Psalms · chapter 5 · verse 10
Psalm 5:10 in Kannada
ಓ ದೇವರೇ, ಅವರನ್ನು ನಾಶಮಾಡು; ಅವರು ತಮ್ಮ ಸ್ವಂತ ಆಲೋಚನೆಗಳಿಂದ ಬಿದ್ದು ಹೋಗಲಿ; ಅವರ ಅಪಾರವಾದ ದ್ರೋಹಗಳ ನಿಮಿತ್ತ ಅವರನ್ನು ಹೊರಗೆ ಹಾಕು; ಯಾಕಂದರೆ ಅವರು ನಿನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾರೆ.
O devare, avarannu naashamaadu; avaru tamma svanta aalochanegalinda biddu hogali; avara apaaravaada drohagala nimitta avarannu horage haaku; yaakandare avaru ninage virodhavaagi tirugi biddiddaare.
Psalm 5:10 in English
- King James Version (KJV)
- Destroy thou them, O God; let them fall by their own counsels; cast them out in the multitude of their transgressions; for they have rebelled against thee.
- World English Bible (WEB)
- Hold them guilty, God. Let them fall by their own counsels. Thrust them out in the multitude of their transgressions, for they have rebelled against you.
- American Standard Version (ASV)
- Hold them guilty, O God; Let them fall by their own counsels; Thrust them out in the multitude of their transgressions; For they have rebelled against thee.
- Bible in Basic English (BBE)
- Send them to destruction, O Lord; let their evil designs be the cause of their fall; let them be forced out by all their sins; because they have gone against your authority.
- Darby Translation (DBY)
- Bring guilt upon them, O God; let them fall by their own counsels: drive them out in the multitude of their transgressions, for they have rebelled against thee.
- Webster's Bible (WBS)
- Destroy thou them, O God; let them fall by their own counsels; cast them out in the multitude of their transgressions; for they have rebelled against thee.
- Young's Literal Translation (YLT)
- Declare them guilty, O God, Let them fall from their own counsels, In the abundance of their transgressions Drive them away, Because they have rebelled against Thee.
Read in context
- 8ಓ ಕರ್ತನೇ, ನನ್ನ ವಿರೋಧಿಗಳ ನಿಮಿತ್ತ ನಿನ್ನ ನೀತಿಯಲ್ಲಿ ನನ್ನನ್ನು ನಡಿಸು; ನಿನ್ನ ಮಾರ್ಗವನ್ನು ನನ್ನ ಮುಂದೆ ಸರಾಗಮಾಡು.
- 9ಅವರ ಬಾಯಲ್ಲಿ ನಂಬಿಗಸ್ತಿಕೆಯು ಇಲ್ಲವೇ ಇಲ್ಲ. ಅವರ ಒಳಭಾಗವು ಅತಿ ದುಷ್ಟತ್ವವೇ. ಅವರ ಗಂಟಲು ತೆರೆದ ಸಮಾ ಧಿಯೇ; ತಮ್ಮ ನಾಲಿಗೆಯಿಂದ ಹೆಮ್ಮೆ ಕೊಚ್ಚಿ ಕೊಳ್ಳುತ್ತಾರೆ.
- 10ಓ ದೇವರೇ, ಅವರನ್ನು ನಾಶಮಾಡು; ಅವರು ತಮ್ಮ ಸ್ವಂತ ಆಲೋಚನೆಗಳಿಂದ ಬಿದ್ದು ಹೋಗಲಿ; ಅವರ ಅಪಾರವಾದ ದ್ರೋಹಗಳ ನಿಮಿತ್ತ ಅವರನ್ನು ಹೊರಗೆ ಹಾಕು; ಯಾಕಂದರೆ ಅವರು ನಿನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾರೆ.
- 11ಆದರೆ ನಿನ್ನಲ್ಲಿ ಭರವಸವಿಟ್ಟವರೆಲ್ಲರು ಸಂತೋಷಿ ಸಲಿ, ನೀನು ಅವರನ್ನು ಕಾಯುವದರಿಂದ ಯುಗ ಯುಗಕ್ಕೂ ಹರ್ಷಿಸಲಿ; ನಿನ್ನ ನಾಮವನ್ನು ಪ್ರೀತಿ ಮಾಡುವವರು ನಿನ್ನಲ್ಲಿ ಉತ್ಸಾಹಪಡಲಿ.ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳುತ್ತೀ.
- 12ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳುತ್ತೀ.
Cross references
- Isaiah 63:10 ಯೆಶಾಯ 63:10ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
- 2 Samuel 17:14 2 ಸಮುವೇಲನು 17:14ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.
- Psalm 140:9–10 ಕೀರ್ತನೆಗಳು 140:9–10ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ. ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ ಕುಣಿಯಲ್ಲಿಯೂ ಆತನು ಅವರನ್ನು ಕೆಡವಲಿ.
- 1 Corinthians 3:19 1 ಕೊರಿಂಥದವರಿಗೆ 3:19ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
- 2 Samuel 15:31 2 ಸಮುವೇಲನು 15:31ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.
- Psalm 71:13 ಕೀರ್ತನೆಗಳು 71:13ನನ್ನ ಪ್ರಾಣವನ್ನು ಎದುರಿಸುವವರು ನಾಚಿಕೆಪಟ್ಟು ನಾಶವಾಗಲಿ; ನಿಂದೆಯೂ ಅವಮಾನವೂ ನನ್ನ ಕೇಡಿಗಾಗಿ ಹುಡುಕು ವವರನ್ನು ಸುತ್ತಿಕೊಳ್ಳಲಿ.
- Psalm 31:18 ಕೀರ್ತನೆಗಳು 31:18ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ ಕಠಿಣ ವಾಗಿ ಮಾತನಾಡುವ ಸುಳ್ಳಿನ ತುಟಿಗಳು ಮೌನ ವಾಗಲಿ.
- 2 Samuel 17:23 2 ಸಮುವೇಲನು 17:23ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
- Psalm 35:1–8 ಕೀರ್ತನೆಗಳು 35:1–8ಓ ಕರ್ತನೇ, ನನ್ನ ಸಂಗಡ ವ್ಯಾಜ್ಯವಾಡುವವರೊಡನೆ ಸಂಗಡ ವ್ಯಾಜ್ಯವಾಡು; ನನಗೆ ವಿರೋಧವಾಗಿ ಯುದ್ಧಮಾಡುವವರ ಸಂಗಡ ಯುದ್ಧ ಮಾಡು. ಗುರಾಣಿಯನ್ನೂ ಖೇಡ್ಯವನ್ನೂ ಹಿಡು ಕೊಂಡು ನನ್ನ ಸಹಾಯಕ್ಕೆ ನಿಂತುಕೋ. ಭಲ್ಲೆ ಯನ್ನು ಹಿಡಿದು ನನ್ನನ್ನು ಹಿಂಸಿಸುವವರಿಗೆ ಎದುರಾಗಿ ಅಡ್ಡಗಟ್ಟಿ--ನಾನೇ ನಿನ್ನ ರಕ್ಷಣೆ ಎಂದು ನನ್ನ ಪ್ರಾಣಕ್ಕೆ ಹೇಳು. ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ. ಅವರು ಗಾಳಿಯ ಮುಂದಿನ ಹೊಟ್ಟಿನ ಹಾಗೆ ಆಗಲಿ; ಕರ್ತನ ದೂತನು ಅವರನ್ನು ಹಿಂದಟ್ಟಲಿ, ಸೆಲಾ. ಅವರ ಮಾರ್ಗವು ಕತ್ತಲೆಯೂ ಜಾರಿಕೆಯೂ ಆಗಲಿ; ಕರ್ತನ ದೂತನು ಅವರನ್ನು ಹಿಂಸಿಸಲಿ. ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ. ನಾಶನವು ಅವನಿಗೆ ತಿಳಿಯದೆ ಬರಲಿ; ಅವನು ಅಡಗಿಸಿಟ್ಟ ಬಲೆಯು ಅವನನ್ನೇ ಹಿಡಿಯಲಿ; ಅಂಥಾ ನಾಶನಕ್ಕಾಗಿ ಅವನು ಅದರಲ್ಲಿಯೇ ಬೀಳಲಿ,
- Psalm 59:12–13 ಕೀರ್ತನೆಗಳು 59:12–13ಅವರ ಬಾಯಿಂದ ಬರುವ ಪಾಪಕ್ಕೂ ಅವರ ತುಟಿಗಳ ಮಾತಿಗೂ ಅವರು ನುಡಿಯುವ ಶಾಪಕ್ಕೋಸ್ಕರವೂ ಸುಳ್ಳುಗಳಿಗೋಸ್ಕರವೂ ಅವರ ಅಹಂಕಾರದಲ್ಲಿ ಸಿಕ್ಕಿಬೀಳಲಿ. ಕೋಪದಿಂದ ಅವ ರನ್ನು ದಹಿಸಿಬಿಡು, ಅವರು ಇಲ್ಲದಂತೆ ಸಂಹರಿಸು; ಆಗ ದೇವರು ಯಾಕೋಬನಲ್ಲಿ ಭೂಮಿಯ ಕೊನೆ ಗಳವರೆಗೆ ಆಳುವಾತನಾಗಿದ್ದಾನೆಂದು ತಿಳುಕೊಳ್ಳು ವರು. ಸೆಲಾ.
- Romans 3:19–20 ರೋಮಾಪುರದವರಿಗೆ 3:19–20ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು. ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
- Psalm 109:6–20 ಕೀರ್ತನೆಗಳು 109:6–20ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ. ಅವನು ನ್ಯಾಯ ತೀರಿಸಲ್ಪಡುವಾಗ ದುಷ್ಟನೆಂದು ತೀರ್ಪು ಹೊಂದಲಿ. ಅವನ ಪ್ರಾರ್ಥನೆಯು ಪಾಪವಾಗಲಿ. ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ. ಅವನ ಮಕ್ಕಳು ದಿಕ್ಕಿಲ್ಲದವರೂ ಹೆಂಡತಿ ವಿಧವೆಯೂ ಆಗಲಿ. ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ. ಸಾಲಗಾರನು ಅವನಿಗೆ ಇರುವದನ್ನೆಲ್ಲಾ ದೋಚಿ ಕೊಳ್ಳಲಿ; ಅನ್ಯರು ಅವನ ಕಷ್ಟಾರ್ಜಿತವನ್ನು ಸುಲು ಕೊಳ್ಳಲಿ. ಅವನಿಗೆ ಕರುಣೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ಇಲ್ಲವೆ ದಿಕ್ಕಿಲ್ಲದ ಅವನ ಮಕ್ಕಳನ್ನು ಕರುಣಿಸುವವನು ಯಾವನೂ ಇಲ್ಲದೆ ಇರಲಿ. ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ. ಅವನ ತಂದೆಗಳ ಅಕ್ರಮವು ಕರ್ತನ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ. ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ. ಅವನು ಕರುಣೆ ತೋರಿಸುವದನ್ನು ಮರೆತು ಹೃದಯದಲ್ಲಿ ನೊಂದವ ರನ್ನು ಕೊಲ್ಲುವದಕ್ಕೂ ಬಡವನನ್ನೂ ಕೊರತೆಯುಳ್ಳ ವವನ್ನೂ ಹಿಂಸಿಸಿದನು. ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ. ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ. ಅದು ಅವ ನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ ಯಾವಾ ಗಲೂ ನಡುವಿಗೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ. ಇದು ನನ್ನ ಪ್ರಾಣಕ್ಕೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಕರ್ತನಿಂದ ಪ್ರತಿಫಲವಾಗಿರಲಿ.