Psalms · chapter 50 · verse 16
Psalm 50:16 in Kannada
ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ?
Aadare dushtanige devaru heluvadenandare --nanna niyamagalannu prakatisuvadu ninagenu? Illave nanna odambadikeyannu ninna baayalli uchcharisuvadeke?
Psalm 50:16 in English
- King James Version (KJV)
- But unto the wicked God saith, What hast thou to do to declare my statutes, or [that] thou shouldest take my covenant in thy mouth?
- World English Bible (WEB)
- But to the wicked God says, “What right do you have to declare my statutes, that you have taken my covenant on your lips,
- American Standard Version (ASV)
- But unto the wicked God saith, What hast thou to do to declare my statutes, And that thou hast taken my covenant in thy mouth,
- Bible in Basic English (BBE)
- But to the sinner, God says, What are you doing, talking of my laws, or taking the words of my agreement in your mouth?
- Darby Translation (DBY)
- But unto the wicked God saith, What hast thou to do to declare my statutes, or that thou shouldest take my covenant into thy mouth,
- Webster's Bible (WBS)
- But to the wicked God saith, What hast thou to do to declare my statutes, or [that] thou shouldest take my covenant in thy mouth?
- Young's Literal Translation (YLT)
- And to the wicked hath God said: What to thee — to recount My statutes? That thou liftest up My covenant on thy mouth?
Read in context
- 14ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.
- 15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- 16ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ?
- 17ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ.
- 18ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.
Cross references
- Isaiah 29:13 ಯೆಶಾಯ 29:13ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
- Psalm 78:36–38 ಕೀರ್ತನೆಗಳು 78:36–38ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು. ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.
- Psalm 25:14 ಕೀರ್ತನೆಗಳು 25:14ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
- Isaiah 55:6–7 ಯೆಶಾಯ 55:6–7ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ. ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Romans 2:17–24 ರೋಮಾಪುರದವರಿಗೆ 2:17–24ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು ಆತನ ಚಿತ್ತವನ್ನು ತಿಳಿದವನಾಗಿ ನ್ಯಾಯಪ್ರಮಾಣದಿಂದ ಶಿಕ್ಷಿತ ನಾಗಿದ್ದು ಅತ್ಯುತ್ತಮವಾದವುಗಳನ್ನು ಮೆಚ್ಚುವವನಾ ಗಿದ್ದೀ; ಇದಲ್ಲದೆ ನೀನೇ ಕುರುಡರ ಮಾರ್ಗದರ್ಶ ಕನೂ ಕತ್ತಲೆಯಲ್ಲಿರುವವರಿಗೆ ಬೆಳಕೂ ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ. ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ? ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ? ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ? ಬರೆಯಲ್ಪಟ್ಟ ಪ್ರಕಾರ--ನಿಮ್ಮ ಮೂಲಕ ದೇವರ ಹೆಸರು ಅನ್ಯ ಜನಾಂಗಗಳಲ್ಲಿ ದೂಷಿಸಲ್ಪಡುತ್ತದೆ.
- Hebrews 8:9 ಇಬ್ರಿಯರಿಗೆ 8:9ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ.
- Isaiah 48:1–2 ಯೆಶಾಯ 48:1–2ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ. ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
- 2 Peter 2:15 2 ಪೇತ್ರನು 2:15ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
- John 4:24 ಯೋಹಾನನು 4:24ದೇವರು ಆತ್ಮನಾಗಿದ್ದಾನೆ; ಆತನನ್ನು ಆರಾಧಿಸುವ ವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು ಅಂದನು.
- Proverbs 26:7 ಜ್ಞಾನೋಕ್ತಿಗಳು 26:7ಕುಂಟನ ಕಾಲು ಗಳು ಸಮವಲ್ಲ; ಹಾಗೆಯೇ ಬುದ್ಧಿಹೀನರ ಬಾಯಲ್ಲಿ ಸಾಮ್ಯವು ಇರುತ್ತದೆ.
- Isaiah 1:11–15 ಯೆಶಾಯ 1:11–15ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ. ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು? ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು. ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ. ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
- Acts 19:13–16 ಅಪೊಸ್ತಲರ ಕೃತ್ಯಗಳು 19:13–16ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು. ಯಾಜಕರಲ್ಲಿ ಮುಖ್ಯನಾದ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಕುಮಾರರು ಹಾಗೆ ಮಾಡಿದರು. ಆದರೆ ದುರಾತ್ಮವು ಪ್ರತ್ಯುತ್ತರವಾಗಿ--ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು. ದುರಾತ್ಮಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿಬಿದ್ದು ಅವರನ್ನು ಸೋಲಿಸಿ ಬಲಾತ್ಕರಿ ಸಿದ್ದರಿಂದ ಅವರು ಬೆತ್ತಲೆಯಾಗಿ ಗಾಯಗೊಂಡು ಆ ಮನೆಯೊಳಗಿಂದ ಓಡಿ ಹೋದರು.