Psalms · chapter 50 · verse 6
Psalm 50:6 in Kannada
ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ.
Aakaashagalu aatana neeti yannu prakatisuttave; devaru taane nyaayaadhi patiyaagiddaane. Selaa.
Psalm 50:6 in English
- King James Version (KJV)
- And the heavens shall declare his righteousness: for God [is] judge himself. Selah.
- World English Bible (WEB)
- The heavens shall declare his righteousness, for God himself is judge. Selah.
- American Standard Version (ASV)
- And the heavens shall declare his righteousness; For God is judge himself. [Selah
- Bible in Basic English (BBE)
- And let the heavens make clear his righteousness; for God himself is the judge. (Selah.)
- Darby Translation (DBY)
- And the heavens shall declare his righteousness; for God executeth judgment himself. Selah.
- Webster's Bible (WBS)
- And the heavens shall declare his righteousness: for God [is] judge himself. Selah.
- Young's Literal Translation (YLT)
- And the heavens declare His righteousness, For God Himself [is] judge. Selah.
Read in context
- 4ತನ್ನ ಜನರಿಗೆ ನ್ಯಾಯ ತೀರಿಸುವದಕ್ಕೆ ಮೇಲಿನಿಂದ ಆಕಾಶಗಳನ್ನೂ ಭೂಮಿ ಯನ್ನೂ ಕರೆಯುತ್ತಾನೆ.
- 5ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.
- 6ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ.
- 7ಓ ನನ್ನ ಜನರೇ, ಕೇಳಿರಿ, ನಾನು ನುಡಿಯುವೆನು; ಓ ಇಸ್ರಾಯೇಲೇ, ನಿನಗೆ ವಿರೋಧವಾಗಿ ನಾನು ಸಾಕ್ಷಿಕೊಡುವೆನು; ನಾನು ದೇವರು, ಹೌದು ನಿನ್ನ ದೇವರು ನಾನೇ.
- 8ನಿನ್ನ ಬಲಿಗಳಿಗೋಸ್ಕರ ಇಲ್ಲವೆ ನಿನ್ನ ದಹನಬಲಿಗೋಸ್ಕರ ನಾನು ನಿನ್ನನ್ನು ಗದರಿಸುವ ದಿಲ್ಲ; ಅವು ಯಾವಾಗಲೂ ನನ್ನ ಮುಂದೆ ಇವೆ.
Cross references
- Psalm 97:6 ಕೀರ್ತನೆಗಳು 97:6ಆಕಾಶಗಳು ಆತನ ನೀತಿಯನ್ನು ತಿಳಿಸುತ್ತವೆ; ಎಲ್ಲಾ ಜನಗಳು ಆತನ ಘನವನ್ನು ನೋಡುತ್ತಾರೆ.
- Psalm 89:5 ಕೀರ್ತನೆಗಳು 89:5ಇದಲ್ಲದೆ, ಆಕಾಶಗಳು ಓ ಕರ್ತನೇ, ನಿನ್ನ ಅದ್ಭುತಗಳನ್ನು ಪರಿಶುದ್ಧರ ಸಭೆಯಲ್ಲಿ ನಿನ್ನ ನಂಬಿಗಸ್ತಿಕೆಯನ್ನು ಸಹ ಕೊಂಡಾಡುವವು.
- Psalm 75:7 ಕೀರ್ತನೆಗಳು 75:7ಆದರೆ ದೇವರು ನ್ಯಾಯತೀರಿಸುವಾ ತನಾಗಿದ್ದಾನೆ; ಒಬ್ಬನನ್ನು ತಗ್ಗಿಸುತ್ತಾನೆ; ಇನ್ನೊಬ್ಬನನ್ನು ಎತ್ತುತ್ತಾನೆ.
- Revelation 19:2 ಪ್ರಕಟನೆ 19:2ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
- Romans 14:9–12 ರೋಮಾಪುರದವರಿಗೆ 14:9–12ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು. ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ. ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ. ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು.
- Psalm 9:16 ಕೀರ್ತನೆಗಳು 9:16ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
- Revelation 20:11–12 ಪ್ರಕಟನೆ 20:11–12ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು. ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
- Psalm 7:3–5 ಕೀರ್ತನೆಗಳು 7:3–5ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ, ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ, ವೈರಿಯು ನನ್ನ ಪ್ರಾಣ ವನ್ನು ಹಿಡಿದು ಹಿಂಸಿಸಿ ನನ್ನ ಜೀವವನ್ನು ಭೂಮಿಗೆ ತುಳಿದು ನನ್ನ ಗೌರವವನ್ನು ಧೂಳಿನೊಳಗೆ ಹಾಕಿ ಬಿಡಲಿ--ಸೆಲಾ.
- 2 Corinthians 5:10 2 ಕೊರಿಂಥದವರಿಗೆ 5:10ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
- Genesis 18:25 ಆದಿಕಾಂಡ 18:25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
- Romans 2:5 ರೋಮಾಪುರದವರಿಗೆ 2:5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- John 5:22–23 ಯೋಹಾನನು 5:22–23ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ; ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.