, and cutteth the spear in sunder; he burneth the chariot in the fire.

  10. ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.

    Be still, and know that I [am] God: I will be exalted among the heathen, I will be exalted in the earth.

  11. ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.

    The LORD of hosts [is] with us; the God of Jacob [is] our refuge. Selah.

All chapters of Psalms · Kannada Bible · Psalm 46 in Tamil

Kannada Bible: Kannada Old Version, public domain.

King James Version: public domain.