Psalms · chapter 46 · verse 4
Psalm 46:4 in Kannada
ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.
Ondu nadi ade; adara kaaluvegalu devara pattanavannoo mahonnatana gudaaragala parishuddha sthalavannoo santoshapadisuttave.
Psalm 46:4 in English
- King James Version (KJV)
- [There is] a river, the streams whereof shall make glad the city of God, the holy [place] of the tabernacles of the most High.
- World English Bible (WEB)
- There is a river, the streams of which make the city of God glad, the holy place of the tents of the Most High.
- American Standard Version (ASV)
- There is a river, the streams whereof make glad the city of God, The holy place of the tabernacles of the Most High.
- Bible in Basic English (BBE)
- There is a river whose streams make glad the resting-place of God, the holy place of the tents of the Most High.
- Darby Translation (DBY)
- There is a river the streams whereof make glad the city of God, the sanctuary of the habitations of the Most High.
- Webster's Bible (WBS)
- [There is] a river, the streams of which shall make glad the city of God, the holy [place] of the tabernacles of the Most High.
- Young's Literal Translation (YLT)
- A river — its rivulets rejoice the city of God, Thy holy place of the tabernacles of the Most High.
Read in context
- 2ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ
- 3ಅದರ ನೀರುಗಳು ಘೋಷಿಸಿ ಕದಲಿದರೂ ಅದರ ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. ಸೆಲಾ.
- 4ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.
- 5ದೇವರು ಅದರ ಮಧ್ಯದಲ್ಲಿ ಇದ್ದಾನೆ; ಅದು ಕದಲದು; ದೇವರು ಹೊತ್ತಾರೆಯಲ್ಲಿ ಅದಕ್ಕೆ ಸಹಾಯ ಮಾಡುವನು.
- 6ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.
Cross references
- Revelation 22:1–3 ಪ್ರಕಟನೆ 22:1–3ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು. ಅದರ ಬೀದಿಯ ಮಧ್ಯದಲ್ಲಿಯೂ ಆ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು. ಇನ್ನು ಮೇಲೆ ಶಾಪವೇನೂ ಇರುವದಿಲ್ಲ; ಅದರಲ್ಲಿ ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನವಿರುವದು. ಆತನ ಸೇವಕರು ಆತನನ್ನು ಸೇವಿಸುವರು.
- Ezekiel 47:1–12 ಯೆಹೆಜ್ಕೇಲನು 47:1–12ಆಮೇಲೆ ಅವನು ನನ್ನನ್ನು ಮತ್ತೆ ಆಲಯದ ಬಾಗಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿ ನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು; ಆಲಯದ ಮುಂಭಾಗದಲ್ಲಿ ನೀರು ಇತ್ತು; ಆ ನೀರು ಬಲಪಾರ್ಶ್ವದಿಂದ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯಿತು. ಆ ಮೇಲೆ ಅವನು ನನ್ನನ್ನು ಬಾಗಲಿನ ಮಾರ್ಗವಾಗಿ ಉತ್ತರ ಕಡೆಗೆ ಕರೆದುಕೊಂಡು ಹೋಗಿ ನನ್ನನ್ನು ಹೊರಗಿನ ಬಾಗಲಿನ ವರೆಗೂ ಹೊರಗಿನ ಮಾರ್ಗವಾದ ಪೂರ್ವಕ್ಕೆ ಅಭಿಮುಖವಾದ ಮಾರ್ಗವನ್ನು ಸುತ್ತುವಂತೆ ಮಾಡಿದನು. ಇಗೋ, ಅಲ್ಲಿಯೂ ಬಲಗಡೆಯಲ್ಲಿಯೂ ನೀರು ಹರಿಯುತ್ತಿತ್ತು. ಕೈಯಲ್ಲಿ ನೂಲು ಇದ್ದ ಆ ಮನುಷ್ಯನು ಪೂರ್ವದ ಕಡೆಗೆ ಹೊರಟು ಸಾವಿರ ಮೊಳ ಅಳೆದ ಮೇಲೆ, ನನ್ನನ್ನು ನೀರಿನಿಂದ ದಾಟಿಸಿದನು; ಅಲ್ಲಿ ನೀರು ಹೆಜ್ಜೆ ಮುಳುಗುವಷ್ಟಿತ್ತು. 4 ಅವನು ಸಾವಿರ ಮೊಳಗಳನ್ನು ಅಳೆದ ಮೇಲೆ ನನ್ನನ್ನು ನೀರಿನಿಂದ ದಾಟಿಸಲು, ಆಗ ನೀರು ಮೊಣಕಾಲುಗಳ ತನಕ ಇತ್ತು; ಇನ್ನೂ ಸಾವಿರ ಅಳೆದು ನನ್ನನ್ನು ದಾಟಿಸಲಾಗಿ ನೀರು ಸೊಂಟದವರೆಗೂ ಇತ್ತು. ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂತ ನದಿಯಾಗಿತ್ತು; ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು. ಅವನು ನನಗೆ ಹೇಳಿದ್ದೇನಂದರೆ, ಮನುಷ್ಯಪುತ್ರನೇ; ನೀನು ಇದನ್ನು ನೋಡಿದೆಯಾ ಎಂದು ನನ್ನನ್ನು ನಡೆಸಿಕೊಂಡು ಮತ್ತೆ ನದಿಯ ತೀರಕ್ಕೆ ಕರೆತಂದನು. ನಾನು ತಿರಿಗಿ ಬಂದಾಗ ಇಗೋ, ನದಿಯ ತೀರದಲ್ಲಿ ಆಕಡೆಯೂ ಈಕಡೆಯೂ ಅತಿ ಹೆಚ್ಚು ಮರಗಳಿದ್ದವು. ಆಗ ಅವನು ಹೇಳಿದ್ದೇನಂದರೆ, ಈ ನೀರು ಪೂರ್ವ ಸೀಮೆಗೆ ಹೋಗಿ ಒಣಭೂಮಿಗೆ ಇಳಿದು ಸಮುದ್ರ ಸೇರುವವು; ಸಮುದ್ರ ಸೇರಿದ ಮೇಲೆ ಆ ನೀರು ಸಿಹಿಯಾಗುವದು. ಇದಲ್ಲದೆ ಆಗುವದೇನಂದರೆ, ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂತ ಸಮಸ್ತ ಜೀವಿಗಳು ಬದುಕುವವು ಮತ್ತು ವಿಾನುಗಳು ಬಹು ದೊಡ್ಡ ಸಮೂಹವಾಗುವವು. ಈ ನೀರು ಅಲ್ಲಿಗೆ ಬರುವಾಗ ಅವು ಸ್ವಸ್ಥವಾಗುವವು; ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವವು. ಏನ್ಗೆದಿ ಮೊದಲುಗೊಂಡು ಏನ್ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು, ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಸ್ವಸ್ಥವಾಗುವದಿಲ್ಲ, ಅವು ಉಪ್ಪಿಗೆ ಒಪ್ಪಿಸಲ್ಪಡುವವು. ನದಿಯ ಬಳಿ ಅದರ ತೀರದಲ್ಲಿ ಆ ಕಡೆಯೂ ಈ ಕಡೆಯೂ ಆಹಾರಕ್ಕಾಗಿ ಎಲ್ಲಾ ಮರಗಳು ಬೆಳೆಯುವವು, ಅವುಗಳ ಎಲೆಗಳು ಬಾಡುವದಿಲ್ಲ ಹಣ್ಣು ಮುಗಿದು ಹೋಗುವದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸು ವವು; ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟು ಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಎಲೆಗಳು ಔಷಧಕ್ಕೂ ಆಗುವವು.
- Psalm 36:8–9 ಕೀರ್ತನೆಗಳು 36:8–9ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ. ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.
- Psalm 48:8 ಕೀರ್ತನೆಗಳು 48:8ನಾವು ಹೇಗೆ ಕೇಳಿದೆವೋ ಹಾಗೆಯೇ ಸೈನ್ಯಗಳ ಕರ್ತನ ಪಟ್ಟಣದಲ್ಲಿ, ಅಂದರೆ ನಮ್ಮ ದೇವರ ಪಟ್ಟಣದಲ್ಲಿಯೇ ನೋಡಿದೆವು; ದೇವರು ಅದನ್ನು ಎಂದೆಂದಿಗೂ ಸ್ಥಿರಪಡಿಸುವನು. ಸೆಲಾ.
- Psalm 87:3 ಕೀರ್ತನೆಗಳು 87:3ದೇವರ ಪಟ್ಟಣವೇ, ನಿನ್ನ ವಿಷಯವಾಗಿ ಘನವುಳ್ಳವುಗಳು ಹೇಳಲ್ಪಟ್ಟಿವೆ.
- 2 Chronicles 6:6 2 ಪೂರ್ವಕಾಲವೃತ್ತಾಂತ 6:6ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.
- Isaiah 60:14 ಯೆಶಾಯ 60:14ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
- Revelation 21:2–3 ಪ್ರಕಟನೆ 21:2–3ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು. ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ
- Psalm 23:2 ಕೀರ್ತನೆಗಳು 23:2ಆತನು ಹಸರುಗಾವಲುಗಳಲ್ಲಿ ನನ್ನನ್ನು ತಂಗುವಂತೆ ಮಾಡುತ್ತಾನೆ. ಶಾಂತವಾದ ನೀರುಗಳ ಪಕ್ಕದಲ್ಲಿ ನನ್ನನ್ನು ನಡಿಸುತ್ತಾನೆ.
- Psalm 65:9 ಕೀರ್ತನೆಗಳು 65:9ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ.
- Isaiah 48:18 ಯೆಶಾಯ 48:18ಓ, ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು;
- Isaiah 8:6–7 ಯೆಶಾಯ 8:6–7ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ ರೆಚೀನಿನಲ್ಲಿಯೂ ರೆಮಲ್ಯನ ಮಗನಲ್ಲಿಯೂ ಮೆರೆದಿದ್ದರಿಂದ ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ