Psalms · chapter 49 · verse 10
Psalm 49:10 in Kannada
ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ.
Jnyaanigalu saayuvaru; huchchanu pashupraayanu kooda naashavaagi bereyavarige tamma aastiyannu biduvadannu avanu noduttaane.
Psalm 49:10 in English
- King James Version (KJV)
- For he seeth [that] wise men die, likewise the fool and the brutish person perish, and leave their wealth to others.
- World English Bible (WEB)
- For he sees that wise men die; likewise the fool and the senseless perish, and leave their wealth to others.
- American Standard Version (ASV)
- For he shall see it. Wise men die; The fool and the brutish alike perish, And leave their wealth to others.
- Bible in Basic English (BBE)
- For he sees that wise men come to their end, and foolish persons of low behaviour come to destruction together, letting their wealth go to others.
- Darby Translation (DBY)
- For he seeth that wise men die; all alike, the fool and the brutish perish, and they leave their wealth to others.
- Webster's Bible (WBS)
- For he seeth [that] wise men die, likewise the fool and the brutish person perish, and leave their wealth to others.
- Young's Literal Translation (YLT)
- For he seeth wise men die, Together the foolish and brutish perish, And have left to others their wealth.
Read in context
- 8ಅವನು ದೇವರಿಗೆ ಹಣವನ್ನು (ಈಡು) ಕೊಟ್ಟು ಅದರಿಂದ ವಿಮೋಚಿಸಲಾರನು.
- 9ಅವರ ಪ್ರಾಣದ ವಿಮೋಚನೆಯು ಅಮೂಲ್ಯ ವಾಗಿದೆ; ಅದು ಯುಗಯುಗಕ್ಕೂ ನಿಲ್ಲುವದು.
- 10ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ.
- 11ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ.
- 12ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ.
Cross references
- Luke 12:20 ಲೂಕನು 12:20ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- Psalm 39:6 ಕೀರ್ತನೆಗಳು 39:6ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
- Ecclesiastes 5:13–16 ಪ್ರಸಂಗಿ 5:13–16ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ; ಅದು ಯಾವ ದಂದರೆ, ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ. ಆದರೆ ಕೆಟ್ಟ ಪ್ರಯಾ ಸದಿಂದ ಆ ಆಸ್ತಿಯು ನಾಶವಾಗುತ್ತದೆ; ಅವನು ಒಬ್ಬ ಮಗನನ್ನು ಪಡೆದಿದ್ದರೆ ಅವನ ಕೈಯಲ್ಲಿ ಏನೂ ಇರದು. ತನ್ನ ತಾಯಿಯ ಗರ್ಭದಿಂದ ಅವನು ಹೇಗೆ ಬಂದನೋ ಅವನು ಬಂದ ಹಾಗೆ ಬೆತ್ತಲೆಯಾಗಿ ತಿರುಗಿ ಹೋಗುವನು; ತನ್ನ ಕೈಯಲ್ಲಿ ತಕ್ಕೊಂಡು ಹೋಗುವದಕ್ಕೆ ತನ್ನ ಪ್ರಯಾಸದಲ್ಲಿ ಯಾವದನ್ನು ತೆಗೆದುಕೊಂಡು ಹೋಗುವದಿಲ್ಲ. ಇದೂ ಕೂಡ ವ್ಯಥೆಯಿಂದ ಕೂಡಿದ ಕೆಟ್ಟತನವೇ. ಅದು ಯಾವ ದಂದರೆ ಎಲ್ಲಾ ವಿಷಯಗಳಲ್ಲಿ ತಾನು ಹೇಗೆ ಬಂದನೋ ಹಾಗೆಯೇ ಹೋಗುವನು; ಗಾಳಿಗಾಗಿ ಪ್ರಯಾಸಪಟ್ಟ ವನಿಗೆ ಲಾಭವೇನಿದೆ?
- Hebrews 9:27 ಇಬ್ರಿಯರಿಗೆ 9:27ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
- 1 Timothy 6:6–10 1 ತಿಮೊಥೆಯನಿಗೆ 6:6–10ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ. ನಾವು ಲೋಕದೊಳಗೆ ಏನೂ ತಕ್ಕೊಂಡು ಬರಲಿಲ್ಲವಷ್ಟೆ; ನಿಶ್ಚಯವಾಗಿ ಅದರೊಳಗಿಂದ ಏನೂ ತಕ್ಕೊಂಡು ಹೋಗಲಾರೆವು. ಆದದರಿಂದ ಅನ್ನವಸ್ತ್ರಗಳುಳ್ಳವರಾಗಿ ಅವುಗಳಿಂದ ತೃಪ್ತರಾಗಿರೋಣ. ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ. ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- Proverbs 30:2 ಜ್ಞಾನೋಕ್ತಿಗಳು 30:2ಖಂಡಿತವಾಗಿಯೂ ಪ್ರತಿಯೊಬ್ಬ ಮನುಷ್ಯನಿಗಿಂತ ನಾನು ಪಶುಪ್ರಾಯನು; ಮನುಷ್ಯನ ವಿವೇಕವು ನನಗೆ ಇಲ್ಲ.
- Jeremiah 10:8 ಯೆರೆಮೀಯ 10:8ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.
- Psalm 94:8 ಕೀರ್ತನೆಗಳು 94:8ಜನರಲ್ಲಿ ಪಶುಪ್ರಾಯದವರೇ, ನೀವು ಗ್ರಹಿಸಿರಿ; ಹುಚ್ಚರೇ, ಯಾವಾಗ ಬುದ್ಧಿವಂತರಾಗುವಿರಿ?
- Psalm 49:17 ಕೀರ್ತನೆಗಳು 49:17ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗನು; ಅವನ ಘನವು ಅವನ ಹಿಂದೆ ಇಳಿದು ಹೋಗದು.
- Proverbs 11:4 ಜ್ಞಾನೋಕ್ತಿಗಳು 11:4ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.
- Psalm 73:22 ಕೀರ್ತನೆಗಳು 73:22ಆಗ ನಾನು ಮೂರ್ಖನಾಗಿ ಏನೂ ತಿಳಿಯದೆ ನಿನ್ನ ಮುಂದೆ ಪಶು ವಿನಂತೆ ಇದ್ದೆನು.
- Ecclesiastes 2:26 ಪ್ರಸಂಗಿ 2:26ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.