Psalms · chapter 46 · verse 6
Psalm 46:6 in Kannada
ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.
Anya janaangavu ghoshisitu, raajyagalu kadalidavu; aatanu tanna dhvaniyannetti koogidaaga bhoomiyu karagitu.
Psalm 46:6 in English
- King James Version (KJV)
- The heathen raged, the kingdoms were moved: he uttered his voice, the earth melted.
- World English Bible (WEB)
- The nations raged. The kingdoms were moved. He lifted his voice and the earth melted.
- American Standard Version (ASV)
- The nations raged, the kingdoms were moved: He uttered his voice, the earth melted.
- Bible in Basic English (BBE)
- The nations were angry, the kingdoms were moved; at the sound of his voice the earth became like wax.
- Darby Translation (DBY)
- The nations raged, the kingdoms were moved; he uttered his voice, the earth melted.
- Webster's Bible (WBS)
- The heathen raged, the kingdoms were moved: he uttered his voice, the earth melted.
- Young's Literal Translation (YLT)
- Troubled have been nations, Moved have been kingdoms, He hath given forth with His voice, earth melteth.
Read in context
- 4ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.
- 5ದೇವರು ಅದರ ಮಧ್ಯದಲ್ಲಿ ಇದ್ದಾನೆ; ಅದು ಕದಲದು; ದೇವರು ಹೊತ್ತಾರೆಯಲ್ಲಿ ಅದಕ್ಕೆ ಸಹಾಯ ಮಾಡುವನು.
- 6ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.
- 7ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- 8ಬನ್ನಿರಿ, ಕರ್ತನ ಕಾರ್ಯಗಳನ್ನು ದೃಷ್ಟಿಸಿರಿ. ಆತನು ಭೂಮಿಯಲ್ಲಿ ಎಂಥಾ ನಾಶನಗಳನ್ನು ನಡಿಸಿದ್ದಾನೆ;
Cross references
- Amos 9:5 ಆಮೋಸ 9:5ಸೈನ್ಯಗಳ ದೇವರಾದ ಕರ್ತನೇ, ದೇಶವನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುವದು. ಅದರಲ್ಲಿ ವಾಸವಾಗಿರುವವರೆಲ್ಲರೂ ಗೋಳಾಡುವರು. ಅವೆಲ್ಲಾ ನದಿಯ ಹಾಗೆ ಪ್ರವಾಹದಂತೆ ಉಕ್ಕಿ, ಐಗುಪ್ತದ ಪ್ರವಾಹದಂತೆ ಉಕ್ಕಿ ಮುಳುಗಿ ಹೋಗುವದು.
- Psalm 18:13 ಕೀರ್ತನೆಗಳು 18:13ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು
- Nahum 1:5 ನಹೂಮ 1:5ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.
- Habakkuk 3:5–6 ಹಬಕ್ಕೂಕ 3:5–6ಆತನ ಮುಂದೆ ಜಾಡ್ಯವು ಹೋಯಿತು. ಆತನ ಕಾಲುಗಳಿಂದ ಉರಿ ಕೆಂಡಗಳು ಹೊರಟವು. ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ.
- Micah 1:4 ಮೀಕ 1:4ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ಸುರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವವು; ತಗ್ಗುಗಳು ಸೀಳುವವು.
- 2 Peter 3:10–12 2 ಪೇತ್ರನು 3:10–12ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು. ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?
- Joel 2:11 ಯೋವೇಲ 2:11ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು?
- Amos 9:13 ಆಮೋಸ 9:13ಕರ್ತನು ಹೇಳುವದೇನಂದರೆ--ಇಗೋ, ದಿನಗಳು ಬರುವವು, ಆಗ ಉಳುವವನು ಕೊಯ್ಯುವವನನ್ನೂ ದ್ರಾಕ್ಷೇ ಮಾರುವ ವನು ಬೀಜ ಬಿತ್ತುವವನನ್ನೂ ಹಿಂದಟ್ಟುವರು. ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವವು. ಗುಡ್ಡಗಳೆಲ್ಲಾ ಕರಗುವವು.
- Psalm 2:1–4 ಕೀರ್ತನೆಗಳು 2:1–4ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ? ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ. ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ. ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು.
- Isaiah 37:21–36 ಯೆಶಾಯ 37:21–36ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿ ಅವನನ್ನು ಕುರಿತು ಇಸ್ರಾಯೇಲ್ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ. ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ? ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ; ನಾನೇ ಅಗೆದು ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲಿನಿಂದ ಐಗು ಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಹೇಳಿದ್ದೀ. ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು; ಆದದರಿಂದ ಅವುಗಳ ನಿವಾಸಿ ಗಳು ಬಲವಿಲ್ಲದವರಾಗಿ ಆಶಾಭಂಗ ಪಟ್ಟು ಕಳವಳ ಗೊಂಡರು; ಅವರು ಹೊಲದ ಹುಲ್ಲಿನಂತೆಯೂ ಹಸಿರು ಎಲೆಯಂತೆಯೂ ಮಾಳಿಗೆಯ ಮೇಲಿನ ಹುಲ್ಲಿನಂತೆಯೂ ಹೊಡೆಯುವದಕ್ಕಿಂತ ಮೊದಲೇ ಬಾಡಿಹೋಗುವ ಪೈರಿನಂತೆಯೂ ಇದ್ದರು. ನೀನು ವಾಸಿಸುವದು ಹೊರಗೆ ಹೋಗುವದು, ಒಳಗೆ ಬರುವದು; ನೀನು ನನ್ನ ಮೇಲೆ ರೌದ್ರಾವೇಶನಾಗಿ ರುವದನ್ನೂ ನಾನು ಬಲ್ಲೆನು. ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ. ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು. ಯೆಹೂದನ ಮನೆತನದಿಂದ ತಪ್ಪಿಸಿ ಕೊಂಡು ಉಳಿದವರು ತಿರುಗಿ ಕೆಳಗೆ ಬೇರೂರಿ ಮೇಲಕ್ಕೆ ಫಲಫಲಿಸುವರು. ಯೆರೂಸಲೇಮಿನಿಂದ ಉಳಿದ ವರು ಮತ್ತು ಚೀಯೋನ್ ಪರ್ವತದಿಂದ ತಪ್ಪಿಸಿ ಕೊಂಡವರು; ಹೊರಡುವರು ಇದನ್ನು ಸೈನ್ಯಗಳ ಕರ್ತನ ಆಸಕ್ತಿಯು ಮಾಡುವದು. ಆದದರಿಂದ ಕರ್ತನು ಅಶ್ಶೂರದ ಅರಸನ ವಿಷಯವಾಗಿ ಹೇಳುವ ದೇನಂದರೆ ಅವನು ಈ ಪಟ್ಟಣಕ್ಕೆ ಬರಲಾರನು ಬಾಣವನ್ನು ಎಸೆಯನು, ಇಲ್ಲವೇ ಅದರ ಮುಂದೆ ಗುರಾಣಿಯೊಂದಿಗೆ ಬರಲಾರನು ಇಲ್ಲವೆ ಅದಕ್ಕೆ ವಿರೋಧವಾಗಿ ಮಣ್ಣಿನ ದಿಬ್ಬವನ್ನು ಹಾಕುವದಿಲ್ಲ. ಅವನು ಬಂದ ದಾರಿಯಿಂದಲೇ ಹಿಂತಿರುಗಿ ಹೋಗುವನು ಈ ಪಟ್ಟಣಕ್ಕೆ ಬರುವದೇ ಇಲ್ಲ. ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ. ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
- Joshua 2:24 ಯೆಹೋಶುವ 2:24ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.
- 2 Chronicles 20:20–24 2 ಪೂರ್ವಕಾಲವೃತ್ತಾಂತ 20:20–24ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು. ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು. ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯಾರ್ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು. ಅಮ್ಮೋನ್, ಮೋವಾಬ್ಯರ ಮಕ್ಕಳು ಸೇಯಾರ್ ಪರ್ವತದ ನಿವಾಸಿ ಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯಾರಿನ ನಿವಾಸಿಗಳನ್ನು ಮುಗಿಸಿಬಿಟ್ಟ ತರುವಾಯ ತಾವೇ ಒಬ್ಬರನ್ನೊಬ್ಬರು ನಾಶಮಾಡಲು ಸಹಾಯ ಕೊಟ್ಟರು. ಯೆಹೂದದವರು ಅರಣ್ಯದಲ್ಲಿ ರುವ ಬುರುಜಿನ ಸ್ಥಳಕ್ಕೆ ಬಂದಾಗ ಅವರು ಗುಂಪನ್ನು ದೃಷ್ಟಿಸಿದರು; ಇಗೋ, ಅವರಲ್ಲಿ ಒಬ್ಬನೂ ತಪ್ಪದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು.