Psalms · chapter 48 · verse 4
Psalm 48:4 in Kannada
ಇಗೋ, ಅರಸರುಗಳು ಕೂಡಿಕೊಂಡು ಒಟ್ಟಾಗಿ ಹಾದುಹೋದರು;
Igo, arasarugalu koodikondu ottaagi haaduhodaru;
Psalm 48:4 in English
- King James Version (KJV)
- For, lo, the kings were assembled, they passed by together.
- World English Bible (WEB)
- For, behold, the kings assembled themselves, they passed by together.
- American Standard Version (ASV)
- For, lo, the kings assembled themselves, They passed by together.
- Bible in Basic English (BBE)
- For see! the kings came together by agreement, they were joined together.
- Darby Translation (DBY)
- For behold, the kings assembled themselves, they passed by together;
- Webster's Bible (WBS)
- For lo, the kings were assembled, they passed by together.
- Young's Literal Translation (YLT)
- For, lo, the kings met, they passed by together,
Read in context
- 2ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
- 3ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ.
- 4ಇಗೋ, ಅರಸರುಗಳು ಕೂಡಿಕೊಂಡು ಒಟ್ಟಾಗಿ ಹಾದುಹೋದರು;
- 5ಅವರು ಅದನ್ನು ನೋಡಿ ಆಶ್ಚ ರ್ಯಪಟ್ಟರು; ಅವರು ಕಳವಳಪಟ್ಟು ಓಡಿ ಹೋದರು.
- 6ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು.
Cross references
- Revelation 17:12–14 ಪ್ರಕಟನೆ 17:12–14ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ. ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ. ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
- Revelation 20:8–9 ಪ್ರಕಟನೆ 20:8–9ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು. ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ದೇವರ ಬಳಿಯಿಂದ ಬೆಂಕಿಯು ಪರಲೋಕ ದೊಳಗಿಂದ ಇಳಿದು ಬಂದು ಅವರನ್ನು ನುಂಗಿಬಿಟ್ಟಿತು.
- 2 Samuel 10:6–19 2 ಸಮುವೇಲನು 10:6–19ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್ರೆಹೋಬ್ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು. ದಾವೀದನು ಅದನ್ನು ಕೇಳಿದಾಗ ಅವನು ಯೋವಾಬನನ್ನೂ ಪರಾ ಕ್ರಮಶಾಲಿಗಳಾದ ಸಕಲ ಶೂರಸೈನಿಕರನ್ನು ಕಳುಹಿ ಸಿದನು. ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್ನಿಂದಲೂ ಇಷ್ಟೋಬ್ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು. ಯೋವಾಬನು ಯುದ್ಧದ ಮುಖವು ಹಿಂದೆ ಮುಂದೆ ತನಗೆ ಎದುರಾ ಗಿರುವದನ್ನು ನೋಡಿದಾಗ ಅವನು ಇಸ್ರಾಯೇಲಿನ ಆಯಲ್ಪಟ್ಟ ಎಲ್ಲಾ ಜನರನ್ನು ಆದುಕೊಂಡು ಅರಾಮ್ಯ ರಿಗೆ ಎದುರಾಗಿ ವ್ಯೂಹಕಟ್ಟಿದನು. ಆದರೆ ಮಿಕ್ಕಾದ ವರು ಅಮ್ಮೋನನ ಮಕ್ಕಳಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬೀಷೈಯ ಕೈಯಲ್ಲಿ ಒಪ್ಪಿಸಿಕೊಟ್ಟು-- ಅರಾಮ್ಯರು ನನಗಿಂತ ಬಲವುಳ್ಳವರಾದರೆ ನೀನು ನನಗೆ ಸಹಾಯ ಕೊಡ ಬೇಕು; ಅಮ್ಮೋನನ ಮಕ್ಕಳು ನಿನಗಿಂತ ಬಲವುಳ್ಳವ ರಾದರೆ ನಾನು ಬಂದು ನಿನಗೆ ಸಹಾಯ ಮಾಡುವೆನು. ಬಲವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲಗೊ ಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು. ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡುವದಕ್ಕೆ ಸವಿಾಪಕ್ಕೆ ಬಂದರು. ಅವರು ಅವನ ಎದುರಿನಿಂದ ಓಡಿಹೋದರು. ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನನ ಮಕ್ಕಳು ನೋಡಿದಾಗ ಅವರು ಅಬೀಷೈಯ ಎದುರಿನಿಂದ ಓಡಿ ಪಟ್ಟಣ ದೊಳಗೆ ಹೊಕ್ಕರು. ಆಗ ಯೋವಾಬನು ಅಮ್ಮೊನನ ಮಕ್ಕಳನ್ನು ಬಿಟ್ಟು ತಿರುಗಿ ಯೆರೂಸಲೇಮಿಗೆ ಬಂದನು. ಅರಾಮ್ಯರು ತಾವು ಇಸ್ರಾಯೇಲ್ಯರ ಮುಂದೆ ಹೊಡೆಯಲ್ಪಟ್ಟದ್ದನ್ನು ಕಂಡಾಗ ಅವರು ಒಟ್ಟಾಗಿ ಕೂಡಿದರು. ಇದಲ್ಲದೆ ಹದದೆಜೆರನು ನದಿಗೆ ಆಚೆ ಇದ್ದ ಅರಾಮ್ಯರನ್ನು ಕರೇಕಳುಹಿಸಿದ್ದರಿಂದ ಅವರು ಹೇಲಾಮಿಗೆ ಬಂದರು; ಹದದೆಜೆರನ ಸೈನ್ಯಕ್ಕೆ ಅಧಿ ಪತಿಯಾದ ಶೋಬಕನು ಅವರ ಮುಂದೆ ನಡೆದನು. ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಇಸ್ರಾ ಯೇಲ್ಯರೆಲ್ಲರನ್ನು ಕೂಡಿಸಿಕೊಂಡು ಯೊರ್ದನನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ದಾವೀದ ನಿಗೆದುರಾಗಿ ವ್ಯೂಹಕಟ್ಟಿ ಯುದ್ಧಮಾಡಿದರು. ಆಗ ಅರಾಮ್ಯರು ಇಸ್ರಾಯೇಲ್ಯರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ಮಂದಿ ಸಾರಥಿಗಳನ್ನೂ ನಾಲ್ವತ್ತು ಸಾವಿರ ಕುದುರೆ ರಾಹುತ ರನ್ನೂ ಕೊಂದು ಅವರ ಸೈನ್ಯದ ಯಜಮಾನನಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಸತ್ತನು.ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು. ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.
- Isaiah 7:1 ಯೆಶಾಯ 7:1ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರ ಸನೂ ಆದ ಪೆಕಹ ಎಂಬವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ.
- Psalm 83:2–8 ಕೀರ್ತನೆಗಳು 83:2–8ಇಗೋ, ನಿನ್ನ ಶತ್ರುಗಳು ಗದ್ದಲ ಮಾಡು ತ್ತಾರೆ; ನಿನ್ನ ಹಗೆಯವರು ತಲೆ ಎತ್ತುತ್ತಾರೆ. ನಿನ್ನ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿಯನ್ನು ಕಲ್ಪಿಸುತ್ತಾರೆ. ನೀನು ಅಡಗಿಸಿಟ್ಟವರಿಗೆ ವಿರೋಧಿಗಳು ಆಲೋಚಿಸಿಕೊಳ್ಳುತ್ತಾರೆ. ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ. ಅವರು ಕೂಡ ಏಕಮನಸ್ಸಾಗಿ ಆಲೋಚನೆ ಮಾಡಿಕೊಂಡಿ ದ್ದಾರೆ; ನಿನಗೆ ವಿರೋಧವಾಗಿ ಒಡಂಬಟ್ಟಿದ್ದಾರೆ. ಎದೋಮ್ಯರ ಮತ್ತು ಇಷ್ಮಾಯೇಲ್ಯರ ಗುಡಾರಗಳೂ ಮೋವಾಬೂ ಹಗ್ರೀಯರೂ ಗೆಬಾಲ್ಯರೂ ಅಮ್ಮೋನಿ ಯರೂ ಮಾಲೇಕ್ಯರೂ ತೂರಿನ ನಿವಾಸಿಗಳು ಸಹಿತವಾಗಿ ಫಿಲಿಷ್ಟಿಯರದೇ; ಅಶ್ಶೂರ್ಯರೂ ಸಹ ಅವ ರಲ್ಲಿ ಕೂಡಿಕೊಂಡು; ಅವರು ಲೋಟನ ಮಕ್ಕಳಿಗೆ ಸಹಾಯ ಮಾಡಿದ್ದಾರೆ ಸೆಲಾ.
- Isaiah 29:5–8 ಯೆಶಾಯ 29:5–8ಅದೂ ಅಲ್ಲದೆ ನಿನ್ನ ಅನ್ಯರ ಗುಂಪು ಸೂಕ್ಷ್ಮ ವಾದ ದೂಳಿನಂತಾಗುವದು, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರು ವದು; ಹೌದು, ಅದು ಕ್ಷಣ ಮಾತ್ರದಲ್ಲಿ ಫಕ್ಕನೆ ಆಗುವದು. ಸೈನ್ಯಗಳ ಕರ್ತನ ಕಡೆಯಿಂದಲೇ ನೀನು ಗುಡುಗಿನಿಂದಲೂ ಮಹಾಶಬ್ದದಿಂದಲೂ ಬಿರುಗಾಳಿ, ಸುಳಿಗಾಳಿಯಿಂದಲೂ ದಹಿಸುವ ಅಗ್ನಿಜ್ವಾಲೆಯಿಂದ ಲೂ ವಿಚಾರಿಸಲ್ಪಡುವಿ. ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧ ವಾಗಿ ಯುದ್ಧ ಮಾಡಿ ಬಾಧಿಸುವ ಸಕಲ ಜನಾಂಗಗಳ ಗುಂಪು ರಾತ್ರಿಯ ದರ್ಶನದ ಕನಸಿನಂತೆ ಮಾಯ ವಾಗುವದು. ಹಸಿದ ಮನುಷ್ಯನು ಕನಸುಕಂಡು ಇಗೋ, ಉಣ್ಣುತ್ತಾನೆ ಆದರೆ ಅವನು ಎಚ್ಚತ್ತಾಗ ಪ್ರಾಣ ತುಂಬದ ಹಾಗೆಯೂ ಇಲ್ಲವೆ ಬಾಯಾರಿದ ವನು ಸ್ವಪ್ನದಲ್ಲಿ ಇಗೋ, ಕುಡಿಯುತ್ತಾನೆ ಆದರೆ ಅವನು ಎಚ್ಚರವಾದಾಗ ಇಗೋ, ಬಲಹೀನನಾಗಿದ್ದು ಪ್ರಾಣ ಆಶಿಸುವ ಹಾಗೆಯೂ ಚೀಯೋನ್ ಪರ್ವ ತಕ್ಕೆ ವಿರೋಧವಾಗಿ ಯುದ್ಧಮಾಡುವ ಹಾಗೆಯೇ ಎಲ್ಲಾ ಜನಾಂಗಗಳ ಸಮೂಹವಿರುವದು.
- Revelation 19:20 ಪ್ರಕಟನೆ 19:20ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Isaiah 10:8 ಯೆಶಾಯ 10:8ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?
- Isaiah 8:8–10 ಯೆಶಾಯ 8:8–10ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು. ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ. ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.