Psalms · chapter 50 · verse 18
Psalm 50:18 in Kannada
ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.
Kallanannu nodidare avanondige opputtee; jaarara sangada ninna paalu ide.
Psalm 50:18 in English
- King James Version (KJV)
- When thou sawest a thief, then thou consentedst with him, and hast been partaker with adulterers.
- World English Bible (WEB)
- When you saw a thief, you consented with him, and have participated with adulterers.
- American Standard Version (ASV)
- When thou sawest a thief, thou consentedst with him, And hast been partaker with adulterers.
- Bible in Basic English (BBE)
- When you saw a thief, you were in agreement with him, and you were joined with those who took other men's wives.
- Darby Translation (DBY)
- When thou sawest a thief, thou didst take pleasure in him, and thy portion was with adulterers;
- Webster's Bible (WBS)
- When thou sawest a thief, then thou consentedst with him, and hast been partaker with adulterers.
- Young's Literal Translation (YLT)
- If thou hast seen a thief, Then thou art pleased with him, And with adulterers [is] thy portion.
Read in context
- 16ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ?
- 17ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ.
- 18ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.
- 19ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ.
- 20ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ.
Cross references
- Romans 1:32 ರೋಮಾಪುರದವರಿಗೆ 1:32ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- 1 Timothy 5:22 1 ತಿಮೊಥೆಯನಿಗೆ 5:22ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ
- Hebrews 13:4 ಇಬ್ರಿಯರಿಗೆ 13:4ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
- Jeremiah 5:8–9 ಯೆರೆಮೀಯ 5:8–9ಬೆಳಗಿ ನಲ್ಲಿ ಕೊಬ್ಬಿದ ಕುದುರೆಗಳ ಹಾಗಿದ್ದಾರೆ; ತಮ್ಮ ತಮ್ಮ ನೆರೆಯವರ ಹೆಂಡತಿಯರಿಗೋಸ್ಕರ ಹೂಂಕರಿ ಸುತ್ತಾರೆ. ಇವುಗಳ ನಿಮಿತ್ತ ನಾನು ವಿಚಾರಿಸುವ ದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- Proverbs 2:16–19 ಜ್ಞಾನೋಕ್ತಿಗಳು 2:16–19ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು ತನ್ನ ಯೌವನ ಕಾಲದ ಸಂಗಾತಿ ಯನ್ನು ತ್ಯಜಿಸುವವಳಿಂದ ಅದು ನಿನ್ನನ್ನು ತಪ್ಪಿಸುವದು. ಅವಳ ಮನೆಯು ಮರಣದ ಕಡೆಗೆ, ಅವಳ ದಾರಿ ಗಳು ಮೃತರ ಕಡೆಗೆ ಇಳಿಸುತ್ತವೆ. ಅವಳ ಬಳಿಗೆ ಹೋಗುವ ಯಾವನೂ ಹಿಂತಿರುಗುವದಿಲ್ಲ, ಇಲ್ಲವೆ ಜೀವದ ಮಾರ್ಗಗಳನ್ನು ಅವನು ಹಿಡಿಯುವದೇ ಇಲ್ಲ.
- Leviticus 20:10 ಯಾಜಕಕಾಂಡ 20:10ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.
- Proverbs 7:19–23 ಜ್ಞಾನೋಕ್ತಿಗಳು 7:19–23ಯಜಮಾ ನನು ಮನೆಯಲ್ಲಿ ಇಲ್ಲ; ಅವನು ದೀರ್ಘದ ಪ್ರಯಾಣ ಕೈಕೊಂಡಿದ್ದಾನೆ. ಅವನು ತನ್ನೊಂದಿಗೆ ಹಣದ ಚೀಲವನ್ನು ತೆಗೆದುಕೊಂಡು ಹೋಗಿದ್ದಾನೆ; ನೇಮಕ ವಾದ ದಿನದಲ್ಲಿಯೇ ಅವನು ಈ ಮನೆಗೆ ಬರುವವನಾ ಗಿದ್ದಾನೆ ಎಂದು ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು. ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
- Isaiah 5:23 ಯೆಶಾಯ 5:23ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ ಮತ್ತು ನೀತಿಯನ್ನು ನೀತಿವಂತನಿಂದ ತೆಗೆದುಹಾಕುವವರಿಗೂ ಅಯ್ಯೋ!
- Ephesians 5:11–13 ಎಫೆಸದವರಿಗೆ 5:11–13ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ. ಅವರು ರಹಸ್ಯವಾಗಿ ನಡಿಸುವ ಕೆಲಸ ಗಳನ್ನು ಕುರಿತು ಮಾತನಾಡುವದಾದರೂ ನಾಚಿಕೆಗೆ ಕಾರಣವಾಗಿದೆ. ಆದರೆ ಖಂಡನೆಯಾಗುವವು ಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ; ಯಾಕಂದರೆ ಪ್ರಕಟಪಡಿಸುವಂಥದ್ದು ಬೆಳಕೇ.
- Proverbs 1:10–19 ಜ್ಞಾನೋಕ್ತಿಗಳು 1:10–19ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ. ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ. ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ. ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ. ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ. ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ. ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ. ನಿಶ್ಚಯವಾಗಿ ಪಕ್ಷಿಯ ಕಣ್ಣೆದುರಿಗೆ ಬಲೆಯನ್ನು ಹರಡುವದು ವ್ಯರ್ಥವೇ. ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ. ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
- Micah 7:3 ಮೀಕ 7:3ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
- Matthew 23:30 ಮತ್ತಾಯನು 23:30ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ.