Psalms · chapter 51 · verse 10
Psalm 51:10 in Kannada
ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.
O devare, shuddhahrudayavannu nannalli srushtisu, sthiravaada aatmavannu nanna antarangadalli nootanapadisu.
Psalm 51:10 in English
- King James Version (KJV)
- Create in me a clean heart, O God; and renew a right spirit within me.
- World English Bible (WEB)
- Create in me a clean heart, O God. Renew a right spirit within me.
- American Standard Version (ASV)
- Create in me a clean heart, O God; And renew a right spirit within me.
- Bible in Basic English (BBE)
- Make a clean heart in me, O God; give me a right spirit again.
- Darby Translation (DBY)
- Create in me a clean heart, O God, and renew a steadfast spirit within me.
- Webster's Bible (WBS)
- Create in me a clean heart, O God; and renew a right spirit within me.
- Young's Literal Translation (YLT)
- A clean heart prepare for me, O God, And a right spirit renew within me.
Read in context
- 8ನಾನು ಉತ್ಸಾಹವನ್ನೂ ಸಂತೋಷವನ್ನೂ ಕೇಳುವ ಹಾಗೆ ಮಾಡು. ಆಗ ನನ್ನ ಮುರಿದ ಎಲುಬುಗಳು ಆನಂದಿಸುವವು.
- 9ನನ್ನ ಪಾಪಗಳನ್ನು ನೋಡದಂತೆ ನೀನು ವಿಮುಖನಾಗು; ನನ್ನ ಅಕ್ರಮಗಳನ್ನೆಲ್ಲಾ ಅಳಿಸಿ ಬಿಡು.
- 10ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.
- 11ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ.
- 12ನಿನ್ನ ರಕ್ಷಣೆಯ ಆನಂದವನ್ನು ನನಗೆ ತಿರುಗಿಕೊಡು; ನಿನ್ನ ಸಿದ್ಧಮನಸ್ಸಿನಿಂದ ನನ್ನನ್ನು ಮೇಲೆತ್ತು.
Cross references
- Ezekiel 11:19 ಯೆಹೆಜ್ಕೇಲನು 11:19ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು.
- 2 Corinthians 5:17 2 ಕೊರಿಂಥದವರಿಗೆ 5:17ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
- Ephesians 4:22–24 ಎಫೆಸದವರಿಗೆ 4:22–24ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು. ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
- Matthew 5:8 ಮತ್ತಾಯನು 5:8ಶುದ್ಧ ಹೃದಯವುಳ್ಳವರು ಧನ್ಯರು; ಯಾಕಂದರೆ ಅವರು ದೇವರನ್ನು ನೋಡುವರು.
- Ezekiel 18:31 ಯೆಹೆಜ್ಕೇಲನು 18:31ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
- Romans 12:2 ರೋಮಾಪುರದವರಿಗೆ 12:2ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
- Ezekiel 36:25–27 ಯೆಹೆಜ್ಕೇಲನು 36:25–27ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು. ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- Acts 15:9 ಅಪೊಸ್ತಲರ ಕೃತ್ಯಗಳು 15:9ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
- Titus 3:5 ತೀತನಿಗೆ 3:5ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
- Jeremiah 32:39 ಯೆರೆಮೀಯ 32:39ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.
- 1 Peter 1:22 1 ಪೇತ್ರನು 1:22ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
- Proverbs 20:9 ಜ್ಞಾನೋಕ್ತಿಗಳು 20:9ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪದಿಂದ ನಾನು ಶುದ್ಧನು ಎಂದು ಯಾರು ಹೇಳಬಲ್ಲರು?