Psalms · chapter 50 · verse 8
Psalm 50:8 in Kannada
ನಿನ್ನ ಬಲಿಗಳಿಗೋಸ್ಕರ ಇಲ್ಲವೆ ನಿನ್ನ ದಹನಬಲಿಗೋಸ್ಕರ ನಾನು ನಿನ್ನನ್ನು ಗದರಿಸುವ ದಿಲ್ಲ; ಅವು ಯಾವಾಗಲೂ ನನ್ನ ಮುಂದೆ ಇವೆ.
Ninna baligaligoskara illave ninna dahanabaligoskara naanu ninnannu gadarisuva dilla; avu yaavaagaloo nanna munde ive.
Psalm 50:8 in English
- King James Version (KJV)
- I will not reprove thee for thy sacrifices or thy burnt offerings, [to have been] continually before me.
- World English Bible (WEB)
- I don’t rebuke you for your sacrifices. Your burnt offerings are continually before me.
- American Standard Version (ASV)
- I will not reprove thee for thy sacrifices; And thy burnt-offerings are continually before me.
- Bible in Basic English (BBE)
- I will not take up a cause against you because of your offerings, or because of your burned offerings, which are ever before me.
- Darby Translation (DBY)
- I will not reprove thee for thy sacrifices, or thy burnt-offerings, continually before me;
- Webster's Bible (WBS)
- I will not reprove thee for thy sacrifices or thy burnt-offerings, [to have been] continually before me.
- Young's Literal Translation (YLT)
- Not for thy sacrifices do I reprove thee, Yea, thy burnt-offerings [Are] before Me continually.
Read in context
- 6ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ.
- 7ಓ ನನ್ನ ಜನರೇ, ಕೇಳಿರಿ, ನಾನು ನುಡಿಯುವೆನು; ಓ ಇಸ್ರಾಯೇಲೇ, ನಿನಗೆ ವಿರೋಧವಾಗಿ ನಾನು ಸಾಕ್ಷಿಕೊಡುವೆನು; ನಾನು ದೇವರು, ಹೌದು ನಿನ್ನ ದೇವರು ನಾನೇ.
- 8ನಿನ್ನ ಬಲಿಗಳಿಗೋಸ್ಕರ ಇಲ್ಲವೆ ನಿನ್ನ ದಹನಬಲಿಗೋಸ್ಕರ ನಾನು ನಿನ್ನನ್ನು ಗದರಿಸುವ ದಿಲ್ಲ; ಅವು ಯಾವಾಗಲೂ ನನ್ನ ಮುಂದೆ ಇವೆ.
- 9ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು.
- 10ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ.
Cross references
- Hosea 6:6 ಹೋಶೇಯ 6:6ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.
- Hebrews 10:4–10 ಇಬ್ರಿಯರಿಗೆ 10:4–10ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ. ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ; ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ; ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ. ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ. ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ. ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.
- Isaiah 1:11–31 ಯೆಶಾಯ 1:11–31ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ. ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು? ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು. ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ. ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ. ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ; ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ. ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು. ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ; ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ. ನಂಬಿಗಸ್ತಿಕೆಯ ಪಟ್ಟಣವು ಸೂಳೆಯಂತಾದ ಳಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆ ಯಾಗಿತ್ತು; ಆದರೆ ಈಗ ಕೊಲೆಗಾರರಿಂದ ತುಂಬಿದೆ. ನಿನ್ನ ಬೆಳ್ಳಿಯು ಕಂದಾಯಿತು, ನಿನ್ನ ದ್ರಾಕ್ಷಾರಸವು ನೀರಿನೊಂದಿಗೆ ಬೆರಿಕೆಯಾಯಿತು. ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ. ಆದದರಿಂದ ಸೈನ್ಯಗಳ ಕರ್ತನೂ ಇಸ್ರಾಯೇಲಿನ ಪರಾಕ್ರಮಿಯೂ ಆದ ಕರ್ತನು ಹೇಳುವದೇನಂದರೆ ಹಾ, ನನ್ನ ವಿರೋಧಿಗಳಿಂದ ನಾನು ಶಾಂತನಾಗಿರು ವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು. ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ ಮಲಿನವನ್ನು ಸ್ವಚ್ಚವಾಗಿ ಶುದ್ಧಮಾಡಿ ನಿನ್ನ ಎಲ್ಲಾ ಕಲ್ಮಷವನ್ನು ತೆಗೆದು ಬಿಡುವೆನು. ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ. ಚೀಯೋನು ನ್ಯಾಯತೀರ್ಪಿನಿಂದಲೂ ಅವಳ ಪರಿವರ್ತನೆಯನ್ನು ಹೊಂದಿದವರು ನೀತಿಯಿಂದಲೂ ಬಿಡುಗಡೆಯಾಗುವರು ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಕರ್ತ ನನ್ನು ತೊರೆದವರು ದಹಿಸಲ್ಪಡುವರು. ನೀವು ಇಷ್ಟ ಪಟ್ಟ ಏಲಾಮರಗಳ ನಿಮಿತ್ತ ನಾಚಿಕೊಳ್ಳುವರು, ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ. ನೀವು ಎಲೆ ಬಾಡಿದ ಏಲಾಮರದಂತೆಯೂ ನೀರಿಲ್ಲದ ತೋಟದಂತೆಯೂ ಇರುವಿರಿ.ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ನಾರು, ಅದನ್ನು ಮಾಡುವವನು ಕಿಡಿ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು. ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ನಾರು, ಅದನ್ನು ಮಾಡುವವನು ಕಿಡಿ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.
- Psalm 40:6–8 ಕೀರ್ತನೆಗಳು 40:6–8ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ; ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ. ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
- Psalm 51:16 ಕೀರ್ತನೆಗಳು 51:16ಯಜ್ಞ ವನ್ನು ನೀನು ಇಷ್ಟಪಡುದಿಲ್ಲ. ಇಲ್ಲವಾದರೆ ನಾನು ಅದನ್ನು ಕೊಡುತ್ತಿದ್ದೆನು. ದಹನಬಲಿಯಲ್ಲಿ ನೀನು ಸಂತೋಷಪಡುವದಿಲ್ಲ.
- Jeremiah 7:21–23 ಯೆರೆಮೀಯ 7:21–23ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ. ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ. ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.