Psalms · chapter 50 · verse 3
Psalm 50:3 in Kannada
ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.
Namma devaru baruttaane, maunavaagiranu; benkiyu aatana munde dahisuvadu; adu aatana suttalu dodda birugaaliyantiruvadu.
Psalm 50:3 in English
- King James Version (KJV)
- Our God shall come, and shall not keep silence: a fire shall devour before him, and it shall be very tempestuous round about him.
- World English Bible (WEB)
- Our God comes, and does not keep silent. A fire devours before him. It is very stormy around him.
- American Standard Version (ASV)
- Our God cometh, and doth not keep silence: A fire devoureth before him, And it is very tempestuous round about him.
- Bible in Basic English (BBE)
- Our God will come, and will not keep quiet; with fire burning before him, and storm-winds round him.
- Darby Translation (DBY)
- Our God will come, and will not keep silence: fire shall devour before him, and it shall be very tempestuous round about him.
- Webster's Bible (WBS)
- Our God shall come, and shall not keep silence: a fire shall devour before him, and it shall be very tempestuous around him.
- Young's Literal Translation (YLT)
- Our God cometh, and is not silent, Fire before Him doth devour, And round about him it hath been very tempestuous.
Read in context
- 1ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ.
- 2ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.
- 3ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.
- 4ತನ್ನ ಜನರಿಗೆ ನ್ಯಾಯ ತೀರಿಸುವದಕ್ಕೆ ಮೇಲಿನಿಂದ ಆಕಾಶಗಳನ್ನೂ ಭೂಮಿ ಯನ್ನೂ ಕರೆಯುತ್ತಾನೆ.
- 5ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.
Cross references
- Numbers 16:35 ಅರಣ್ಯಕಾಂಡ 16:35ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
- Daniel 7:10 ದಾನಿಯೇಲನು 7:10ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
- Leviticus 10:2 ಯಾಜಕಕಾಂಡ 10:2ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು.
- Matthew 3:12 ಮತ್ತಾಯನು 3:12ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
- Psalm 97:3–5 ಕೀರ್ತನೆಗಳು 97:3–5ಬೆಂಕಿಯು ಆತನ ಮುಂದೆ ಹೋಗಿ ಆತನ ವೈರಿಗಳನ್ನು ಸುತ್ತಲೂ ದಹಿಸುವದು. ಆತನ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ನೋಡಿ, ನಡುಗುತ್ತದೆ. ಕರ್ತನ ಸನ್ನಿಧಿಯಲ್ಲಿ ಸಮಸ್ತ ಭೂಮಿಯು ಕರ್ತನ ಮುಂದೆ ಬೆಟ್ಟಗಳು ಮೇಣದ ಹಾಗೆ ಕರಗುತ್ತವೆ.
- Hebrews 12:29 ಇಬ್ರಿಯರಿಗೆ 12:29ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- Malachi 4:1 ಮಲಾಕಿಯ 4:1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 2 Thessalonians 1:8–9 2 ಥೆಸಲೊನೀಕದವರಿಗೆ 1:8–9ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ; ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.
- Psalm 48:14 ಕೀರ್ತನೆಗಳು 48:14ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
- Deuteronomy 9:3 ಧರ್ಮೋಪದೇಶಕಾಂಡ 9:3ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ.
- Psalm 18:7–15 ಕೀರ್ತನೆಗಳು 18:7–15ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು; ಆತನ ಮೂಗಿನಿಂದ ಹೊಗೆ ಎದ್ದು ಆತನ ಬಾಯಿಯೊಳಗಿಂದ ಬೆಂಕಿ ದಹಿಸಿತು; ಕೆಂಡಗಳು ಅದರಿಂದ ಉರಿದವು. ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು. ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು. ಕತ್ತಲನ್ನು ತನಗೆ ಮರೆಯ ಸ್ಥಳವಾಗಿ ಯೂ ಕತ್ತಲಿನ ನೀರುಗಳನ್ನು ಆಕಾಶದ ಮಂದವಾದ ಮೋಡಗಳನ್ನು ತನ್ನ ಸುತ್ತಲು ಡೇರೆಯಾಗಿಯೂ ಮಾಡಿ ದನು. ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು. ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು. ಓ ಕರ್ತನೇ, ನಿನ್ನ ಗದರಿಕೆಯಿಂದಲೂ ನಿನ್ನ ಮೂಗಿನ ಶ್ವಾಸದ ಗಾಳಿಯಿಂದಲೂ ನೀರಿನ ಕಾಲುವೆಗಳ ನೆಲೆಯು ಕಾಣಬಂದು ಭೂಮಿಯ ಅಸ್ತಿವಾರಗಳು ಬೈಲಾದವು.
- Psalm 68:20 ಕೀರ್ತನೆಗಳು 68:20ನಮ್ಮ ದೇವರು ರಕ್ಷಣೆಯ ದೇವರಾಗಿದ್ದಾನೆ; ನಮ್ಮ ಕರ್ತನಾದ ದೇವರು ಮರಣದಿಂದ ತಪ್ಪಿಸಲು ಶಕ್ತನಾಗಿದ್ದಾನೆ.